ಪುನೀತ್ ರಾಜಕುಮಾರ್‌ಗೆ ವಿಶಿಷ್ಟವಾಗಿ ಜನ್ಮದಿನದ ಶುಭಾಶಯ ತಿಳಿಸಿದ ಜನಾರ್ದನ ರೆಡ್ಡಿ
ಬೆಂಗಳೂರು, ಮಾರ್ಚ್ 17: ಇಂದು ಡಾ.ರಾಜಕುಮಾರ್ ಅವರ ಪುತ್ರ ಹಾಗೂ ಚಿತ್ರನಟ ಪುನೀತ್ ರಾಜಕುಮಾರ್ ಅವರ ಜನ್ಮದಿನವಾಗಿದ್ದು, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಪುನೀತ್ ರಾಜ್‌ಕುಮಾರ್‌ಗೆ ವಿಶಿಷ್ಟವಾಗಿ ಶುಭಾಶಯ ತಿಳಿಸಿದ್ದಾರೆ.
"ನಾಯಕ ನಟ, ಸಹೋದರ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಕನ್ನಡ ಚಲನಚಿತ್ರ ರಂಗದ ಜನಪ್ರಿಯ ನಾಯಕ ನಟ, ನಿರ್ಮಾಪಕ, ಗಾಯಕ ಹಾಗೂ ಪವರ್ ಸ್ಟಾರ್ ಎಂದೇ ಖ್ಯಾತರಾದ ಪುನೀತ್ ರಾಜಕುಮಾರ್ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ'' ಎಂದು ತಮ್ಮ ಪೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.
ಪುನೀತ್ ರಾಜಕುಮಾರ್ ಅವರು ಆರು ತಿಂಗಳ ಮಗುವಿದ್ದಾಗ 1976ರಲ್ಲಿ ಬಾಲ ಕಲಾವಿದರಾಗಿ "ಪ್ರೇಮದ ಕಾಣಿಕೆ' ಚಿತ್ರದ ಮೂಲಕ ತೆರೆಯ ಮೇಲೆ ಕಾಣಿಸಿಕೊಂಡ ಇವರು, ಕನ್ನಡ ಚಿತ್ರರಂಗದಲ್ಲಿ ನಾಯಕ ನಟರಾಗಿ ತಮ್ಮ ಎರಡನೇ ಇನಿಂಗ್ಸ್ ಆರಂಭಿಸಿದ್ದು, 2002ರಲ್ಲಿ ತೆರೆ ಕಂಡ 'ಅಪ್ಪು' ಚಿತ್ರದ ಮೂಲಕ.

ಈ ಚಿತ್ರ ಅದ್ಧೂರಿ ಯಶಸ್ಸು ಕಂಡಿತು. ಇದಾದ ನಂತರ ತೆರೆಗೆ ಬಂದ ಇವರ ಹಲವಾರು ಚಿತ್ರಗಳು ಅದ್ಧೂರಿ ಪ್ರದರ್ಶನ ಕಂಡು ದಾಖಲೆ ಬರೆದಿವೆ. ನಾಯಕ ನಟರಾದ ಪುನೀತ್ ರಾಜಕುಮಾರ್ ಅವರು ಎರಡು ರಾಜ್ಯ ಪ್ರಶಸ್ತಿ, ನಾಲ್ಕು ಫಿಲ್ಮಫೇರ್, ಎರಡು ಸೈಮಾ ಸೇರಿದಂತೆ ಹೀಗೆ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
ಚಿತ್ರರಂಗದಲ್ಲಿ ಬಾಲ ನಟನಾಗಿ ಹಾಗೂ ನಾಯಕ ನಟನಾಗಿ ಇವರು 38 ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ ಪಿ.ಆರ್.ಕೆ ಸಂಸ್ಥೆಯ ಮೂಲಕ ಯುವ ನಟರಿಗೆ ಅವಕಾಶಗಳನ್ನು ನೀಡುವ ಮೂಲಕ ಪ್ರೋತ್ಸಾಹ ನೀಡುತ್ತಿರುವ ಇವರ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಜನಾರ್ಧನ್ ರೆಡ್ಡಿ ಹೇಳಿದ್ದಾರೆ.
ನಾನು ಸಚಿವನಾಗಿದ್ದ ಸಂದರ್ಭದಲ್ಲಿ ನಡೆದ ವಿಶ್ವವಿಖ್ಯಾತ ಹಂಪಿ ಉತ್ಸವದಲ್ಲಿ, ಪುನೀತ್ ರಾಜಕುಮಾರ್ ಅವರೊಂದಿಗೆ ವೇದಿಕೆ ಹಂಚಿಕೊಂಡಿರುವ ನೆನಪು ನನ್ನಲ್ಲಿ ಅಚ್ಚಳಿಯದೆ ಉಳಿದಿದೆ.
ಕಿರುತೆರೆಯಲ್ಲಿ ನಿರೂಪಕರಾಗಿ ಕನ್ನಡದ ಕೋಟ್ಯಾಧಿಪತಿಯ ಹಲವು ಸೀಸನ್‌ಗಳನ್ನು ಹಾಗೂ ಫ್ಯಾಮಿಲಿ ಪವರ್ ಎಂಬ ರಿಯಾಲಿಟಿ ಶೋಗಳಲ್ಲಿ ನಿರೂಪಣೆ ಮಾಡುವ ಮೂಲಕ ಕನ್ನಡಿಗರ ಮನೆಮಾತಾಗಿರುವ ಪುನೀತ್ ರಾಜಕುಮಾರ್ ಅವರು, ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಚಿತ್ರಗಳನ್ನು ನಿರ್ಮಿಸಿ, ಇನ್ನೂ ಹೆಚ್ಚಿನ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದ್ದಾರೆ.
Recommended Video
ಆ ಭಗವಂತನು ಪುನೀತ್ ರಾಜ್‌ಕುಮಾರ್ ಅವರಿಗೆ ಉತ್ತಮ ಆರೋಗ್ಯ, ಹೆಚ್ಚಿನ ಆಯುಷ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತಾ, ಮತ್ತೊಮ್ಮೆ ಸಹೋದರ ಪುನೀತ್ ರಾಜಕುಮಾರ್ ಅವರಿಗೆ ಜನ್ಮ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹಾರೈಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications