Darshan case: SPP ಬದಲಿಸುವಂತೆ ಸರ್ಕಾರದ ಮೇಲೆ ಒತ್ತಡ ಬರುತ್ತಿದೆಯಾ? ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರು, ಜೂನ್ 19: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರ ಬದಲಾವಣೆಯ ಬಗ್ಗೆ ಒಂದಷ್ಟು ಮಾತುಗಳು ಕೇಳಿ ಬರುತ್ತಿವೆ. ಈ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಸ್ಪಷ್ಟನೆ ನೀಡಿ ಗೊಂದಲ ಬಗೆಹರಿಸಿದ್ದಾರೆ.
ನಟ ದರ್ಶನ್ ಬಂಧನ ಕೊಲೆ ಪ್ರಕರಣದಲ್ಲಿ ಮೃತ ರೇಣುಕಾಸ್ವಾಮಿ ಪರ ರಾಜ್ಯ ಸರ್ಕಾರವೇ ವಿಶೇಷ ಅಭಿಯೋಜಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಕೇಸನ್ನು ಗಂಭೀರವಾಗಿ ಪರಿಗಣಿಸಿದ್ದನ್ನು ಖಚಿತಪಡಿಸಿದೆ. ಎಸ್‌ಪಿಪಿ ಆಗಿ ನೇಮಕವಾದ ಪಿ.ಪ್ರಸನ್ನ ಕುಮಾರ್ ಅವರು ಯಾರು ಮಾತು ಕೇಳುವುದಿಲ್ಲ. ಕಾನೂನಿನಂತೆ ನಡೆದುಕೊಳ್ಳವು, ಇಡಿ, ಐಟಿ ಇಲಾಖೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಮರ್ಥವಾಗಿ ವಾದ ಮಾಡಿದ ಹಿರಿಯ ವಕೀಲರಾಗಿದ್ದಾರೆ.

ಇದೀಗ ಇವರನ್ನು ಬದಲಾಯಿಸಬೇಕು ಎಂಬ ಆಗ್ರಹ ಹೆಚ್ಚಾಗಿದೆ. ಇದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಸಚಿವ ಜಿ.ಪರಮೇಶ್ವರ ಅವರು, ಸರ್ಕಾರಿ ಅಭಿಯೋಜಕರ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಪ್ರಕರಣ ತನಿಖೆ ಸಡಿಲಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಅವರ ಎಂದು ಸ್ಪಷ್ಟಪಡಿಸಿದ್ದಾರೆ.
ಕಾನೂನು ಸಲಹೆ ಮೇರೆಗೆ ನಿರ್ಧಾರ
ಕಾನೂನು ಸಲಹೆಗಾರರು ಏನೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಎಲ್ಲರು ಸ್ಟ್ರಿಕ್ಟ್ ಆಗಿಯೇ ಇರಬೇಕಲ್ಲವೇ? ಕಾನೂನು ಬಿಟ್ಟು ಯಾರು ಕೆಲಸ ಮಾಡಲಾಗುವುದಿಲ್ಲ. ಕಾನೂನು ಪ್ರಕಾರವೇ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಕೆಲಸ ಮಾಡಬೇಕು. ಯಾರನ್ನೇ ನೇಮಿಸಿದರು ಸಹ ಕಾನೂನು ಪುಸ್ತಕ ಒಂದೇ ಅಲ್ಲವೇ? ಅದರ ಪ್ರಕಾರವೇ ಕೆಲಸ ಮಾಡಬೇಕಾಗುತ್ತದೆ ಎಂದರು.
ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಬದಲಾವಣೆ ಮಾಡಿದರು ಸಹ ಅದರಲ್ಲೇನು ತಪ್ಪಿಲ್ಲ. ಕಾರಣ ಇಟ್ಟುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.
ಒತ್ತಡ ಇಲ್ಲದೇ ತನಿಖೆ ಸಾಗುತ್ತಿದೆ
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ. ಮುಲಾಜಿಲ್ಲದೇ, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಪ್ರಕರಣದ ತನಿಖೆ ನಡೆಯುತ್ತಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಅವರನ್ನು ಬದಲಾಯಿಸುವ ಸಂದರ್ಭ ಬಂದರೆ ಕಾರಣ ಇರುತ್ತದೆ. ಇಲ್ಲದೇ ಮಾಡುವುದಿಲ್ಲ ಎಂದು ಹೇಳಿದರು.
ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕಾದರೆ ನೀಡಲಾಗುವುದು.

ಸಂಬಂಧ ಇದ್ದಲ್ಲಿ ಶ್ರೀಧರ್ ಆತ್ಮಹತ್ಯೆ ತನಿಖೆ
ದರ್ಶನ್ ಮಾಜಿ ಮ್ಯಾನೇಜರ್ ಶ್ರೀಧರ್ ಎಂಬುವನ ಆತ್ಮಹತ್ಯೆ ಪ್ರಕಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದರ್ಶನ್ ಪ್ರಕರಣಕ್ಕು ಶ್ರೀಧರ್ ಎಂಬುವರ ಆತ್ಮಹತ್ಯೆಗು ಸಂಬಂಧ ಇದ್ದರೆ ತನಿಖೆ ಮಾಡುತ್ತಾರೆ. ಪ್ರತ್ಯೇಕವಾಗಿ ತನಿಖೆ ನಡೆಸಬೇಕು ಅಂತ ಸರ್ಕಾರವನ್ನು ಕೇಳುತ್ತಾರೆ. ಕಾರಣಗಳನ್ನು ಆಧರಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಮರುತನಿಖೆ ನಡೆಸಲು ಅನುಮತಿ ಕೇಳಿದರೆ ನೀಡಲಾಗುವುದು ಎಂದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯವರು ರಸ್ತೆ ತಡೆ, ಸಿಎಂ ಅವರಿಗೆ ಘೇರಾವ್ ಹಾಕಲು ನಿರ್ಧರಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಇದಕ್ಕೆ ಏನೇನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಸ್ತೆ ತಡೆ ನಡೆಸಲು ಕೆಲವು ಸಲ ಪೊಲೀಸರು ಅರ್ಧ ಗಂಟೆ ಅನುಮತಿ ಕೊಡುತ್ತಾರೆ. ಆ ರೀತಿ ಅನುಮತಿ ಕೊಟ್ಟಿದ್ದರೆ ಸಮಂಜಸವಾಗಿರುತ್ತದೆ. ರಸ್ತೆ ತಡೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅದರ ಹಿನ್ನೆಲೆಯಲ್ಲಿ ಏನೆಲ್ಲ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಬಿಜೆಪಿಗೆ ಗೃಹ ಸಚಿವರ ಎಚ್ಚರಿಕೆ
ಬಿಜೆಪಿ ಪ್ರತಿಭಟನೆ ಮಾಡುವುದಕ್ಕೆ ಬೇಡ ಅಂತ ಹೇಳುವುದಿಲ್ಲ. ಅದು ಅವರ ಹಕ್ಕು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಮಾಡಲಿ. ಈಗಾಗಲೇ ಫ್ರೀಡಂಪಾರ್ಕ್‌ನಲ್ಲಿ, ಪ್ರತಿ ಜಿಲ್ಲೆಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ಮತ್ತೆ ರಸ್ತೆಗೆ ಇಳಿಯುತ್ತೇವೆ ಎಂದರೆ ಏನು ಮಾಡಬೇಕು ಮಾಡುತ್ತೇವೆ ಎಂದು ತಿಳಿಸಿದರು.
ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ತೀರ್ಮಾನ ಮಾಡಿ, ಈಗಾಗಲೇ ಪ್ರಕಟಣೆ ಹೊರಡಿಸಿದೆ. ಜನ ಹಣ ಪಾವತಿಸುತ್ತಿದ್ದಾರೆ. ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇರುವುದರಿಂದ ಪಕ್ಕದ ರಾಜ್ಯದವರು ಸಹ ಇಲ್ಲಿಗೆ ಬಂದು ತೆಗೆದುಕೊಂಡು ಹೋಗುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡುವ ಪ್ರಶ್ನೆ ಬರುವುದಿಲ್ಲ ಎಂದು ಸರ್ಕಾರದ ನಡೆ ಸಮರ್ಥಿಸಿಕೊಂಡರು.
-
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್ -
Donald Trump: ಹಾರ್ಮುಜ್ ಜಲಸಂಧಿ ವಿಚಾರದಲ್ಲಿ ಇರಾನ್ ಕಳಪೆ ಕೆಲಸ ಮಾಡಿದೆ: ಡೊನಾಲ್ಡ್ ಟ್ರಂಪ್ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
Gold Rate April 8: ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ












Click it and Unblock the Notifications