ಇಂದಿರಾ ಕ್ಯಾಂಟೀನ್‌ನಲ್ಲಿ ಇಡ್ಲಿ ಸವಿದ ಜಿ.ಪರಮೇಶ್ವರ
Recommended Video

ಬೆಂಗಳೂರು, ಸೆಪ್ಟೆಂಬರ್ 05 : ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಇಂದಿರಾ ಕ್ಯಾಂಟೀನ್‌ನಲ್ಲಿ ಇಡ್ಲಿ ಸವಿದರು. 'ಬಡವರು ಕ್ಯಾಂಟೀನ್ ಉಪಯೋಗ ಪಡೆಯುತ್ತಿದ್ದಾರೆ, ರಾಜ್ಯಾದ್ಯಂತ ಕ್ಯಾಂಟೀನ್ ಆರಂಭಿಸಲು ಉತ್ತೇಜನ ಸಿಕ್ಕಿದೆ' ಎಂದು ಹೇಳಿದರು.
ಮಂಗಳವಾರ ಬೆಂಗಳೂರಿನ ನ್ಯೂ ಬಿಇಎಲ್ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಪರಮೇಶ್ವರ ಅವರು ಇಡ್ಲಿ ಸವಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್.ಟಿ.ಸೋಮಶೇಖರ್, ಮುನಿರತ್ನ, ಬೈರತಿ ಸುರೇಶ್ ಸೇರಿದಂತೆ ಹಲವು ನಾಯಕರು ಜೊತೆಗಿದ್ದರು.

ಇಡ್ಲಿ ಸವಿಯುತ್ತಾ ಜನರೊಂದಿಗೆ ಮಾತುಕತೆ ನಡೆಸಿದ ಪರಮೇಶ್ವರ ಅವರು ಇಂದಿರಾ ಕ್ಯಾಂಟೀನ್‌ನಲ್ಲಿಯ ಆಹಾರದ ಗುಣಮಟ್ಟದ ಬಗ್ಗೆ ಚರ್ಚೆ ನಡೆಸಿದರು. ಕ್ಯಾಂಟೀನ್ ವ್ಯವಸ್ಥೆಗಳ ಬಗ್ಗೆ ಜನರಿಂದ ಮಾಹಿತಿ ಪಡೆದರು.
ನಂತರ ಮಾತನಾಡಿದ ಪರಮೇಶ್ವರ ಅವರು, 'ನಮ್ಮ ಸರ್ಕಾರದ ಅನ್ನಭಾಗ್ಯ ಯೋಜನೆಯಂತೆ ಇದು ಕೂಡಾ ಬಡವರಿಗೆ ಅನುಕೂಲ ಮಾಡಿಕೊಡುವ ಯೋಜನೆಯಾಗಿದೆ. ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟ ಪರೀಕ್ಷಿಸಿದ್ದೇನೆ' ಎಂದರು.
'ಬಡವರು ಉತ್ತಮ ರೀತಿಯಲ್ಲಿ ಇಂದಿರಾ ಕ್ಯಾಂಟೀನ್ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಕ್ಯಾಂಟೀನ್ ಆರಂಭಿಸಲು ನಮಗೆ ಉತ್ತೇಜನ ಸಿಕ್ಕಿದೆ' ಎಂದು ಹೇಳಿದರು.
ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಗೆ ಆ.16ರಂದು ಬೆಂಗಳೂರಿನಲ್ಲಿ ಚಾಲನೆ ಸಿಕ್ಕಿದೆ. ಎಲ್ಲಾ ವಾರ್ಡ್‌ಗಳಲ್ಲಿ ಕ್ಯಾಂಟೀನ್ ನಿರ್ಮಾಣವಾಗಲಿದೆ. ಸದ್ಯ, 101 ಕ್ಯಾಂಟೀನ್‌ಗಳು ನಿರ್ಮಾಣಗೊಂಡಿವೆ.












Click it and Unblock the Notifications