ಮೈಸೂರು ಗಲಾಟೆ: ಗೃಹ ಸಚಿವ ಜಿ.ಪರಮೇಶ್ವರ್ ಫಸ್ಟ್ ರಿಯಾಕ್ಷನ್
ಮೈಸೂರು, ಫೆಬ್ರವರಿ 11: ಅರಮನೆ ನಗರಿ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಲಾಗಿದೆ. ಪೊಲೀಸ್ ಸಿಬ್ಬಂದಿಗೆ ಗಾಯವಾಗಿದ್ದು, ವಾಹನಗಳು ಜಖಂಗೊಂಡಿವೆ. ಈ ಗಲಾಟೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತ ಸೂಚಿಸಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿದರು.
ಮಂಗಳವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಷಿಯಲ್ ಮಿಡೀಯಾದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಒಂದು ಸಮುದಾಯವನ್ನು ಕೆರಳಿಸಿದೆ. ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು. ಆತನನ್ನು ವಶಕ್ಕೆ ನೀಡುವಂತೆ ಇನ್ನೂರು ಜನ ಠಾಣೆ ಬಳಿ ಬಂದು ಆರೋಪಿಯನ್ನು ಗಲಾಟೆ ಮಾಡಿ, ಕಲ್ಲು ತೂರಿದ್ದಾರೆ. ಆಗ ಪೊಲೀಸರು ಅಶ್ರುವಾಯು ಸಿಡಿಸಿ, ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಕಲ್ಲು ತೂರಾಟ ನಡೆಸಿ ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಘಟನೆಯಲ್ಲಿ ಯಾರದ್ದು ತಪ್ಪು, ಯಾರದ್ದು ಸರಿ ಎಂಬುದನ್ನು ನಾವು ನಿರ್ಧಾರ ಮಾಡಲು ಆಗುವುದಿಲ್ಲ. ಪೊಲೀಸರು ಕಾನೂನು ಪ್ರಕಾರ ಮಾಡಿರುತ್ತಾರೆ. ತಪ್ಪು ಮಾಡಿದ್ದರೆ ಪೊಲೀಸರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ. ಅನೇಕ ಸಂದರ್ಭಗಳಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್, ಪಿಎಸ್ಐಗಳನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲು ಕ್ರಮ ಜರುಗಿಸಲಾಗಿದೆ. ಈಗಾಗಲೇ ಕಾನೂನು ಸುವ್ಯವಸ್ಥೆ ಎಡಿಜಿಪಿ ಸ್ಥಳಕ್ಕೆ ಹೋಗಿದ್ದಾರೆ ಎಂದು ಮಾಹಿತಿ ನೀಡಿದರು.
ಆರ್.ಅಶೋಕ್‌ಗೆ ಜಿ.ಪರಮೇಶ್ವರ ಎಚ್ಚರ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅರೋಪಕ್ಕೆ ಪ್ರತಿಕ್ರಿಯಿಸಿ ಸಚಿವರು, ಆರ್. ಅಶೋಕ್ ನೋಡಿಕೊಂಡು ಬರಲಿ. ತದನಂತರ ಏನು ಸಲಹೆ ನೀಡುತ್ತಾರೆ ನೋಡೋಣ. ಮುಸ್ಲಿಮರ ವಿಷಯ ಬಂದಲೆಲ್ಲ ತುಷ್ಟಿಕರಣ ಎಂದು ಹೇಳುತ್ತಾರೆ. ಅವರಿಗೆ ಅದು ಬಿಟ್ಟರೆ ಬೇರೆ ಅಜೆಂಡಾ ಇಲ್ಲ. ಎಲ್ಲ ಸಂದರ್ಭದಲ್ಲಿ ಆ ರೀತಿಯಾಗಿ ಮಾತಾಡುವುದು ಸರಿಯಲ್ಲ ಎಂದು ಎಚ್ಚರಿಸಿದರು.
ಭದ್ರಾವತಿ ಶಾಸಕ ಸಂಗಮೇಶ್ ಅವರ ಪುತ್ರ ಮಹಿಳಾ ಅಧಿಕಾರಿಯೊಬ್ಬರಿಗೆ ಅವಾಚ್ಯವಾಗಿ ನಿಂದಿಸಿರುವ ಕುರಿತು ಪ್ರತಿಕ್ರಿಯಿಸಿ, ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂಬುದು ಗೊತ್ತಿದೆ. ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದರೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಾರೆ. ಎಲ್ಲದಕ್ಕು ಸರ್ಕಾರ ಸೂಚನೆಗಳನ್ನು ನೀಡುವುದಿಲ್ಲ ಎಂದು ಹೇಳಿದರು.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್.ರಾಜಣ್ಣ ಅವರು ದೆಹಲಿಗೆ ಹೋಗಿರುವುದಕ್ಕೆ ನಾನು ಹೇಗೆ ಉತ್ತರ ನೀಡಲಿ. ನಾನು ದೆಹಲಿಗೆ ಹೋಗುವಾಗ ಕೇಳಿ ಹೇಳುತ್ತೇನೆ. ನಾವು ಸಚಿವರಿದ್ದೇವೆ. ಆಗಾಗ್ಗೆ ಭೇಟಿ ಮಾಡುತ್ತೇವೆ. ಸಾರ್ವಜನಿಕವಾಗಿ ಹೇಳಿಕೆ ನೀಡಬೇಡಿ ಎಂದು ಹೈಕಮಾಂಡ್ ಸೂಚಿಸಿದೆ. ಯಾರು ಸಹ ಹೇಳಿಕೆ ನೀಡುತ್ತಿಲ್ಲ ಎಂದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications