Cabinet Reshuffle: ಸಂಪುಟ ಪುನಾರಚರಣೆ, ನಾಯಕತ್ವ ಬದಲಾವಣೆ: ಗೃಹ ಸಚಿವರ ಮಹತ್ವದ ಹೇಳಿಕೆ
ಬೆಂಗಳೂರು, ನವೆಂಬರ್ 20: ಕರ್ನಾಟಕ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸದ್ಯ ಎರಡೂವರೆ ವರ್ಷದ ಅಧಿಕಾರ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಧಿಕಾರ ಹಸ್ತಾಂತರದ ಚರ್ಚೆಗಳು ಮತ್ತೆ ಜೋರಾಗಿವೆ. ಆದರೆ ಈ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದು, ಹೈಕಮಾಂಡ್ ಅಧಿಕಾರ ಹಸ್ತಾಂತರ ಕುರಿತು ಇದುವರೆಗೆ ಏನೂ ತಿಳಿಸಿಲ್ಲ. ಅದಕ್ಕೆ ಮಹತ್ವ ಬರೋದೇ ಹೈಕಮಾಂಡ್ ಹೇಳಿದಾಗ ಮಾತ್ರ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ಪೂರ್ಣಗೊಂಡಿದೆ. ಈ ವಿಚಾರಕ್ಕೆ ರಾಜಕೀಯ ಮಹತ್ವ ನೀಡುವ ಅಗತ್ಯವಿಲ್ಲ. ಹೈಕಮಾಂಡ್ ಯಾವತ್ತಿಗೂ ಅಧಿಕಾರ ಹಸ್ತಾಂತರ ಕುರಿತಂತೆ ನಮಗೆ ಸೂಚನೆ ನೀಡಿಲ್ಲ. CLP ಸಭೆಯಲ್ಲಿಯೂ ಈ ವಿಚಾರ ಪ್ರಸ್ತಾಪವೇ ಆಗಿಲ್ಲ ಎಂದರು.

ನಾವೇಲ್ಲರು ಅಂದುಕೊಂಡರೆ ಏನೂ ಆಗುವುದಿಲ್ಲ. ಹೈಕಮಾಂಡ್ ಏನು ನಿರ್ಧರಿಸುತ್ತಾರೋ ಅದೇ ಅಂತಿಮ ಎನ್ನುವ ಮೂಲಕ ರಾಜ್ಯ ಸರ್ಕಾರದಲ್ಲಿ ಸಿಎಂ ಬದಲಾವಣೆ, ಇತರ ಚರ್ಚೆಗಳಿಗೆ ತೆರೆ ಎಳೆಯಲು ಯತ್ನಿಸಿದರು. ಸಂಪುಟ ಪುನಾರಚನೆ ಅಥವಾ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳಿಗೂ ಇದೇ ಅನ್ವಯವಾಗುತ್ತದೆ ಅಂತಲೂ ತಿಳಿಸಿದರು.
ಭರವಸೆಗಳ ಈಡೇರಿಕೆ ಸಮಾಧಾನವಿದಿಯೇ?
ಚುನಾವಣೆ ವೇಳೆ ನಾವು ಜನತೆಗೆ ಕೊಟ್ಟ ಭರವಸೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಭರವಸೆಗಳನ್ನು ಅಧಿಕಾರಕ್ಕೆ ಬಂದಾಗಿನಿಂದ ಈವರೆಗೆ ಈಡೇರಿಸಿದ್ದೇವೆ. ಮುಂದಿನ ಅವಧಿಯಲ್ಲಿ ಅನಾವಶ್ಯಕ ವೆಚ್ಚ ಕಡಿತ, ಹಣಕಾಸಿನ ಪರಿಷ್ಕರಣೆಗಳಂತಹ ಬದಲಾವಣೆಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಸರಕು ಸೇವಾ ತೆರಿಗೆ (GST) ಹಂಚಿಕೆ ಕಡಿಮೆ ಮಾಡಿರುವುದು, ಕೇಂದ್ರ ಪ್ರಾಯೋಜಿತ ಯೋಜನೆಗಳ ಹಣ ಬಿಡುಗಡೆ ವಿಳಂಬವಾಗಿರುವುದು ರಾಜ್ಯಕ್ಕೆ ತೊಂದರೆ ಉಂಟಾಗಿದೆ ಎಂದು ವಿವರಿಸಿದರು.
ಸಿಎಂ ಸಿದ್ದರಾಮಯ್ಯರಿಂದ 17ನೇ ಬಜೆಟ್ ಮಂಡನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಣಕಾಸು ನಿರ್ವಹಣೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ ಈ ಬಾರಿ ಬಜೆಟ್ ಮಂಡಿಸಿದರೆ ಅದು 17ನೇ ಬಜೆಟ್ ಆಗುತ್ತದೆ ಎಂದು ಪರಮೇಶ್ವರ್ ಸಂತಸ ವ್ಯಕ್ತಪಡಿಸದಿರು. ಕೇಂದ್ರದ ಅನುದಾನ ಬಾಕಿ, ಅನಗತ್ಯ ವೆಚ್ಚ ಕಡಿತಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ ಎಂದರು.
ಬೆಂಗಳೂರು ದರೋಡೆ ಪ್ರಕರಣ: ಗೃಹ ಸಚಿವರು ಹೇಳಿದ್ದೇನು?
ಬೆಂಗಳೂರಿನಲ್ಲಿ ನಡೆದ ಮಹತ್ತರ ದರೋಡೆ ಪ್ರಕರಣದ ಬಗ್ಗೆ ಮಾತನಾಡಿದ ಡಾ.ಜಿ.ಪರಮೇಶ್ವರ ಅವರು, ಪೊಲೀಸರು ಈಗಾಗಲೇ ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದಾರೆ. ದರೋಡೆಕೋರರು ಬಳಸಿದ ಸ್ವಿಫ್ಟ್ ಕಾರಿನ ನಂಬರ್ ಪ್ಲೇಟ್ ನಕಲಿ ಆಗಿದೆ. ಅವರು ವಾಹನ ಬದಲಾಯಿಸಿ ಪರಾರಿಯಾಗಿರುವುದು ದೃಢಪಟ್ಟಿದೆ.
ರಾಜ್ಯ ಮೀರಿದ ವಾಹನಗಳ ಚಲನೆ, ಸಿಸಿಟಿವಿ ದೃಶ್ಯಗಳು ಎಲ್ಲ ಪರಿಶೀಲನೆ ನಡೆಯುತ್ತಿದೆ. ದರೋಡೆಕೋರರನ್ನು ಖಚಿತವಾಗಿ ಬಂಧಿಸುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಧರ್ಮಸ್ಥಳ ಪ್ರಕರಣ: ಶೀಘ್ರವೇ ಚಾರ್ಜ್ಶೀಟ್
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಸ್ಐಟಿ ಚಾರ್ಜ್ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದೆ. ಅದರಲ್ಲಿರುವ ಸತ್ಯ-ವಿವರಗಳು ಬಹಿರಂಗವಾಗುತ್ತವೆ. ರಾಜ್ಯ ಸರ್ಕಾರದೇ ಎಸ್ಐಟಿ ರಚಿಸಿದ್ದರಿಂದ ವರದಿಯನ್ನು ಸರ್ಕಾರಕ್ಕೆ ಸಹ ಸಲ್ಲಿಸಲಾಗುತ್ತದೆ. ಬೆಳಗಾವಿ ಅಧಿವೇಶನದಲ್ಲಿ ಪ್ರಕರಣದ ಅಪ್ಡೇಟ್ಗಳನ್ನು ವಿಧಾನಸಭೆಯಲ್ಲಿ ಪ್ರಕಟಿಸುವುದಾಗಿ ಅವರು ಮಾಹಿತಿ ನೀಡಿದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications