PSI Re-exam: ಅಭ್ಯರ್ಥಿಗಳು ಯಾವ ಚಿಂತೆ, ಆತಂಕವಿಲ್ಲದೇ ಪರೀಕ್ಷೆ ಬರೆಯಿರಿ: ಪರಮೇಶ್ವರ

ಬೆಂಗಳೂರು, ಜನವರಿ 20: ಪಿಎಸ್‌ಐ ಮರು ಪರೀಕ್ಷೆ ನಡೆಯಲಿದ್ದು, ಎಲ್ಲ ರೀತಿಯ ಸುರಕ್ಷತೆ ಕೈಗೊಳ್ಳುವಲ್ಲಿ ಸರ್ಕಾರ ನಿರತವಾಗಿದೆ. ಹೀಗಿದ್ದರೂ ಒಂದಷ್ಟು ಲೋಪದೋಷ ಕುರಿತು ಮಾತುಗಳು ಓಡಾಡುತ್ತಿವೆ. ಆದರೆ ಈ ಬಗ್ಗೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಯಾವುದೇ ಆತಂಕ ಪಡುವುದು ಬೇಡ ಎಂದು ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಜಿ.ಪರಮೇಶ್ವರ ಅವರು, ಗುಪ್ತದಳದ (ಇಂಟಲಿಜೆನ್ಸ್) ಪರಿಶೀಲನೆ ವೇಳೆ ಈ ರೀತಿಯ ಮಾಹಿತಿ ಹೊರಬಿದ್ದಿದೆ. ಸಿಸಿಬಿ ಪೊಲೀಸರು ಕೂಲಂಕುಶವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ಭಯವಿಲ್ಲ. ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಬೆಂಗಳೂರಿನಲ್ಲೆ ಪರೀಕ್ಷೆ ನಡೆಸುತ್ತಿದ್ದೇವೆ. ಅಭ್ಯರ್ಥಿಗಳಿಗೆ ಚಿಂತೆ ಬೇಡ ಎಂದು ಅವರು ಸ್ಪಷ್ಟಪಡಿಸಿದರು.

G Parameshwara Said about PSI Re Examination Recruitment 2024, Candidates Dont Warry

ಕೆಲವು ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ವಿಚಾರಣೆಗೆ ಒಳಪಡಿಸಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಕುಲಂಕುಶವಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ ಎಂದರು.

ಹರಿಪ್ರಸಾದ್ ಕೇಸ್‌ ಬಗ್ಗೆ ಪ್ರತಿಕ್ರಿಯಿಸಲ್ಲ

ಬಿಕೆ ಹರಿಪ್ರಸಾದ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಪ್ರತಿಕ್ರಿಯಿಸುವದಿಲ್ಲ. ಅವರ ಹೇಳಿಕೆಗೆ ಸಂಬಂಧಿಸಿದ ಸುದ್ದಿ ರಾಜ್ಯಪಾಲರ ಗಮನಕ್ಕೆ ಬಂದಿತ್ತು. ಈ ಬಗ್ಗೆ ವಿಚಾರಣೆ ನಡೆಸಿ ವರದಿ ನೀಡುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದರು. ಅದರನ್ವಯ ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕು ಅದನ್ನು ಪೊಲೀಸರು ಮಾಡಿದ್ದಾರೆ.

ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ಗೋದ್ರಾ ರೀತಿಯ ಘಟನೆ ನಡೆಯಬಹುದು ಎಂದು ಬಿಕೆ ಹರಿಪ್ರಸಾದ್ ಹೇಳಿದ್ದರು. ಇದು ವ್ಯಾಪಕವಾಗಿ ಚರ್ಚೆ ಆಗಿತ್ತು. ಆಕ್ಷೇಪಗಳು ಕೇಳಿ ಬಂದಿದ್ದವು.

G Parameshwara Said about PSI Re Examination Recruitment 2024, Candidates Dont Warry

ಇನ್ನೂ ಬಿಕೆ ಹರಿಪ್ರಸಾದ್ ಅವರ ವಿರುದ್ಧ ಯಾರು ಒಳ ಸಂಚಾಗಲಿ, ಪಿತೂರಿ ನಡೆಸುತ್ತಿಲ್ಲ. ಅವರಿಗೆ ತೊಂದರೆ ಮಾಡಬೇಕು ಎಂಬ ಉದ್ದೇಶ ಯಾರಿಗೂ ಇಲ್ಲ ಎಂದು ಪರಮೇಶ್ವರ ತಿಳಿಸಿದರು.

ಒಳಮೀಸಲಾತಿ ಬಗ್ಗೆ ಏನಂದ್ರು ಗೃಹ ಸಚಿವರು?

ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ಅವರ ಪ್ರಕರಣದ ತನಿಖೆ ಮುಂದುವರಿದಿದೆ. ನ್ಯಾಯಾಲಯಕ್ಕೆ ದೋಷಾರೋಪಣಾಪಟ್ಟಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಒಳ ಮೀಸಲಾತಿಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ರಾಜ್ಯಸಭೆಯ ಸದನದಲ್ಲಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 341 (3) ಸಂವಿಧಾನಿಕ ತಿದ್ದುಪಡಿ ತಂದು ಒಳ ಮೀಸಲಾತಿಗೆ ಅವಕಾಶ ಮಾಡಿಕೊಡುವಂತೆ, ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದರೆ ರಾಜ್ಯದಲ್ಲಿ ಅನುಷ್ಠಾನಗೊಳಿಸುತ್ತೇವೆ ಎಂದು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+