Ashwini Puneeth Rajkumar: ಆರ್‌ಸಿಬಿ ಸೋಲಿನ ವೈರಲ್ ಪೋಸ್ಟ್ ಬಗ್ಗೆ ಜಿ.ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು, ಏಪ್ರಿಲ್ 08: ಕರ್ನಾಟಕ ರತ್ನ ಡಾ. ದಿವಂಗತ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮೇಲೆ ನಿಂದನೆ ಮಾಡಿದವರ ಕಾನೂನು ಕ್ರಮ ಕೈಗೊಳ್ಳುವ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿಕ್ರಿಯಿಸಿದ್ದಾರೆ.
ಐಪಿಎಲ್ ಪಂದ್ಯಾವಳಿಯಲ್ಲಿ ಆರ್‌ಸಿಬಿ ಸೋಲಿನ ಕುರಿತು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಹೆಸರಿನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಲಾಗಿತ್ತು. ನಟ ದರ್ಶನ್ ಅಭಿಮಾನಿ ಹೆಸರಿನಲ್ಲಿ ಈ ಕೃತ್ಯ ಎಸಗಲಾಗಿತ್ತು.

ಈ ಘಟನೆ ಕುರಿತು ಸೋಮವಾರ ಪ್ರತಿಕ್ರಿಯಿಸಿರುವ ಗೃಹ ಸಚಿವರು ಕೆಲವು ಸಂಘಟನೆ ಸದಸ್ಯರು, ಮಹಿಳೆಯರಿಂದ ಮನವಿ ಸ್ವೀಕರಿಸಿದರು. ನಂತರ ಮಾತನಾಡಿ ನಿಮ್ಮ ಮನವಿ ಮೇರೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ನಿಂದಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಇಂದೇ ಸೂಚನೆ ನೀಡುತ್ತೇನೆ ಎಂದರು.
ಸೈಬರ್ ಅಧಿಕಾರಿಗಳಿಂದ ಆರೋಪಿ ಪತ್ತೆಗೆ ಸೂಚನೆ
ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಗ್ಗೆ ಅವಹೇಳನಕಾರಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಶೀಘ್ರವೇ ಈ ಬಗ್ಗೆ ಸೈಬರ್ ವಿಭಾಗದ ಅಧಿಕಾರಿಗಳಿಂದ ಆರೋಪಿಗಳನ್ನು ಪತ್ತೆ ಮಾಡಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದು.
ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇವತ್ತೆ ಸೂಚನೆ ನೀಡುತ್ತೇನೆ. ಇಂತಹ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಕಾನೂನಿನ ಚೌಕಟ್ಟಿನೊಳಿಗೆ ತರಲಾಗುವುದು. ನಿಮ್ಮ ಬೇಡಿಕೆಗೆ ನ್ಯಾಯ ಒದಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಅಶ್ವಿನಿ ಪುನೀತ್ ರಾಜಕುಮಾರ್ ನಿಂದಿಸಿ ಪೋಸ್ಟ್
ಬೆಂಗಳೂರಿನಲ್ಲಿ ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮಕ್ಕೆ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು. ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಂತರ ನಡೆದ ಮ್ಯಾಚ್‌ನಲ್ಲಿ ಆರ್‌ಸಿಬಿ ಎಂದಿನಂತೆ ಸೋಲು ಕಂಡಿತು. ಆದರೆ ಈ ಸೋಲಿಗೆ ಪತಿ ಕಳೆದುಕೊಂಡ ಅಶ್ವಿನಿ ಪುನೀತ್ ರಾಜಕುಮಾರ್ ಕಾರಣ ಎಂದು ಕೆಟ್ಟ ಪದಗಳನ್ನು ಬಳಿಸಿ, ಅವರ ಫೋಟೋ ಹಾಕಿ ಪೋಸ್ಟ್ ಮಾಡಲಾಗಿತ್ತು.
ನಟ ದರ್ಶನ್ ಅಭಿಮಾನಿ 'ಗಜಪಡೆ' ಟ್ವಿಟ್ಟರ್ ಹ್ಯಾಂಡಲ್‌ನಿಂದ ಈ ಪೋಸ್ಟ್ ಹಾಕಲಾಗಿತ್ತು. ವೈರ್ಲ ಆಗುತ್ತಿದ್ದಂತೆ ನಟ ಸುದೀಪ್ ಅಭಿಮಾನಿ ಎಂದು ಹೆಸರು ಬದಲಾಯಿಸಲಾಯಿತು. ಈ ಪೋಸ್ಟ್‌ಗೆ ವ್ಯಾಪಕ ಖಂಡನೇ ವ್ಯಕ್ತವಾದವು, ಈಗಾಗಲೇ ಅಪ್ಪು ಅಭಿಮಾನಿಗಳು ಸೇರಿದಂತೆ ದೊಡ್ಮನೆಯ ಅಭಿಮಾನಿಗಳು ಸಂಘಗಳು ದೂರು ಎಫ್‌ಐಆರ್ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿದ ಒತ್ತಡ
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ನಿಂದಿಸಿ ಪೋಸ್ಟ್ ಮಾಡಿದ್ದ ಆರೋಪಿ ಪತ್ತೆಗೆ, ಕಠಿಣ ಕ್ರಮಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಕಲಾವಿದರು, ಅಭಿಮಾನಿ ಸಂಘಟನೆಗಳು ಕ್ರಮಕ್ಕೆ ಪೊಲೀಸರು ಮತ್ತು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. We stand With Ashwini Puneeth Rajkumar ಎಂದು ಪೋಸ್ಟ್ ಹಾಕಿ ಅವರ ಬೆಂಬಲಕ್ಕೆ ನಿಮತಿದ್ದಾರೆ.
ಅಶ್ವಿನಿ ಪುನೀತ್ ರಾಜ್ ಕುಮಾರ ಪರವಾಗಿ ನಟ ಜಗ್ಗೇಶ್ ಕಿಡಿಗೇಡಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೆಣ್ಣಿಗೆ ಗೌರವ ಕೊಡಬೇಕು ಎಂದು ಪೋಸ್ಟ್ ವೈರಲ್ ಕುರಿತು ಎಚ್ಚರಿಕೆ ನೀಡಿದ್ದಾರೆ. ನಿರೂಪಕಿ ಅನುಶ್ರೀ ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧೈರ್ಯ ಹೇಳಿದ್ದಾರೆ. ಹೀಗೆ ಸಾಲು ಸಾಲು ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಇಂತಹ ಹುಚ್ಚಾಟ ಖಂಡಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.












Click it and Unblock the Notifications