2024ರ ಲೋಕಸಭಾ ಚುನಾವಣೆಯಲ್ಲಿ ಸಚಿವರ ಸ್ಪರ್ಧೆ ಬಗ್ಗೆ ಜಿ.ಪರಮೇಶ್ವರ ಹೇಳಿದ್ದೇನು?
ಬೆಂಗಳೂರು, ಜನವರಿ 09: ಲೋಕಸಭಾ ಚುನಾವನೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಸಿದ್ಧತೆ ನಡೆಸಿರುವ ಕಾಂಗ್ರೆಸ್‌ನಿಂದ ಸಚಿವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡುತ್ತಾರೆ, ಸಚಿವರೇ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಚರ್ಚೆಗಳ ನಡೆದಿಲ್ಲ ಎನ್ನಲಾಗಿದೆ.
ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೀಡಿದ ಮಾಹಿತಿ ಪ್ರಕಾರ, ಈವರೆಗೆ ಲೋಕಸಭಾ ಚುನಾವಣೆಯಲ್ಲಿ ಸಚಿವರೇ ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ಈವರೆಗೂ ಚರ್ಚೆ ಆಗಿಲ್ಲ. ಈ ಕುರಿತು ಕೆಪಿಸಿಸಿ ಅಧ್ಯಕ್ಷರು ನೀಡುವ ಮಾಹಿತಿಯೇ ಅಧಿಕೃತ ಎಂದು ತಿಳಿಸಿದ್ದಾರೆ.

ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಚಿತ್ರದುರ್ಗದಿಂದ ನನ್ನ ಹೆಸರು ಕೇಳಿ ಬಂದಿತ್ತು, ಪ್ರಸಕ್ತ ಚುನಾವಣೆ ವೇಳೆ ಈ ಬಾರಿ ಕೋಲಾರ ಕ್ಷೇತ್ರದಲ್ಲಿ ನನ್ನ ಹೆಸರು ಕೇಳಿ ಬಂದಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಹಿಂದೇಟು ಹಾಕು ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ ಎಂದು ಪ್ರಜಾವಾಣಿ ವರದಿ ಮಾಡಿದೆ.
ಉಸ್ತುವಾರಿಗಳ ಈ ಬಗ್ಗೆ ಚರ್ಚಿಸಲಿದ್ದಾರೆ
ಸದ್ಯ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆ ಕುರಿತು ಸಿದ್ದತೆಗಳು ನಡೆಯುತ್ತಿವೆ. ಈ ಕುರಿತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನಾಯಕರ ಜತೆ ಚರ್ಚಿಸಲಿದ್ದಾರೆ. ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಪಕ್ಷದಿಂದ ಪ್ರಕಟಗೊಳ್ಳಲಿದೆ.
ಸದ್ಯ ಲೋಕಸಭಾ ಚುನಾವಣೆ ಎದುರಾಗಲಿದ್ದು, ಕಳೆದ ಭಾರಿಗಿಂತಲೂ ಈ ಬಾರಿ ಕಾಂಗ್ರೆಸ್ ಉತ್ತಮ ಸ್ಥಿತಿಯಲ್ಲಿದೆ. ಹೀಗಾಗಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ವಿದೆ. ಅಲ್ಲದೇ ಬಡಜನರು, ಮಹಿಳೆಯರಿಗೆ ವಿವಿಧ ಸೌಲಭ್ಯ ಕಲ್ಪಿಸಿಕೊಟ್ಟ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ಪರಿಣಾಮ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದೆ ಎಂದರು.
ಗ್ಯಾರಂಟಿ ಯೋಜನೆ ಅನುಷ್ಠಾನದಿಂದ ಅಷ್ಟಾಗಿ ತೊಂದರೆ ಆಗಿಲ್ಲ. ಎಲ್ಲವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ಕೇಂದ್ರದಿಂದ ಅನುದಾನ ಬರಬೇಕಾಗಿದ್ದು, ಬಂದಿಲ್ಲ. ನಿರೀಕ್ಷಿತ ಹಣ ರಾಜ್ಯಕ್ಕೆ ಬಂದರೆ ಹೆಚ್ಚಿನ ಅಭಿವೃದ್ಧಿ ಕೆಲಗಳು ಆಗುತ್ತಿತ್ತು ಎಂದು ಅಭಿಪ್ರಾಯಪಟ್ಟರು.












Click it and Unblock the Notifications