₹5,000 ಕೋಟಿ 1,000 ಮೆಗಾವ್ಯಾಟ್ ಮರುಬಳಕೆ ವಿದ್ಯುತ್ ಉತ್ಪಾದನೆ: ಕರ್ನಾಟಕ ಒಪ್ಪಂದ

ಬೆಂಗಳೂರು, ಮೇ 11: ಕರ್ನಾಟಕ ರಾಜ್ಯ ಸರ್ಕಾರ ವಿದ್ಯುತ್ ಮರುಬಳಕೆಯ ಯೋಜನೆಗೆ ಕೈ ಹಾಕಿದೆ.ಇದರೊಂದಾಗಿ ಮರುಬಳಕೆಯ ಇಂಧನ ಸ್ಥಾವರ ಸ್ಥಾಪನೆಗೆ ಸಹಕಾರಿಯಾಗಲಿದೆ. ಈ ಸಂಬಂಧ ಮಾಡಿಕೊಂಡ ಒಪ್ಪಂದದಂತೆ ಯೋಜನೆಗೆ ಅಗತ್ಯವಿರುವ ಭೂಮಿ, ಅನುಮತಿ ಸೇರಿದಂತೆ ದಲ್ಲ ಅಗತ್ಯತೆಗಳು ತ್ವರಿತವಾಗಿ ಒದಗಿಸಲಾಗುವುದು ಎಂದು ಭರವಸೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಹೇಳಿದರು.

ವಿಧಾನಸೌಧದಲ್ಲಿ ನಡೆದ ಸಮಾರಂಭದಲ್ಲಿ ಸಾರ್ವಜನಿಕ ಸ್ವಾಮ್ಯದ ಭಾರತೀಯ ಅನಿಲ ಪ್ರಾಧಿಕಾರವು (ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್- ಜಿಎಐಎಲ್) ರಾಜ್ಯದಲ್ಲಿ ಮುಂದಿನ 05 ವರ್ಷಗಳಲ್ಲಿ 5,000 ಕೋಟಿ ರೂಪಾಯಿ ಹೂಡಿಕೆಯೊಂದಿಗೆ 1,000 ಮೆಗಾವಾಟ್ (1 ಗಿಗಾವಾಟ್) ಉತ್ಪಾದನಾ ಸಾಮರ್ಥ್ಯದ ಮರುಬಳಕೆ ಇಂಧನ ಸ್ಥಾವರಗಳನ್ನು ಆರಂಭಿಸುವ ಒಡಂಬಡಿಕೆಗೆ ಸಹಿ ಹಾಕಲಾಯಿತು.

GAIL and Karnataka to Invest Rs 5000 Crore in 1 GW Renewable Energy Project in Karnataka

ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ, ರಾಜ್ಯ ಇಂಧನ ಸಚಿವ ಕೆ ಜೆ ಜಾರ್ಜ್, ಕ್ರೆಡಲ್ ಅಧ್ಯಕ್ಷ ಟಿ ಡಿ ರಾಜೇಗೌಡ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ಜಿಐಎಎಲ್ ಕಾರ್ಯಕಾರಿ ನಿರ್ದೇಶಕ ಪರಿವೇಶ್ ಛುಗ್ ಸಿಂಗ್ ಅವರು ಪರಸ್ಪರ ಒಪ್ಪಂದಕ್ಕೆ ಸಹಿ ಹಾಕಿ ಮಹತ್ವ ಒಡಂಬಡಿಕೆಗೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, ಅನಿಲ ಪ್ರಾಧಿಕಾರವು ರೈತರಿಂದ ಜಮೀನನ್ನು ಭೋಗ್ಯಕ್ಕೆ ಪಡೆದುಕೊಂಡು ಯೋಜನೆ ಆರಂಭಿಸಬಹುದು. ಅಥವಾ ಕರ್ನಾಟಕ ಕೈಗಾರಿಕೆ ಪ್ರದೇಶಾಭಿವೃದ್ಧಿ ಮಂಡಳಿ (KIADB) ಮೂಲಕ ಬೇಕಾದರೂ ಅಗತ್ಯ ಜಮೀನು ಒದಗಿಸಲಾಗುವುದು.

Take a Poll

ಮರುಬಳಕೆ ಇಂಧನ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಹೂಡಿಕೆ ಆಗುವಂತೆ ನಾವು ನೋಡಿಕೊಳ್ಳಲಿದ್ದೇವೆ. ಇದು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕವಾಗಿದೆ. ನಮ್ಮಲ್ಲಿರುವ ಕಾರ್ಯ ಪರಿಸರ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಮತ್ತು ಭೂಮಿಯ ಲಭ್ಯತೆಗಳಿಂದಾಗಿ ಪರಿಸರಸ್ನೇಹಿ ಇಂಧನ ಕ್ಚೇತ್ರದ ಹೂಡಿಕೆಗೆ ಕರ್ನಾಟಕವು ಪ್ರಶಸ್ತ ತಾಣವಾಗಿದೆ ಎಂದು ಅವರು ಒತ್ತಿ ಹೇಳಿದರು.

GAIL and Karnataka to Invest Rs 5000 Crore in 1 GW Renewable Energy Project in Karnataka

10,000 ಎಕರೆ ಸಿಗುತ್ತಿದ್ದಂತೆ ಯೋಜನೆ ಆರಂಭ

ಇಂಧನ ಸಚಿವ ಕೆ ಜೆ ಜಾರ್ಜ್ ಅವರು ಪ್ರತಿಕ್ರಿಯಿಸಿ, ಅನಿಲ ಪ್ರಾಧಿಕಾರವು ರಾಜ್ಯ ಸರ್ಕಾರದ ಜತೆ ಈ ಮಹತ್ವದ ಒಡಂಬಡಿಕೆ ಮಾಡಿಕೊಂಡಿರುವುದು ಭಾರತದ ಪರಿಸರಸ್ನೇಹಿ ಇಂಧನ ವಲಯದ ಸಾಧನೆಗೆ ಮತ್ತಷ್ಟು ಬಲ ತಂದುಕೊಡಲಿದೆ. ಪಾವಗಡದಲ್ಲಿ ಇರುವ ಸೋಲಾರ್ ಪಾರ್ಕಿನಲ್ಲಿ ವರ್ಷಕ್ಕೆ 2,050 ಮೆಗಾವಾಟ್ ಸೌರ ಮತ್ತು ಪವನ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಅಲ್ಲಿನ ರೈತರು ಈ ಯೋಜನೆಗೆ ಇನ್ನೂ 10 ಸಾವಿರ ಎಕರೆ ಭೂಮಿ ಬಿಟ್ಟುಕೊಡಲು ಮುಂದೆ ಬಂದ ಮೇಲೆ ಈ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು. ರಾಜ್ಯದಲ್ಲಿ ಇದರಿಂದ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಎರಡೂ ಈಡೇರಲಿದೆ ಎಂದರು.

ಇದು ಜಿಐಎಲ್ (ಗೈಲ್) ಜತೆಗಿನ ರಾಜ್ಯ ಸರ್ಕಾರದ ದೀರ್ಘಕಾಲೀನ ಬಾಂಧವ್ಯದ ಆರಂಭವಾಗಿದೆ. ಈ ಮೂಲಕ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಹವಾಮಾನಕ್ಕೆ ಸಂಬಂಧಿಸಿದ ಗುರಿಗಳನ್ನು ಸಾಧಿಸಬಹುದು ಎಂದು ಇಂಧನ ಸಚಿವರು ಅಭಿಪ್ರಾಯಪಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+