ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿಯ ಎರಡು ಕನಸು

2019ರ ವೇಳೆಗೆ ಕೇಂದ್ರದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಕಾಣುವುದು ನನ್ನ ಕನಸು ಎಂದು ಗಾಲಿ ರೆಡ್ಡಿ ಹೇಳಿದ್ದಾರೆ.

By Mahesh
|
Google Oneindia Kannada News

ಬೆಂಗಳೂರು, ಜೂನ್ 06: 2019ರ ವೇಳೆಗೆ ಕೇಂದ್ರದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿಯಾಗಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಕಾಣುವುದು ನನ್ನ ಕನಸು ಎಂದು ಗಾಲಿ ರೆಡ್ಡಿ ಹೇಳಿದ್ದಾರೆ.

ಇದೇ ವೇಳೆ, ಗಾಲಿ ಜನಾರ್ದನ ರೆಡ್ಡಿ ಅವರು, ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೊಸ ಬಾಂಬ್ ಹಾಕಿದ್ದಾರೆ. ತಮ್ಮ ಮದುವೆಯ 25ನೇ ವಾರ್ಷಿಕೋತ್ಸವ ಆಚರಣೆಗಾಗಿ ಬಳ್ಳಾರಿಗೆ ತೆರಳಿದ್ದ ರೆಡ್ಡಿ ಅವರು ಮಂಗಳವಾರ(ಜೂನ್ 06) ದಂದು ಬೆಂಗಳೂರಿಗೆ ಹಿಂತಿರುಗಿದ್ದಾರೆ.[ಚುನಾವಣೆಯಲ್ಲಿ ಸ್ಪರ್ಧೆ, ಹೈಕಮಾಂಡ್ ನಿರ್ಧರಿಸಲಿದೆ: ಗಾಲಿ ರೆಡ್ಡಿ]

Gali Janardhana Reddy on Karnataka Assembly Elections BSY as CM, Modi as PM

'ನಾನು ಸದ್ಯ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಯಾವುದೇ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿದ್ದೇನೆ' ಎಂದರು.[ಜನಾರ್ದನ ರೆಡ್ಡಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್]

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಸ್ಪಷ್ಟ ಬಹುಮತ ಬರಲಿದ್ದು, ಬಿ.ಎಸ್.ಯಡಿಯೂರಪ್ಪ ಅವರೇ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. 2019ರ ಲೋಕ ಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಫಲಿತಾಂಶ ನೀಡಲಿದ್ದು, ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ಇದು ನನ್ನ ಕನಸು ಎಂದು ಗಾಲಿ ರೆಡ್ಡಿ ಹೇಳಿದರು.

ಕರ್ನಾಟಕ ಮಾತ್ರವಲ್ಲದೆ, ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲೂ ಬಿಜೆಪಿ ಜಯಭೇರಿ ಬಾರಿಸಲಿದೆ. ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ತಿಳಿಸಿದರು.[ಮಗ ಕಿರೀಟಿಗಾಗಿ ಜನಾರ್ದನ ರೆಡ್ಡಿ ಸಿನಿಮಾ ನಿರ್ಮಾಣ!]

ಎಸ್ ಐಟಿ ಮುಂದೆ ಹಾಜರು: ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವ ನಿಟ್ಟಿಯಲ್ಲಿ ಜಂತಕಲ್ ಮೈನಿಂಗ್ ಲೈಸಿಂಗ್ ನವೀಕರಣ, ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಸಾಕ್ಷ್ಯ ಒದಗಿಸಲು ಗಾಲಿ ರೆಡ್ಡಿ ಅವರು ಮಂಗಳವಾರದಂದು ವಿಶೇಷ ತನಿಖಾ ದಳ(ಎಸ್ ಐಟಿ) ಮುಂದೆ ಹಾಜರಾಗುತ್ತಿದ್ದಾರೆ.

English summary
“My dream is to make B S Yeddyurappa the chief minister again and to see Narendra Modi as prime minister in 2019. I will travel around the state to strengthen the party. I will not contest in upcoming assembly election' said former BJP minister Gali Janardhana Reddy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X