ಗಣೇಶ ಚತುರ್ಥಿ : ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಬೆಂಗಳೂರು, ಆಗಸ್ಟ್ 30 : ಗಣೇಶ ಚತುರ್ಥಿ ಅಂಗವಾಗಿ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ನೈಋತ್ಯ ರೈಲ್ವೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಿದೆ.

ಆಗಸ್ಟ್ 30ರಂದು ರಾತ್ರಿ 10.20ಕ್ಕೆ ಯಶವಂತಪುರದಿಂದ ರೈಲು ಹೊರಡಲಿದ್ದು, ಮರುದಿನ ಬೆಳಗ್ಗೆ 8.30ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಸೆಪ್ಟೆಂಬರ್ 2ರಂದು ರಾತ್ರಿ 10.15ಕ್ಕೆ ಮಂಗಳೂರಿನಿಂದ ಹೊರಡಲಿರುವ ರೈಲು ಮರುದಿನ ಬೆಳಗ್ಗೆ 8 ಗಂಟೆಗೆ ಯಶವಂತಪುರಕ್ಕೆ ತಲುಪಲಿದೆ.

Ganesh Chaturthi Rush : Special Train Between Bengaluru And Mangaluru

ನಿಲ್ದಾಣಗಳು : ಬೆಂಗಳೂರಿನ ಯಶವಂತಪುರದಿಂದ ಹೊರಡುವ ರೈಲು ಚಿಕ್ಕಬಣಾವರ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಮಣ್ಯ, ಕಬಕ, ಪುತ್ತೂರು, ಬಂಟ್ವಾಳ, ಪಡೀಲು ನಿಲ್ದಾಣದಲ್ಲಿ ನಿಲುಗಡೆಗೊಳ್ಳಲಿದೆ.

ಈಗಾಗಲೇ ನೈಋತ್ಯ ರೈಲ್ವೆ ಬೆಂಗಳೂರು-ಬೆಳಗಾವಿ, ಮೈಸೂರು-ವಿಜಯಪುರ, ಯಲಹಂಕ-ಕಲಬುರಗಿ ನಡುವೆ ಗಣೇಶ ಚತುರ್ಥಿ ಅಂಗವಾಗಿ ವಿಶೇಷ ರೈಲುಗಳ ವ್ಯವಸ್ಥೆಯನ್ನು ಮಾಡಿದೆ.

ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ಕೆಲವು ದಿನಗಳ ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ಈಗ ಪುನಃ ರೈಲು ಸಂಚಾರ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+