Ganesh Festival: ಗಣೇಶ ಚತುರ್ಥಿ: ಬೆಂಗಳೂರಿನಲ್ಲಿ ಈ ವಿಷಯಗಳಿಗೆ ಜಿಬಿಎ ನಿಷೇಧ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ) ಹಾಗೂ ರಾಸಾಯನಿಕ ಗುಣವಿರುವ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ, ಸಂಗ್ರಹ, ಮಾರಾಟ ಹಾಗೂ ವಿಸರ್ಜನೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಎಫ್.ಇ.ಸಿಸಿ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಾದ್ಯಂತ ನೀರಿನ ಯಾವುದೇ ಮೂಲಗಳು ಮಾಲಿನ್ಯಗೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರ ಲೋಹಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತ ಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್ ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ನೀರಿನ ಮೂಲಗಳಲ್ಲಿ ವಿಸರ್ಜಿಸನೆ ಮಾಡುವುದನ್ನು ರಾಜ್ಯಾದಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಪರಿಸರ ಸಂರಕ್ಷಣಾ ಕಾಯ್ದೆ 1986, ಸೆಕ್ಷನ್ (5) ರಡಿಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತ್ಯಾಯೋಜಿಸಿರುವ ಅಧಿಕಾರದಡಿ ಸರ್ಕಾರವು 15ನೇ ಸೆಪ್ಟೆಂಬರ್ 2023 ರಲ್ಲಿ ಆದೇಶ ಹೊರಡಿಸಿದೆ. ಇದು ನಗರ ಸ್ಥಳೀಯ ಸಂಸ್ಥೆಗಳಿಗೂ ಅನ್ವಯವಾಗುತ್ತದೆ.

Ganesh Festival

ಮುಂದುವರಿದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಿಂದಲೂ ಸಹ ಪರಿಸರಕ್ಕೆ ಹಾಗೂ ಮುಖ್ಯವಾಗಿ ಜಲಮೂಲಗಳಿಗೆ ಹಾನಿಯನ್ನು ತಡೆಗಟ್ಟಲು ಪ್ಲಾಸ್ಟರ್ ಆಫ್ ಪ್ಯಾರೀಸ್ (POP) ಇಂದ ವಿಗ್ರಹಗಳನ್ನು ತಯಾರಿಸದಂತೆ ಹಾಗೂ ಮಾರಾಟ ಮಾಡದಂತೆ ಕ್ರಮಕೈಗೊಳ್ಳಲು ಕೋರಿಕೆ ಸಲ್ಲಿಸಿ ಪರಿಸರ ಹಾನಿ ಕುರಿತು ಕಳಕಳಿ ವ್ಯಕ್ತಪಡಿಸಿರುತ್ತಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಗೆ ಬರುವಂತಹ ಪ್ರದೇಶಗಳಲ್ಲಿ ಪ್ರತಿ ವರ್ಷ ಹಬ್ಬ-ಹರಿದಿನಗಳಂದು ಪೂಜಿಸಲ್ಪಟ್ಟ ವಿಗ್ರಹಗಳನ್ನು ಕೆರೆ, ಬಾವಿ ಹಾಗೂ ಇತರೆ ನೀರಿನ ಮೂಲಗಳಲ್ಲಿ ವ್ಯಾಪಕವಾಗಿ ವಿಸರ್ಜನೆ ಮಾಡಲಾಗುತ್ತಿದೆ. ಈ ವಿಗ್ರಹಗಳಿಗೆ ಭಾರೀ ಲೋಹಗಳನ್ನೊಳಗೊಂಡ ರಾಸಾಯನಿ ಬಣ್ಣಗಳನ್ನು ಅಳವಡಿಸಿ ಮತ್ತು ಕೃತಕ ಅಲಂಕಾರಿಕ ವಸ್ತುಳಿಂದ ಶೃಂಗರಿಸಲಾಗುತ್ತದೆ. ಜಾಗರೂಕತೆ ಹಾಗೂ ಕಾಳಜಿ ವಹಿಸದೆ ವಿಗ್ರಹಗಳ ವಿಸರ್ಜನೆ ಮಾಡಲಾಗುತ್ತದೆ. ಇದರಿಂದ ಜಲ ಹಾಗೂ ಭೂಮಿ ಕಲುಷಿತಗೊಂಡು ಪರಿಸರಕ್ಕೆ ಹಾನಿಯಾಗುತ್ತದೆ. ಜಲ ಮೂಲಗಳಲ್ಲಿರುವ ಜೀವ ರಾಶಿಗೆ ಅಪಾಯವಾಗುತ್ತದೆ. ಪರಿಸರ ಹಾನಿಯನ್ನು ತಡೆಗಟ್ಟುವುದು ಎಲ್ಲರ ಜವಾಬ್ದಾರಿ ಹಾಗೂ ಆದ್ಯ ಕರ್ತವ್ಯವಾಗಿದೆ.

Ganesh Festival: ಬೆಂಗಳೂರಿನಲ್ಲಿ ಈ ನಿಯಮ ಪಾಲನೆ ಮಾಡಬೇಕು

2026 ನೇ ಸಾಲಿನ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಭಾರಲೋಹ ಮಿಶ್ರಿತ ರಾಸಾಯನಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾರ್ಸ್ಟ ಆಫ್ ಪ್ಯಾರಿಸ್, ಇತರೆ ಕೃತಕ/ ಸಹಜವಾಗಿ ಜೈವಿಕವಾಗಿ ವಿಘಟನವಾಗದ ಪದಾರ್ಥಗಳಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಇತರ ಯಾವುದೇ ವಿಗ್ರಹಗಳ ಉತ್ಪಾದನೆ, ಮಾರಾಟ ಮತ್ತು ಯಾವುದೇ ನೀರಿನ ಮೂಲಗಳಲ್ಲಿ ಅವುಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿದೆ.

ಕೇಂದ್ರ ಸರ್ಕಾರದ ಪರಿಸರ ಸಂಗಕ್ಷಣಾ ಕಾಯ್ದೆ 1986ರ ಉಲ್ಲಂಘನೆ ದಂಡನೀಯ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ, ಈ ಸುತ್ತೋಲೆಯನ್ನು ಜಾರಿಮಾಡುವುದು ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ಕಾನೂನು ರೀತ್ಯಾ ಕ್ರಮವನ್ನು ಕೈಗೊಳ್ಳಲು ನಗರ ಪಾಲಿಕೆ ಆಯುಕ್ತರಿಗೆ ಸುತ್ತೋಲೆ ಮೂಲಕ ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮುಂದುವರಿದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಈ ನಿಯಮವನ್ನು ಕಟ್ಟು ನಿಟ್ಟಾಗಿ ಜಾರಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+