ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗಣೇಶ ಚತುರ್ಥಿ; ವಾರ್ಡ್‌ಗೊಂದು ಗಣೇಶ ಎಂಬ ನಿಯಮ ವಾಪಸ್

|
Google Oneindia Kannada News

ಬೆಂಗಳೂರು ಆಗಸ್ಟ್ 8: ಪ್ರತಿ ವಾರ್ಡ್‌ಗೆ ಒಂದೇ ಗಣೇಶ ಪೆಂಡಾಲ್ ಎಂಬ ನಿಯಮವನ್ನು ಸರ್ಕಾರ ಹಿಂಪಡೆದಿದೆ. ಕಂದಾಯ ಸಚಿವ ಆರ್. ಅಶೋಕ್ ಈ ವರ್ಷ ಗಣೇಶನನ್ನು ಕೂರಿಸಲು ಯಾವುದೇ ನಿರ್ಬಂಧಗಳಿಲ್ಲ ಎಂದಿದ್ದಾರೆ. ಕಳೆದ ವರ್ಷ ಕೋವಿಡ್‌ ಪರಿಸ್ಥಿತಿ ಕಾರಣ ರಾಜ್ಯ ಸರ್ಕಾರ ವಾರ್ಡ್‌ಗೆ ಒಂದು ಗಣೇಶ ಎಂಬ ನಿರ್ಬಂಧಗಳನ್ನು ಹೇರಿತ್ತು. ಆದರೀಗ ಈ ನಿಯಮವನ್ನು ಹಿಂಪಡೆದಿದೆ.

ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಈ ಬಾರಿ ಕೋವಿಡ್ ಪರಿಸ್ಥಿತಿಗೂ ಮೊದಲಿನಂತೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಜೊತೆ ಮಾತನಾಡಿದ್ದೇನೆ. ಅವರು ಇದಕ್ಕೆ ಸಮ್ಮತಿ ನೀಡಿದ್ದಾರೆ. ಆದರೆ ಜನರು ಪರಿಸರ ಸ್ನೇಹಿ ಗಣೇಶನನ್ನು ಕೂರಿಸಲು ಗಮನ ಹರಿಸಬೇಕು' ಎಂದು ಮನವಿ ಮಾಡಿದರು.

 ಸಾಮರಸ್ಯಕ್ಕೊಂದು ಅರ್ಥ: ಚಾಮರಾಜನಗರದಲ್ಲಿ ಮುಸ್ಲಿಂ ವ್ಯಕ್ತಿಯಿಂದ ಗಣೇಶ ದೇವಸ್ಥಾನ ನಿರ್ಮಾಣ ಸಾಮರಸ್ಯಕ್ಕೊಂದು ಅರ್ಥ: ಚಾಮರಾಜನಗರದಲ್ಲಿ ಮುಸ್ಲಿಂ ವ್ಯಕ್ತಿಯಿಂದ ಗಣೇಶ ದೇವಸ್ಥಾನ ನಿರ್ಮಾಣ

ಕಳೆದ ವರ್ಷ ರಾಜ್ಯದಲ್ಲಿ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿತ್ತು. ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿತ್ತು. ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿತ್ತು. ಮಾತ್ರವಲ್ಲದೆ ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗಿತ್ತು.

Ganesha Chaturthi 2022: One Ganesha per ward rule has been lifted, no restrictions this year says R Ashok

ಕಳೆದ ವರ್ಷ ಮಾರ್ಗಸೂಚಿಯಂತೆ ಸಾರ್ವಜನಿಕ ಗಣೇಶೋತ್ಸವದಲ್ಲಿ ಗಣೇಶ ಮೂರ್ತಿ 4 ಅಡಿಗಿಂತ ಹೆಚ್ಚು ಇರಬಾರದು, ಗಣೇಶ ಮೂರ್ತಿಯನ್ನು 5 ದಿನದೊಳಗೆ ವಿಸರ್ಜನೆ ಮಾಡಬೇಕು, ನಗರಗಳಲ್ಲಿ ವಾರ್ಡ್‌ಗೆ ಒಂದು ಮಾತ್ರ ಗಣೇಶ ಮೂರ್ತಿ ಇಡಬೇಕು ಎಂದು ತಿಳಿಸಲಾಗಿತ್ತು.

ಗ್ರಾಮಕ್ಕೊಂದು ಸ್ಥಳೀಯ ಆಡಳಿತದ ಅನುಮತಿಯ ಮೇರೆಗೆ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಜೊತೆಗೆ ಕೋವಿಡ್ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕಡಿಮೆ ಇದ್ದಲ್ಲಿ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ನೀಡಲಾಗಿತ್ತು. ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಕಡೆಗಳಲ್ಲಿ ಗಣೇಶೋತ್ಸವ ನಡೆಸಲು ಅವಕಾಶ ಇರಲಿಲ್ಲ. ಆದರೀಗ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾದ್ದರಿಂದ ಗಣೇಶೋತ್ಸವ ಆಚರಣೆಗೆ ಜನರು ಕಾಯುತ್ತಿದ್ದಾರೆ.

50 ಅಡಿಗಿಂತ ಹೆಚ್ಚು ಪೆಂಡಾಲ್ ಹಾಕುವಂತಿಲ್ಲ, ಗಣೇಶೋತ್ಸವ ಸಮಯದಲ್ಲಿ ಮನರಂಜನೆ, ಡಿಜೆ ಗಳಿಗೆ ಅವಕಾಶವಿರಲಿಲ್ಲ. ಯಾವುದೇ ಮೆರವಣಿಗೆಗೂ ಅವಕಾಶವಿರಲಿಲ್ಲ. ಜೊತೆಗೆ ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿರಲಿಲ್ಲ. ಏಕಕಾಲಕ್ಕೆ 20 ಜನರಿಗಿಂತ ಹೆಚ್ಚಿನ ಜನರು ಸೇರುವಂತಿರಲಿಲ್ಲ. ಆದರೀಗ ಇದೆಲ್ಲದರಿಂದ ಗಣೇಶೊತ್ಸವಕ್ಕೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.

English summary
Ganesha Chaturthi 2022: One Ganesha per ward rule has been lifted in Bengaluru ciry, no restrictions this year said Karnataka Revenue Minister R. Ashok.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X