ಗಣೇಶ ಚತುರ್ಥಿಗೆ ಈಗಲೇ ಬಸ್ಗಳು ಫುಲ್: ಟಿಕೆಟ್ ಸೋಲ್ಡ್ ಔಟ್!
Recommended Video

ಬೆಂಗಳೂರು, ಆಗಸ್ಟ್ 27: ಗಣೇಶ ಚತುರ್ಥಿಗೆ ತೆರಳಲು ಈಗಾಗಲೇ ಬೆಂಗಳೂರಿನಲ್ಲಿ ಸೀಟುಗಳನ್ನು ಬುಕ್ ಮಾಡುತ್ತಿದ್ದಾರೆ. ಕೆಎಸ್ ಆರ್ ಟಿಸಿ ಬಸ್ಗಳ ಟಿಕೆಟ್ ಬಹುತೇಕ ಫುಲ್ ಆಗಿದೆ. ಸೆಪ್ಟೆಂಬರ್ 11, 12ರಂದು ತೆರಳಲು ಈಗಾಗಲೇ ಟಿಕೇಟ್ ಕಾಯ್ದಿರಿಸಿದ್ದಾರೆ.
ಈ ವರ್ಷ 1000, 1500 ಬಸ್ಗಳನ್ನು ವ್ಯವಸ್ಥೆ ಮಾಡಲು ಸಂಸ್ಥೆ ನಿರ್ಧರಿಸಿದೆ. ಕೆಂಪೇಗೌಡ ಬಸ್ ನಿಲ್ದಾಣದಿಂದ ಪ್ರತಿದಿನ 369 ಐಷಾರಾಮಿ ಬಸ್ಗಳು ಶಿವಮೊಗ್ಗ, ಬೆಳಗಾವಿ, ಶಿರಸಿ, ಗೋಕರ್ಣ, ಮಂಗಳೂರು, ಧರ್ಮಸ್ಥಳ, ಸೇರಿದಂತೆ ಹಲವು ಪ್ರದೇಶಗಳಿಗೆ ತೆರಳುತ್ತದೆ. ಕೆಎಸ್ ಆರ್ಟಿಸಿ ನಿತ್ಯ ವೋಲ್ವೊ, ಐರಾವತ, ಮಲ್ಟಿ ಎಕ್ಸೆಲ್, ಸ್ಲೀಪರ್ ಸೇರಿದಂತೆ 600ಕ್ಕೂ ಹೆಚ್ಚು ಬಸ್ ಗಳನ್ನು ರಾಜ್ಯ ಹಾಗೂ ಹೊರರಾಜ್ಯಗಳಿಗೆ ಕಳುಹಿಸಲಾಗುತ್ತದೆ.
ಸೆಪ್ಟೆಂಬರ್ 12ರಿಂದ 15ರವರೆಗೆ ಮತ್ತು ಸೆಪ್ಟೆಂಬರ್ 15ರಿಂದ 30ರವರೆಗೆ ಹೆಚ್ಚುವರಿ ಬಸ್ ಗಳ ಅವಕಾಶ ಕಲ್ಪಿಸಲಾಗಿದೆ. ಈ 45 ಬಸ್ಗಳ ಪೈಕಿ 20ವಾಹನಗಳಲ್ಲಿ ಸೀಟುಗಳನ್ನು ಮುಂಗಡವಾಗಿ ಕಾಯ್ದಿರಿಸಲಾಗಿದೆ. ಹಬ್ಬದ ನಿಮಿತ್ತ ಹೆಚ್ಚಿನ ಜನರು ಖಾಸಗಿ ಬಸ್ಗಳನ್ನು ಬುಕ್ ಮಾಡುತ್ತಿದ್ದಾರೆ.

ಇದರ ಪ್ರಯೋಜನ ಪಡೆದುಕೊಂಡಿರುವ ಟ್ರಾವೆಲ್ ಏಜೆನ್ಸಿಗಳು ದರವನ್ನು ಎರಡರಿಂದ ಮೂರು ಪಟ್ಟು ಹೆಚ್ಚಿಸಿವೆ. ಮೈಸೂರು ರಸ್ತೆ ನಿಲ್ದಾಣದಿಂದ 163 ಬಸ್ ಗಳನ್ನು ಮೈಸೂರು, ಮಡಿಕೇರಿ, ಕೇರಳ, ಕೊಯಮತ್ತೂರಿಗೆ ಸಂಚರಿಸುತ್ತದೆ. ಇಲ್ಲಿಯೂ ಶೇ.50ರಷ್ಟು ಸೀಟುಗಳು ಮುಂಗಡವಾಗಿ ಬುಕಿಂಗ್ ಆಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
BMTC ಬಸ್ಗಳಲ್ಲಿ ಟಿಕೆಟ್ ಇಲ್ಲದೆ ಓಡಾಡುವವರೇ ಎಚ್ಚರ! ಫೆಬ್ರವರಿಯಲ್ಲೇ 5 ಲಕ್ಷ ರೂ.ದಂಡ ವಸೂಲಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ











Click it and Unblock the Notifications