ಬೆಂಗಳೂರಿನಲ್ಲಿ 34 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು, ಜೂನ್ 17: ಮತ್ತೊಂದು ಅಮಾನವೀಯ ಘಟನೆಗೆ ರಾಜಧಾನಿ ಬೆಂಗಳೂರು ಸಾಕ್ಷಿಯಾಗಿದೆ. 34 ವರ್ಷದ ಮಹಿಳೆಯ ಮೇಲೆ ಬೆಂಗಳೂರಿನ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ.
ಘಟನೆ ಜೂನ್ 15 , ಗುರುವಾರದಂದು ನಡೆದಿರಬಹುದೆಂದು ಶಂಕಿಸಲಾಗಿದ್ದು, ಅರೆಪ್ರಜ್ಞಾವಸ್ಥೆಯಲ್ಲಿದ್ದ ಮಹಿಳೆ ಕುರಿತು ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸದ್ಯಕ್ಕೆ ಸಂತ್ರಸ್ತೆಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಆರೋಪಿಗಳ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಮಹಿಳೆ ಚೇತರಿಸಿಕೊಂಡ ಮೇಲಷ್ಟೇ ಘಟನೆಯ ಕುರಿತು ಮತ್ತಷ್ಟು ಮಾಹಿತಿ ಹೊರಬರಲಿದೆ ಎಂದು ಭಾರತೀನಗರ ಪೊಲೀಸರು ತಿಳಿಸಿದ್ದಾರೆ.












Click it and Unblock the Notifications