ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ

Recommended Video

      ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಯ್ಕೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 28 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 52ನೇ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಯ್ಕೆಯಾದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಪುನಃ ಬಿಬಿಎಂಪಿಯ ಅಧಿಕಾರ ಸಿಕ್ಕಿದೆ.

      ಶುಕ್ರವಾರ ಬಿಬಿಎಂಪಿ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಜಯನಗರ ವಾರ್ಡ್‌ನ ಕಾಂಗ್ರೆಸ್‌ ಸದಸ್ಯೆ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಬೆಂಗಳೂರು ನಗರದ ಪ್ರಥಮ ಪ್ರಜೆಯಾಗಿ ಆಯ್ಕೆಯಾದರು.

      ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಮೇಯರ್ ಪಟ್ಟಕ್ಕೆ ಬಿಜೆಪಿಯಿಂದ ಶೋಭಾ ಅಂಜನಪ್ಪ ನಾಮಪತ್ರ ಸಲ್ಲಿಸಿದ್ದರು, ಉಪ ಮೇಯರ್ ಪಟ್ಟಕ್ಕೆ ಪ್ರತಿಭಾ ಧನರಾಜ್ ನಾಮಪತ್ರ ಸಲ್ಲಿಸಿದ್ದರು.

      Gangambike elect as new mayor of BBMP

      ಕಾಂಗ್ರೆಸ್‌ನಿಂದ ಗಂಗಾಂಬಿಕೆ ಅವರು ಮೇಯರ್ ಪಟ್ಟಕ್ಕೆ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್ ಪಟ್ಟಕ್ಕೆ ರಮೀಳಾ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಹಲವು ಸದಸ್ಯರು ಮತದಾನ ಬಹಿಷ್ಕಾರ ಮಾಡಿ ಹೊರ ನಡೆದರು.

      ಗಂಗಾಂಬಿಕೆ ಅವರು 130 ಮತಗಳನ್ನು ಪಡೆದು ಬೆಂಗಳೂರು ನಗರದ 52ನೇ ಮೇಯರ್ ಆಗಿ ಆಯ್ಕೆಯಾದರು. ಉಪ ಮೇಯರ್ ಆಗಿ ರಮೀಳಾ ಅವರು ಆಯ್ಕೆಯಾದರು. ಉಪ ಮೇಯರ್ ರಮೀಳಾ ಅವರು 129 ಮತಗಳನ್ನು ಪಡೆದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+