ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ

|
Google Oneindia Kannada News

Recommended Video

ಬೆಂಗಳೂರಿನ 52ನೇ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಯ್ಕೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 28 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 52ನೇ ಮೇಯರ್ ಆಗಿ ಗಂಗಾಂಬಿಕೆ ಮಲ್ಲಿಕಾರ್ಜುನ್ ಆಯ್ಕೆಯಾದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಪುನಃ ಬಿಬಿಎಂಪಿಯ ಅಧಿಕಾರ ಸಿಕ್ಕಿದೆ.

ಬಿಬಿಎಂಪಿ ಚುನಾವಣೆ LIVE: ಮೇಯರ್ ಆಗಿ ಗಂಗಾಂಬಿಕೆ ಆಯ್ಕೆಬಿಬಿಎಂಪಿ ಚುನಾವಣೆ LIVE: ಮೇಯರ್ ಆಗಿ ಗಂಗಾಂಬಿಕೆ ಆಯ್ಕೆ

ಶುಕ್ರವಾರ ಬಿಬಿಎಂಪಿ ಮೇಯರ್, ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಿತು. ಜಯನಗರ ವಾರ್ಡ್‌ನ ಕಾಂಗ್ರೆಸ್‌ ಸದಸ್ಯೆ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರು ಬೆಂಗಳೂರು ನಗರದ ಪ್ರಥಮ ಪ್ರಜೆಯಾಗಿ ಆಯ್ಕೆಯಾದರು.

ಬಿಜೆಪಿಗೆ ಬೆಂಬಲ ಘೋಷಿಸಿದ ಜೆಡಿಎಸ್ ಕಾರ್ಪೊರೇಟರ್! ಬಿಜೆಪಿಗೆ ಬೆಂಬಲ ಘೋಷಿಸಿದ ಜೆಡಿಎಸ್ ಕಾರ್ಪೊರೇಟರ್!

ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಮೇಯರ್ ಪಟ್ಟಕ್ಕೆ ಬಿಜೆಪಿಯಿಂದ ಶೋಭಾ ಅಂಜನಪ್ಪ ನಾಮಪತ್ರ ಸಲ್ಲಿಸಿದ್ದರು, ಉಪ ಮೇಯರ್ ಪಟ್ಟಕ್ಕೆ ಪ್ರತಿಭಾ ಧನರಾಜ್ ನಾಮಪತ್ರ ಸಲ್ಲಿಸಿದ್ದರು.

Gangambike elect as new mayor of BBMP

ಕಾಂಗ್ರೆಸ್‌ನಿಂದ ಗಂಗಾಂಬಿಕೆ ಅವರು ಮೇಯರ್ ಪಟ್ಟಕ್ಕೆ ನಾಮಪತ್ರ ಸಲ್ಲಿಸಿದ್ದರು. ಉಪ ಮೇಯರ್ ಪಟ್ಟಕ್ಕೆ ರಮೀಳಾ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯ ಹಲವು ಸದಸ್ಯರು ಮತದಾನ ಬಹಿಷ್ಕಾರ ಮಾಡಿ ಹೊರ ನಡೆದರು.

ಬಿಬಿಎಂಪಿಯಲ್ಲೂ ಆಪರೇಷನ್ ಕಮಲ, ಮೇಯರ್ ಕುರ್ಚಿಗಾಗಿ ಕಸರತ್ತು ಬಿಬಿಎಂಪಿಯಲ್ಲೂ ಆಪರೇಷನ್ ಕಮಲ, ಮೇಯರ್ ಕುರ್ಚಿಗಾಗಿ ಕಸರತ್ತು

ಗಂಗಾಂಬಿಕೆ ಅವರು 130 ಮತಗಳನ್ನು ಪಡೆದು ಬೆಂಗಳೂರು ನಗರದ 52ನೇ ಮೇಯರ್ ಆಗಿ ಆಯ್ಕೆಯಾದರು. ಉಪ ಮೇಯರ್ ಆಗಿ ರಮೀಳಾ ಅವರು ಆಯ್ಕೆಯಾದರು. ಉಪ ಮೇಯರ್ ರಮೀಳಾ ಅವರು 129 ಮತಗಳನ್ನು ಪಡೆದರು.

English summary
Jayanagar ward (153) Congress corporator Gangambike Mallikarjun elected as Bruhat Bengaluru Mahanagara Palike 52 mayor. BBMP mayor election held on September 28, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X