• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನ ನೂತನ ಮೇಯರ್ ಆಗಿ ಗಂಗಾಂಬಿಕೆ ಬಹುತೇಕ ಖಚಿತ

|

ಬೆಂಗಳೂರು, ಸೆ.27: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಪಟ್ಟ ಜಯನಗರ ವಾರ್ಡ್ ಕಾರ್ಪೊರೇಟರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರಿಗೆ ಒಲಿಯುವುದು ಬಹುತೇಕ ಖಚಿತವಾಗಿದೆ.

ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಈ ಮೂಲಕ ತಮ್ಮ ಸಾಮರ್ಥ್ಯವನ್ನು ಪಕ್ಷದ ಒಳಗೆ ಹಾಗೂ ಹೊರಗಿನ ಎದುರಾಳಿಗಿಗೆ ಪ್ರದರ್ಶಿಸಿದ್ದಾರೆ. ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆಗೆ ಸಕಲ ಸಿದ್ಧತೆ ನಡೆದಿದೆ. ಸೆ.28ರಂದು ಬೆಳಗ್ಗೆ 8ರಿಂದ 9.30ರ ವರೆಗೆ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಲು ಅವಕಾಶವಿರುತ್ತದೆ.

ಬೆಂಗಳೂರು ಮೇಯರ್ ಆಯ್ಕೆಗೆ 24 ಗಂಟೆ ಬಾಕಿ: ಯಾರಿಗೆ ಒಲಿಯುತ್ತೆ ಗೌನ್?

ಬಿಬಿಎಂಪಿ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ. 11.30ರ ನಂತರ ಮತದಾರರ ಹಾಜರಾತಿ ಪ್ರಕ್ರಿಯೆ ಆರಂಭವಾಗುತ್ತದೆ. ಮೇಯರ್ ಅಭ್ಯರ್ಥಿ ಆಯ್ಕೆ ವಿಚಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಭೆ ನಡೆದಿದೆ, ರಾಮಲಿಂಗಾರೆಡ್ಡಿ, ಎನ್‌ಎ ಹ್ಯಾರಿಸ್, ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಅವರನ್ನು ಪ್ರತ್ಯೇಕ ಮಾತುಕತೆಗೆ ದಿನೇಶ್ ಗುಂಡೂರಾವ್ ಕರೆದೊಯ್ದಿದ್ದಾರೆ.

ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

ಬಿಬಿಎಂಪಿ ಮೇಯರ್‌ ಚುನಾವಣೆ: ಕಾಂಗ್ರೆಸ್‌ ಹಿರಿಯ ನಾಯಕರ ಮಧ್ಯೆ ಜಟಾಪಟಿ

ಇನ್ನೊಂದೆಡೆ ನೀವೇ ನಿರ್ಧರಿಸಿ, ಕಾರ್ಪೊರೇಟರ್ ಗಳ ಅಭಿಪ್ರಾಯ ಸಂಗ್ರಹಿಸಿ ಎಂದು ಹೇಳಿ ಸಿದ್ದರಾಮಯ್ಯ ಹೊರಟಿದ್ದಾರೆ. ಶುಕ್ರವಾರ ಮೊದಲಿಗೆ ಮೇಯರ್ ಹುದ್ದೆಗೆ ನಾಮಪತ್ರ ಸಲ್ಲಿಸಿದವರ ಹೆಸರನ್ನು ಘೋಷಣೆ ಮಾಡಲಾಗುತ್ತದೆ ಬಳಿಕ ಪರ, ವಿರೋಧದ ಬಗ್ಗೆ ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಮಾಡಲಾಗುತ್ತದೆ. ಮಧ್ಯಾಹ್ನ 1 ಗಂಟೆಯೊಳಗೆ ನಗರಕ್ಕೆ ಆಯ್ಕೆ ಪ್ರಕ್ರಿಯೆ ಮುಗಿಯಲಿದೆ.

English summary
Sources in Congress party ha e confirmed that Jayanagara corporator Gangambika Mallikarjun will be new mayor of Bengaluru city. The party high command will declare the same shortly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X