ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡ ಪೇದೆಗಳಿಂದ ಡ್ರಗ್ ವ್ಯಾಪಾರ: ಇಬ್ಬರು ಪೇದೆಗಳ ಬಂಧನ
ಬೆಂಗಳೂರು, ಜ. 18: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಹೆಚ್ಚುವರಿ ಗಳಿಕೆಗಾಗಿ ಗಾಂಜಾ ವ್ಯಾಪಾರ ಮಾಡಿ ಸಿಕ್ಕಿಬಿದ್ದಿದ್ದಾರೆ. ಡ್ರಗ್ ಪೆಡ್ಲರ್‌ಗಳಿಂದ ಗಾಂಜಾ ತರಿಸಿ ಮಾರಾಟ ಮಾಡುತ್ತಿದ್ದ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್‌ಗಳನ್ನು ಬಂಧಿಸಲಾಗಿದೆ.
ಶಿವಕುಮಾರ್ ಮತ್ತು ಸಂತೋಷ್ ಬಂಧಿತ ಕಾನ್‌ಸ್ಟೇಬಲ್‌ಗಳು. ಇವರಿಬ್ಬರು ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭದ್ರತೆಗೆಂದು ಸಂತೋಷ್ ಮತ್ತು ಶಿವಕುಮಾರ್ ನಿಯೋಜನೆಗೊಂಡಿದ್ದರು. ಈ ಮೊದಲು ಡ್ರಗ್ ಪೆಡ್ಲರ್‌ಗಳ ಜತೆ ಸಂಪರ್ಕ ಹೊಂದಿದ್ದ ಕಾನ್‌ಸ್ಟೇಬಲ್ ಗಳು ಮಾದಕ ವಸ್ತು ತರಿಸಿ ಬೇರೆಯವರಿಗೆ ಮಾರಾಟ ಮಾಡುತ್ತಿದ್ದರು. ಒಮ್ಮೆ ಸಿಸಿಬಿ ಪೊಲೀಸರ ಕೈಗೂ ಸಿಕ್ಕಿಬಿದ್ದಿದ್ದರು ಎನ್ನಲಾಗಿದೆ. ಆ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯ ಭದ್ರತೆಗೆ ನಿಯೋಜನೆಗೊಂಡಿದ್ದರು.

ಅಖಿಲ್ ರಾಜ್ ಮತ್ತು ಅಮ್ಜದ್ ಎಂಬ ಡ್ರಗ್ ಪೆಡ್ಲರ್‌ಗಳ ಬಳಿ ಗಾಂಜಾ ಖರೀದಿ ಮಾಡಿದ್ದ ಸಂತೋಷ್ ಮತ್ತು ಶಿವಕುಮಾರ್ ಹಣ ಕೊಟ್ಟಿರಲಿಲ್ಲ. ಕೇಳಿದರೆ, ನಾವು ಪೊಲೀಸರು ಎಂದು ಹೆದರಿಸಿದ್ದರು. ಈ ವಿಚಾರವಾಗಿ ಪೆಡ್ಲರ್‌ಗಳ ಜತೆ ಜಗಳ ನಡೆದು ಹಲ್ಲೆಗೆ ಮುಂದಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಆರ್.ಟಿ. ನಗರ ಹೊಯ್ಸಳ ಸಿಬ್ಬಂದಿ ಇಬ್ಬರು ಪೊಲೀಸ್ ಪೇದೆಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Recommended Video
ಇಬ್ಬರು ಗಾಂಜಾ ಪೆಡ್ಲರ್‌ಗಳು ಸೇರಿ ನಾಲ್ವರನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಭದ್ರತೆಗೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿಯೇ ಮಾದಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದಿರುವುದನ್ನು ನೋಡಿ ಪೊಲೀಸರೇ ಬೆಚ್ಚಿ ಬಿದ್ದಿದ್ದಾರೆ.
-
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications