ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ!
ಬೆಂಗಳೂರಿನಲ್ಲಿ ಕಸದ ಸಮಸ್ಯೆ ಹೆಚ್ಚಳವಾಗಿದ್ದು. ಎಲ್ಲೆಂದರಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿರುವುದು ಹೆಚ್ಚಾಗಿದೆ. ನಗರದಲ್ಲಿ ಕಸ ವಿಲೇವಾರಿ ಸಮಸ್ಯೆಯು ಕಳೆದ 15 ದಿನಗಳಿಂದ ಹೆಚ್ಚಳವಾಗಿದೆ. ಇದೀಗ ಬೆಂಗಳೂರಿನಲ್ಲಿ ಕಸದ ಸಮಸ್ಯೆ ವಿಪರೀತವಾಗಿದ್ದು. ಕೆಲವು ಕಡೆಗಳಲ್ಲಿ ಮೂಗು ಮುಚ್ಚಿಕೊಂಡು ನಡೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಆದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚಾಗಿದ್ದ ಕಸದ ಸಮಸ್ಯೆಯನ್ನು ನಿವಾರಣೆ ಮಾಡಲಾಗಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಮಾತನಾಡಿರುವ ಅವರು, ನಗರದಲ್ಲಿ ಮಿಟ್ಟಗಾನಹಳ್ಳಿ ಹಾಗೂ ಕಣ್ಣೂರು ಭೂಭರ್ತಿ ಪ್ರದೇಶದದಲ್ಲಿ ಕಸ ವಿಲೇವಾರಿ ಮಾಡುವ ವಿಚಾರವಾಗಿ ಸ್ಥಳೀಯರಿಂದ ಆಗಿದ್ದ ಸಮಸ್ಯೆಯನ್ನು ಬಹುತೇಕ ಬಗೆಹರಿಸಲಾಗಿದೆ. ಎಂದಿನಂತೆ ಕಸ ವಿಲೇವಾರಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದಿದ್ದಾರೆ. ಆದರೆ ಮಂಗಳವಾರವೂ ನಗರದ ವಿವಿಧ ಭಾಗದಲ್ಲಿ ಕಸಕ್ಕೆ ಬೆಂಕಿ ಹಾಕುತ್ತಿರುವುದು ಮುಂದುವರಿದಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸಕ್ಕೆ ಸಂಬಂಧಿಸಿದಂತೆ ಮಿಶ್ರ ಕಸವನ್ನು ಭೂಭರ್ತಿ ಘಟಕ, ಹಸಿ ಕಸವನ್ನು ಸಂಸ್ಕರಣಾ ಘಟಕಗಳು ಹಾಗೂ ಒಣ ಕಸವನ್ನು ಕಸ ತ್ಯಾಜ್ಯ ಸಂಗ್ರಹಣಾ ಘಟಕಗಳಿಗೆ ಕಳುಹಿಸಲಾಗುತ್ತಿದೆ. ಘನತ್ಯಾಜ್ಯಕ್ಕಾಗಿ ಹೊಸ ಯೋಜನೆಯಂತೆ ಟೆಂಡರ್ ಕರೆಯಲಾಗಿತ್ತು. ಆ ಟೆಂಡರ್‌ನಲ್ಲಿ ಭಾಗವಹಿಸಿದ್ದವರ ಸಂಖ್ಯೆ ತುಂಬಾ ಕಡಿಮೆಯಾಗಿತ್ತು. ಹೀಗಾಗಿ, ಟೆಂಡರ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗುತ್ತಿಗೆದಾರರು ಯಾಕೆ ಭಾಗವಹಿಸಿಲ್ಲ ಎನ್ನುವ ಕಾರಣಗಳನ್ನು ಗುರುತಿಸಲಾಗಿದೆ. ಇದೀಗ ಎಲ್ಲಾ ಅಂಶಗಳನ್ನು ಸೇರ್ಪಡೆ ಮಾಡಿ ಪುನರ್ ಟೆಂಡರ್ ಕರೆಯಲಾಗುತ್ತಿದೆ. ಅಲ್ಲದೆ ಘನತ್ಯಾಜ್ಯ ಸಮಗ್ರ ವಿಲೇವಾರಿಗಾಗಿ ಹೊಸದಾಗಿ ಜಾಗಗಳನ್ನು ಕೂಡಾ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ಸ್ಥಳೀಯರು ಹಾಗೂ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರ ನಡುವೆ ಕೆಲ ಭಿನ್ನಾಭಿಪ್ರಾಯಗಳಿಂದ ಕಸದ ಸಮಸ್ಯೆ ಉಂಟಾಗಿತ್ತು. ಬಹುತೇಕ ಸಮಸ್ಯೆಯನ್ನು ಬಗೆಹರಿಸಲಾಗಿದೆ. 500 ಕೋಟಿ ರೂ. ವೆಚ್ಚದಲ್ಲಿ ಗ್ರಾಮೀಣಾಭಿವೃದ್ಧಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅಭಿವೃದ್ಧಿಗಾಗಿ ವ್ಯಯಿಸಬೇಕಿರುವ ಹಣದ ವಿಚಾರವಾಗಿ ಟೆಂಡರ್ ಮಾಡಿ ಕಾರ್ಯಾದೇಶ ನೀಡಿ ಶೀಘ್ರ ಕೆಲಸ ಪ್ರಾರಂಭಿಸಲಾಗುವುದು ಎಂದು ಹೇಳಿದರು.

ಮಿಟ್ಟಗಾನಹಳ್ಳಿ, ಕಣ್ಣೂರಿನ ಬಳಿ ರಾತ್ರಿ ವೇಳೆ ಕಸ ವಿಲೇವಾರಿ ಮಾಡಲಾಗುತ್ತಿದೆ. ಹಗಲಿನಲ್ಲಿಯೂ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇರುವ ಸಣ್ಣ-ಪುಟ್ಟ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯು ಕೂಡಾ ಸ್ಥಳಕ್ಕೆ ಭೇಟಿ ನೀಡಿ ಇರುವ ಸಮಸ್ಯೆಗಳನ್ನು ಬಗೆಹರಿಸಲಿದ್ದಾರೆ ಎಂದು ಹೇಳಿದರು.
ಲಿಚೆಟ್ ಸಂಸ್ಕರಣೆಗೆ ಕ್ರಮ: ಮಿಟ್ಟಗಾನಹಳ್ಳಿ ಭೂಭರ್ತಿ ಘಟಕದಲ್ಲಿ 275 ಕೋಟಿ ಲೀಟರ್ ಲಿಚೆಟ್ ಸಂಗ್ರಹವಾಗಿದೆ. ಈ ನೀರಿನ್ನು ಸಂಸ್ಕರಿಸಲು ಟೆಂಡರ್ ಕರೆಯಲಾಗಿದ್ದು. 3 ರಿಂದ 4 ವರ್ಷಗಳಲ್ಲಿ ಸಮಸ್ಯೆ ಬಗೆಹರಿಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದೀಗ 100 ಕೆ.ಎಲ್.ಡಿ ಹಾಗೂ 25 ಕೆ.ಎಲ್.ಡಿ ಸಂಸ್ಕರಣ ಘಟಕಗಳಿವೆ. ಹೊಸದಾಗಿ 2000 ಕೆ.ಎಲ್.ಡಿ ಘಟಕವನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದರ ಮೂಲಕ ಲಿಚೆಟ್ ಅನ್ನು ಸಂಸ್ಕರಿಸಲಾಗುವುದು. ಲಿಚೆಟ್ ಸಂಸ್ಕರಣೆಗಾಗಿ ಸರಾಸರಿ 474 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ ಎಂದಿದ್ದಾರೆ.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications