ಪಿಎಫ್ ವಿಚಾರದಲ್ಲಿ ನೌಕರರು ಬೀದಿಗಿಳಿದಿದ್ದು ಇದೇ ಮೊದಲಲ್ಲ
ಬೆಂಗಳೂರು, ಏಪ್ರಿಲ್ 20 : ಕೇಂದ್ರ ಸರ್ಕಾರದ ಪಿಎಫ್ ನೀತಿಯ ವಿರುದ್ಧ ಗಾರ್ಮೆಂಟ್ಸ್ ನೌಕರರು ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ನೌಕರರು ಪಿಎಫ್ ವಿರುದ್ಧ ಹೋರಾಟ ಮಾಡುತ್ತಿರುವುದು ಇದೇ ಮೊದಲಲ್ಲ.
2001ರಲ್ಲಿಯೂ ಬೆಂಗಳೂರಿನಲ್ಲಿ ನೌಕರರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆಗ ಗಾರ್ಮೆಂಟ್ಸ್ನಲ್ಲಿ ಕೆಲಸ ಕಳೆದುಕೊಂಡ ನೌಕರರಿಗೆ ಪಿಎಫ್ ಅರ್ಜಿಯನ್ನು ನೀಡಲು ನಿರಾಕರಿಸಿದ ಪಿಎಫ್ ಕಚೇರಿಯ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. [ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್]

ಗಾರ್ಮೆಂಟ್ಸ್ ನೌಕರರು 2001ರಲ್ಲಿ ಪ್ರತಿಭಟನೆ ನಡೆಸಿದಾಗ ತುಮಕೂರು ರಸ್ತೆಯಲ್ಲಿ 4 ಗಂಟೆಗಳ ಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಎರಡು ದಿನಗಳ ಕಾಲ ನೌಕರರು ಪ್ರತಿಭಟನೆ ನಡೆಸಿದ್ದರು. ಆದರೆ, ಆಗ ಯಾವುದೇ ಗಲಭೆ ನಡೆದಿರಲಿಲ್ಲ. [ಬೆಂಗಳೂರು : ಪ್ರತಿಭಟನೆ ಗಲಭೆ ಆಗಿದ್ದು ಹೇಗೆ?]
ಒನ್ ಇಂಡಿಯಾ ಜೊತೆ ಮಾತನಾಡಿದ ಗಾರ್ಮೆಂಟ್ಸ್ ನೌಕರರು ನಾವು ನಮ್ಮ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದೇವೆ. ಗಲಭೆ ಮಾಡುವುದು ನಮ್ಮ ಉದ್ದೇಶವಲ್ಲ. ನಾವು ಶಾಂತಿಯುತವಾಗಿಯೇ ಪ್ರತಿಭಟನೆ ಮಾಡಿದ್ದೇವೆ ಎಂದರು. [ಭವಿಷ್ಯ ನಿಧಿ ನೀತಿ ಬದಲಾವಣೆ, ಸರ್ಕಾರದ ಕೈ ಸುಟ್ಟಿದ್ದೇಕೆ?]
2001ರಲ್ಲಿಯೂ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ್ದೆವು. ಆಗ ಗಾರ್ಮೆಂಟ್ಸ್ ಕಾರ್ಖನೆ ಮಾಲೀಕರ ವಿರುದ್ಧವೂ ನಾವು ಆಕ್ರೋಶ ವ್ಯಕ್ತಪಡಿಸಿದ್ದೆವು. ಕೆಲವು ಮಾಲೀಕರು ನೌಕರರನ್ನು ಇದ್ದಕ್ಕಿದ್ದಂತೆ ಕೆಲಸದಿಂದ ಕಿತ್ತು ಹಾಕಿದ್ದರು ಅದರ ವಿರುದ್ಧವೂ ಹೋರಾಟ ಮಾಡಲಾಗಿತ್ತು ಎಂದು ನೆನೆಪು ಮಾಡಿಕೊಳ್ಳುತ್ತಾರೆ ನೌಕರರು. [ಪಿಟಿಐ ಚಿತ್ರ]
-
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications