ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಬಿಡಿಎ ಅಪಾರ್ಟ್‌ಮೆಂಟ್‌ಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್

|
Google Oneindia Kannada News

ಬೆಂಗಳೂರು,ಜನವರಿ 20: ಬಿಡಿಎ ಅಪಾರ್ಟ್‌ಮೆಂಟ್‌ಗಳಿಗೆ ಪೈಪ್‌ಲೈನ್ ಮೂಲಕ ಗ್ಯಾಸ್ ಸರಬರಾಜು ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್‌ಆರ್ ವಿಶ್ವನಾಥ್ ತಿಳಿಸಿದ್ದಾರೆ.

ಮಾಳಗಾಳದಲ್ಲಿ ನಿರ್ಮಾಣವಾಗಿರುವ ಬ್ರಹ್ಮಗಿರಿ ವಸತಿ ಸಂಕೀರ್ಣಕ್ಕೆ ಭೇಟಿ ನೀಡಿ ಮಾತನಾಡಿದರು. ಮಾಳಗಾಳ ಸೇರಿದಂತೆ ಬಿಡಿಎ ಕೈಗೆತ್ತಿಕೊಂಡಿರುವ ವಸತಿ ಸಂಕೀರ್ಣಗಳಿಗೆ ಪೈಪ್‌ಲೈನ್ ಮೂಲಕ ಅಡುಗೆ ಅನಿಲ ಪೂರೈಸುವಂತೆ ಕೇಂದ್ರ ಸರ್ಕಾರಿ ಸ್ವಾಮ್ಯದ ಗೇಲ್ ಸಂಸ್ಥೆಗೆ ಪತ್ರ ವ್ಯವಹಾರ ನಡೆಸಲಾಗಿದೆ ಎಂದರು.

 ಮೈಸೂರಿನಲ್ಲೂ ಬಿಡಿಎ ಮಾದರಿ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಮುಡಾ ಯೋಜನೆ ಮೈಸೂರಿನಲ್ಲೂ ಬಿಡಿಎ ಮಾದರಿ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಮುಡಾ ಯೋಜನೆ

ಈಗಾಗಲೇ ಕೆಲವು ವಸರಿ ಸಂಕೀರ್ಣಗಳಿಗೆ ಅಡುಗೆ ಅನಿಲ ಪೂರೈಸುವ ಬಗ್ಗೆ ಗೇಲ್ ಸಂಸ್ಥೆಯವರು ಆಸಕ್ತಿ ತೋರಿದ್ದಾರೆ ಎಂದು ಮಾಹಿತಿ ನೀಡಿದರು. ಮಾಳಗಾಳ ಅಪಾರ್ಟ್‌ಮೆಂಟ್‌ನಲ್ಲಿ ನಿವಾಸಿಗಳ ಅನುಕೂಲಕ್ಕಾಗಿ ಓಪನ್ ಜಿಮ್ ಮತ್ತುಮಕ್ಕಳಿಗಾಗಿ ಕ್ರೀಡಾ ಪರಿಕರಗಳನ್ನು ಅಳವಡಿಸಬೇಕು.

Gas Pipeline Connections To BDA Apartments: SR Vishwanath

ಅದೇ ರೀತಿ ಅಪಾರ್ಟ್‌ಮೆಂಟ್‌ನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

Recommended Video

Mysore ನುಗು ಡ್ಯಾಂ ನೀರಿನಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ| Oneindia Kannada

ಬಳಿಕ ನಾಗರಬಾವಿ ವ್ಯಾಪ್ತಿಯ ಚಂದ್ರಾ ಲೇಔಟ್‌ನಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಂಕೀರ್ಣಕ್ಕೆ ಭೇಟಿ ನೀಡಿ,ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ನಾಗರಿಕರಿಗೆ ಹಂಚಿಕೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಸೂಚನೆ ನೀಡಿದರು.

English summary
BDA President SR Vishwanath Said that Gas Pipeline Connections To BDA Apartments soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X