ಲಿಂಗಾಯತ ರುದ್ರಭೂಮಿಯಲ್ಲಿ ಗೌರಿ ಅಂತಿಮ ಸಂಸ್ಕಾರ
Recommended Video

ಬೆಂಗಳೂರು, ಸೆ. 06: ಲಂಕೇಶ್ ಪತ್ರಿಕೆ ಸಂಪಾದಕಿ, ಸಮಾಜಮುಖಿ ಚಿಂತಕಿ ಗೌರಿ ಲಂಕೇಶ್ ಅವರ ಅಂತಿಮ ಸಂಸ್ಕಾರದ ಬಗ್ಗೆ ಇದ್ದ ಗೊಂದಲವನ್ನು ಅವರ ಸೋದರ ಇಂದ್ರಜಿತ್ ಲಂಕೇಶ್ ಅವರು ಪರಿಹರಿಸಿದ್ದಾರೆ. ಯಾವುದೇ ಸಂಪ್ರದಾಯ ಪಾಲಿಸದೆ ಸರಳವಾಗಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಕಲ ಸರ್ಕಾರಿ ಗೌರವದೊಂದಿಗೆ ಗೌರಿ ಲಂಕೇಶ್ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಟಿ. ಆರ್ ಮಿಲ್ ರುದ್ರಭೂಮಿಯಲ್ಲಿ ಬುಧವಾರ ಸಂಜೆ ವೇಳೆ ಅಂತ್ಯಕ್ರಿಯೆ ನಡೆಯಲಿದೆ. ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ರವೀಂದ್ರ ಕಲಾಕ್ಷೇತ್ರದ ಹಿಂಬದಿಯಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿರಿಸಲಾಗಿದೆ.

ಇಂದ್ರಜಿತ್ ಹೇಳಿಕೆ: ಲಿಂಗಾಯತ ರುದ್ರಭೂಮಿಯಲ್ಲಿ ಸಕಲ ವ್ಯವಸ್ಥೆಯಾಗಿದ್ದು, ಪಾರ್ಥೀವ ಶರೀರರ ಮೇಲೆ ಹೂಗಳನ್ನಿಟ್ಟು ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಯಾವುದೇ ಸಂಪ್ರದಾಯವನ್ನು ಪಾಲಿಸಲಾಗುವುದಿಲ್ಲ ಎಂದು ಸೋದರ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಆಜಾದ್ ನಗರ ಪಾಲಿಕೆ ಸದಸ್ಯೆ ಸುಜಾತ ಡಿಸಿ ರಮೇಶ್ ಮಾರ್ಗದರ್ಶನ ದಂತೆ ಗುಂಡಿ ತೆಗೆಯುವ ಕಾರ್ಯ ನಡೆಯುತ್ತಿದ್ದು, ಹೂಳುವ ಸಂಪ್ರದಾಯದಂತೆ ಸಂಜೆ ಅಂತ್ಯ ಸಂಸ್ಕಾರ ನಡೆಯಲಿದೆ. ರಾಜರಾಜೇಶ್ವರಿ ನಗರದಲ್ಲಿ ಮಂಗಳವಾರ ರಾತ್ರಿ ವೇಳೆ ಗೌರಿ ಲಂಕೇಶ್ ರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications