ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 18 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಕೋರ್ಟ್

|
Google Oneindia Kannada News

ಬೆಂಗಳೂರು, ಅಕ್ಟೋಬರ್‌ 31: ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯವು ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ 18 ಆರೋಪಿಗಳ ವಿರುದ್ಧ ಶನಿವಾರ ಆರೋಪಗಳನ್ನು ರೂಪಿಸಿದೆ. ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಕಲಾಪವು ವಿಡಿಯೋ ಕಾನ್ಫೆರೆನ್ಸಿಂಗ್‌ ಮೂಲಕ ನಡೆದಿದ್ದು, ಆರೋಪಿಗಳಿಗೆ ಕನ್ನಡ ಹಾಗೂ ಮರಾಠಿ ಭಾಷೆಯಲ್ಲಿ ಆರೋಪಗಳನ್ನು ಓದಿ ಹೇಳಲಾಗಿದೆ.

ಶನಿವಾರ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದ ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯವು ಪ್ರಕರಣದ ವಿಚಾರಣೆ ಆರಂಭಿಸಲು ಡಿಸೆಂಬರ್‌ 8ರಂದು ದಿನಾಂಕ ಪ್ರಕಟ ಮಾಡಲಿದೆ.

 ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್‌ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ ಸುಪ್ರೀಂ ಗೌರಿ ಹತ್ಯೆ ಪ್ರಕರಣ: ಆರೋಪಿ ಮೋಹನ್‌ ವಿರುದ್ಧ ಕೋಕಾ ಕಾಯ್ದೆ ಮರುಸ್ಥಾಪಿಸಿದ ಸುಪ್ರೀಂ

ಇನ್ನು ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನು ಆರೋಪಿಗಳಿಗೆ ಕೊಲೆ, ಕ್ರಿಮಿನಲ್‌ ಪಿತೂರಿ, ಸಂಘಟಿತ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳು, 2000ರ ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ ಹಾಗೂ 1959ರ ಶಸ್ತ್ರಾಸ್ತ್ರ ಕಾಯಿದೆ, ಅಡಿಯಲ್ಲಿ ಆರೋಪಗಳನ್ನು ರೂಪಿಸಲಾಗಿದೆ.

Gauri Lankesh murder case: Charges framed against 18 accused

ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ಬಾಡ್, ಅಮಿತ್ ದೆಗ್ವೇಕರ್, ಭರತ್ ಕುರಣೆ, ಸುರೇಶ್ ಹೆಚ್ ಎಲ್, ರಾಜೇಶ್ ಬಂಗೇರ, ಸುಧನ್ವ ಗೊಂದಲೇಕರ್, ಶರದ್ ಕಲಸ್ಕರ್, ಮೋಹನ್ ನಾಯಕ್, ವಾಸುದೇವ್ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ ಎಡವೆ, ಶ್ರೀಕಾಂತ್ ಪಂಗರ್ಕರ್, ಕೆ ಟಿ ನವೀನ್ ಕುಮಾರ್ ಹಾಗೂ ಋಷಿಕೇಶ್ ದಿಯೋದಿಕರ್ ಅವರ ವಿರುದ್ಧ ಆರೋಪ ರೂಪಿಸಲಾಗಿದೆ.

ಆರೋಪಿಗಳು ಮುಂಬೈ, ಪುಣೆ ಸೇರಿ ಬೇರೆ ಬೇರೆ ಜೈಲುಗಳಲ್ಲಿ ಇದ್ದಾರೆ. ಈ ಹಿನ್ನೆಲೆ ಎಲ್ಲರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಈ ನಿಟ್ಟಿನಲ್ಲಿ ಆರೋಪಿಗಳನ್ನು ಮುಂಬೈನ ಆರ್ಥರ್‌ ರೋಡ್‌ ಜೈಲು, ಪುಣೆಯ ಯರವಾಡ ಜೈಲು, ತುಮಕೂರು, ಮೈಸೂರು, ಬಳ್ಳಾರಿ ಹಾಗೂ ಶಿವಮೊಗ್ಗದ ಜೈಲುಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಕರೆತರುವಂತೆ ಆದೇಶ ನೀಡಲಾಗಿತ್ತು.

ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ ಗೌರಿ ಹತ್ಯೆ ಪ್ರಕರಣ: ಕವಿತಾ ಲಂಕೇಶ್‌ ಅರ್ಜಿ ಪರಿಗಣಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ ಸುಪ್ರಿಂ

ಈ ನಡುವೆ ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚನೆ ನೀಡಿದೆ. ಹಾಗೆಯೇ ಕೊರೊನಾ ವೈರಸ್‌ ಸೋಂಕು ಹಿನ್ನೆಲೆಯಲ್ಲಿಯೂ ವಿಚಾರಣೆಯು ವಿಳಂಬವಾಗುತ್ತಿದೆ. ಈ ನಿಟ್ಟಿನಲ್ಲಿ ಆರೋಪ ನಿಗದಿ ಮಾಡುವುದು ಮುಂದೂಡಿಕೆ ಆಗುತ್ತಲಿತ್ತು. ಈ ಕಾರಣದಿಂದಾಗಿ ನಗರದ ಪ್ರಧಾನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಧೀಶ ಎ ಬಿ ಕಟ್ಟಿ, ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಆರೋಪವನ್ನಿ ನಿಗದಿ ಮಾಡಲು ತೀರ್ಮಾನ ಮಾಡಿದ್ದರು.

ಇನ್ನು ಇತ್ತೀಚೆಗೆ ಪತ್ರಕರ್ತೆ ಗೌರಿ ಲಂಕೇಶ್‌ ಕೊಲೆ ಆರೋಪಿ ಮೋಹನ್‌ ನಾಯಕ್‌ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೆಸಿಒಸಿಎ) ಅಡಿಯಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಮೂಲಕ ಆರೋಪಿ ಮೋಹನ್‌ ನಾಯಕ್‌ ವಿರುದ್ಧದ ಈ ಕೋಕಾ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ಮರುಸ್ಥಾಪನೆ ಮಾಡಿದೆ. ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ (ಕೋಕಾ) ಆರೋಪ ಕೈಬಿಟ್ಟಿರುವುದನ್ನು ಪ್ರಶ್ನಿಸಿ ಗೌರಿ ಲಂಕೇಶ್‌ ಸಹೋದರಿ, ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಿ, ಈ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಇತರರಿಗೆ ನೋಟಿಸ್ ನೀಡಿತ್ತು. ಆರೋಪಿ ವಿರುದ್ಧ ಕೋಕಾ ಆರೋಪ ಮರುಸ್ಥಾಪನೆ ಮಾಡುವ ಮೂಲಕ ಕವಿತಾ ಲಂಕೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದೆ.

 ಸೆಪ್ಟೆಂಬರ್‌ 5 ಅನ್ನು 'ಗೌರಿ ಲಂಕೇಶ್‌ ದಿನ' ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ ಸೆಪ್ಟೆಂಬರ್‌ 5 ಅನ್ನು 'ಗೌರಿ ಲಂಕೇಶ್‌ ದಿನ' ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ

ಗೌರಿ ಲಂಕೇಶ್‌ರನ್ನು 2017ರಂದು ಸೆಪ್ಟೆಂಬರ್‌ 5 ರಂದು ದುಷ್ಕರ್ಮಿಗಳು ಬೆಂಗಳೂರಿನ ನಿವಾಸದೆದುರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಧಾರವಾಡದಲ್ಲಿ ಹಿರಿಯ ಸಂಶೋಧಕ ಎಂ ಎಂ ಕಲಬುರ್ಗಿ, ಕೊಲ್ಹಾಪುರದಲ್ಲಿ ಚಿಂತಕ ಗೋವಿಂದ ಪನ್ಸಾರೆ ಅವರ ಹತ್ಯೆಗೆ ಬಳಸಿದ ಪಿಸ್ತೂಲನ್ನೇ ಗೌರಿ ಅವರ ಹತ್ಯೆಗೆ ಬಳಕೆಯಾಗಿದೆ ಎಂದು ಎಸ್‌ಐಟಿ ತಿಳಿಸಿತ್ತು.

Recommended Video

ಅಪ್ಪು ಕೊಟ್ಟ ಎರಡು ಕಣ್ಣುಗಳು ನಾಲ್ಕು ಮಂದಿಗೆ‌ ಜೋಡಣೆಯಾಗಿದ್ದು ಹೇಗೆ? | Oneindia Kannada

(ಒನ್‌ಇಂಡಿಯಾ ಸುದ್ದಿ)

English summary
Gauri Lankesh murder case: Charges framed against 18 accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X