ಗೌರಿ ಲಂಕೇಶ್ ಹತ್ಯೆ : ಸಿಸಿಟಿವಿ ದೃಶ್ಯಗಳು ಪೊಲೀಸರ ವಶಕ್ಕೆ

Recommended Video

      Gauri Lankesh Demise : Bengaluru police have secured the footage of the CCTV

      ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಸಿಟಿವಿ ದೃಶ್ಯಾವಳಿ ಮಹತ್ವದ ಪಾತ್ರ ವಹಿಸಲಿದೆ. ಪೊಲೀಸರು ಗೌರಿ ಲಂಕೇಶ್ ಮನೆಯಿಂದ ವಶಕ್ಕೆ ಪಡೆದುಕೊಂಡ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

      ಮಂಗಳವಾರ ರಾತ್ರಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಹತ್ಯೆಯಾಗಿದೆ. ಮನೆಯ ಮುಂದಿದ್ದ ಎರಡು ಸಿಸಿಟಿವಿಯಲ್ಲಿ ಬೈಕ್‌ನಲ್ಲಿ ಬಂದ ಮುಸುಕುಧಾರಿಗಳು ಗುಂಡು ಹಾರಿಸಿರುವ ದೃಶ್ಯ ಸೆರೆಯಾಗಿದೆ ಎಂಬ ಮಾಹಿತಿ ಇದೆ.

      Gauri Lankesh murder: Police secure CCTV footage

      ಸಿಸಿಟಿವಿಯಲ್ಲಿ ಸೆರೆಯಾಗಿರುವ ದೃಶ್ಯಗಳಲ್ಲಿ ಬೆಳಕು ಕಡಿಮೆ ಇದೆ. ಆದ್ದರಿಂದ, ಅವುಗಳನ್ನು ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಕ್ಕೆ ಕಳುಹಿಸಲಾಗುತ್ತದೆ. ಗೌರಿ ಲಂಕೇಶ್ ಮನೆಗೆ ಬರುವ ರಸ್ತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

      'ಹತ್ಯೆಯನ್ನು ನೋಡಿದ ಯಾವುದೇ ಪ್ರತ್ಯಕ್ಷ ದರ್ಶಿ ಇಲ್ಲ. ಜನರು ಗುಂಡಿನ ಶಬ್ದ ಕೇಳಿದ ಬಳಿಕ ಮನೆಯಿಂದ ಹೊರ ಬಂದಿದ್ದಾರೆ' ಎಂದು ರಾಜ್ಯ ಪೊಲೀಸ್ ಆಯುಕ್ತ ಆರ್.ಕೆ.ದತ್ತಾ ಹೇಳಿದ್ದಾರೆ.

      ಗುಂಡಿನ ದಾಳಿ ಬಳಿಕ ಹಂತಕರು ಸುಲಭವಾಗಿ ಪರಾರಿಯಾಗಿರುವ ಸಾಧ್ಯತೆ ಇದೆ. ಗೌರಿ ಲಂಕೇಶ್ ಅವರ ನಿವಾಸವಿರುವ ರಸ್ತೆಗಳಲ್ಲಿ ಹಲವು ತಿರುವುಗಳಿದ್ದು, ತಕ್ಷಣ ಆರೋಪಿಗಳು ಪರಾರಿಯಾಗಿದ್ದಾರೆ. ಗೌರಿ ಲಂಕೇಶ್ ಸಹೋದರ ಇಂದ್ರಜಿತ್ ಲಂಕೇಶ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+