ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದು ಯಾರು?

ಬೆಂಗಳೂರು, ಅಕ್ಟೋಬರ್ 23 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೆ ಹತ್ಯೆ ಯಾರು ಮಾಡಿರಬಹುದು? ಎಂಬ ಖಚಿತವಾದ ಸುಳಿವು ಸಿಕ್ಕಿಲ್ಲ. ವೈಯಕ್ತಿಕ ದ್ವೇಷ ಮತ್ತು ಬಲಪಂಥೀಯ ಸಂಘಟನೆಗಳ ಕೈವಾಡವಿರುವ ಬಗ್ಗೆ ತನಿಖೆ ನಡೆಯುತ್ತಿದೆ.

ನಕ್ಸಲರು ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆ ಎಂಬ ಆಯಾಮದ ಬಗ್ಗೆ ಎಸ್‌ಐಟಿ ತನಿಖೆ ಮುಕ್ತಾಯವಾಗಿದೆ. ತನಿಖೆ ಒಂದು ಹಂತಕ್ಕೆ ತಲುಪುತ್ತಿದ್ದಂತೆ ಎಸ್‌ಐಟಿ ಅಧಿಕಾರಿಗಳ ತಂಡದ ಸದಸ್ಯರು ಸ್ವಸ್ಥಾನಕ್ಕೆ ಮರಳಿದ್ದಾರೆ. ಮೊದಲು 200 ಜನರ ತಂಡದಿಂದ ತನಿಖೆ ಆರಂಭವಾಗಿತ್ತು. ಈಗ 50 ಅಧಿಕಾರಿಗಳ ತಂಡವಿದೆ.

 Gauri Lankesh murder : Probe slows down as leads dry up

ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ ಎಸ್‌ಐಟಿಗೆ ಹತ್ಯೆ ಯಾರು ಮಾಡಿದ್ದಾರೆ? ಎಂಬ ಖಚಿತ ಸುಳಿವು ಸಿಕ್ಕಿಲ್ಲ. ಕೆಲವು ದಿನಗಳ ಹಿಂದೆ ಎಸ್‌ಐಟಿ ಹಂತಕರ ರೇಖಾಚಿತ್ರವನ್ನು ಬಿಡುಗಡೆ ಮಾಡಿತ್ತು. ಆದರೆ, ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಸೆ.5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದ್ದು, ತಂಡ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+