ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೃಹತ್ ಪ್ರತಿಭಟನೆ
Recommended Video

ಬೆಂಗಳೂರು, ಸೆಪ್ಟೆಂಬರ್ 06 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
'ಗೌರಿ ಲಂಕೇಶ್ ಅಮರ್ ರಹೇ', 'ನಾನು ಸತ್ತರು ನನ್ನ ವಿಚಾರಗಳು ಸಾಯೋದಿಲ್ಲ' ಎಂದು ಪ್ರತಿಭಟನಾನಿರತರು ಘೋಷಣೆ ಕೂಗುತ್ತಿದ್ದಾರೆ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದೆ. ವಿಚಾರವಾದಿಗಳು, ವಿದ್ಯಾರ್ಥಿಗಳು, ಪತ್ರಕರ್ತರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತಿ ಬರಗೂರು ರಾಮಚಂದ್ರಪ್ಪ, ರಾಜ್ಯ ರೈತ ಸಂಘದ ಅಧ್ಯಕ್ಷ ವೀರ ಸಂಘಯ್ಯ, ಜನವಾದಿ ಮಹಿಳಾ ಸಂಘಟನೆಯ ಕೆ.ನೀಲಾ, ಸಿಪಿಐಎಂ ನ ಜಿ.ವಿ.ಶ್ರೀರಾಮ ರೆಡ್ಡಿ ಸೇರಿದಂತೆ ವಿವಿಧ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಗೌರಿ ಲಂಕೇಶ್ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ.

ಕೆಲವು ಪ್ರತಿಭಟನಾನಿರತರು ಗೌರಿ ಲಂಕೇಶ್ ರವರ ಹತ್ಯೆ ನಿಜಕ್ಕೂ ನಮಗೆಲ್ಲ ಆಘಾತವನ್ನುಂಟು ಮಾಡಿದೆ ಎಂದು ಕಣ್ಣೀರಿಡುತ್ತಿದ್ದಾರೆ. ಗೌರಿ ಅವರ ವಿಚಾರಗಳಿಗೆ ನಾವೂ ಜೀವ ತುಂಬುತ್ತೇವೆ. ಇಂಥಹದ್ದೆಕ್ಕೆಲ್ಲ ನಾವೂ ಹೆದರುವುದಿಲ್ಲ ಎಂದು ಹೇಳುತ್ತಿದ್ದಾರೆ.
'ನಾನು ಗೌರಿ, ನಾನು ಗೌರಿ, ನಾನು ಕಲ್ಬುರ್ಗಿ, ನಾನು ಕಲ್ಬುರ್ಗಿ' ಎಂದು ಘೋಷಣೆಗಳನ್ನು ಕೂಗುತ್ತಿರುವ ಪ್ರತಿಭಟನಾನಿರತರು ತಕ್ಷಣ ಆರೋಪಿಗಳನ್ನು ಬಂಧಿಸಿ ಎಂದು ಆಗ್ರಹಿಸಿದ್ದಾರೆ.












Click it and Unblock the Notifications