ಗೌರಿ ಲಂಕೇಶ್ ಹತ್ಯೆ : 5 ಸಾವಿರ ಪುಟದ ಹೆಚ್ಚುವರಿ ಚಾರ್ಜ್‌ಶೀಟ್ ಸಿದ್ಧ

ಬೆಂಗಳೂರು, ನವೆಂಬರ್ 21 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಹೆಚ್ಚುವರಿ ಚಾರ್ಜ್‌ಸಶೀಟ್ ಸಲ್ಲಿಕೆಗೆ ಸಿದ್ಧತೆ ನಡೆಸುತ್ತಿದೆ. 650 ಪುಟಗಳ ಚಾರ್ಜ್‌ಶೀಟ್‌ ಮೊದಲು ಸಲ್ಲಿಕೆ ಮಾಡಲಾಗಿತ್ತು.

ಎಸ್‌ಐಟಿ ನವೆಂಬರ್ 30ರಂದು 5 ಸಾವಿರ ಪುಟಗಳ ಹೆಚ್ಚುವರಿ ಚಾರ್ಜ್‌ಶೀಟ್‌ ಅನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಿದೆ. ಮೊದಲ ಚಾರ್ಜ್‌ಶೀಟ್ ಸಲ್ಲಿಸುವಾಗ ಹೊಟ್ಟೆ ಮಂಜ ಮಾತ್ರ ಆರೋಪಿಯಾಗಿದ್ದ. ಈಗ 17 ಆರೋಪಿಗಳನ್ನು ಹೆಸರಿಸಲಾಗುತ್ತದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 16 ಆರೋಪಿಗಳನ್ನು ಬಂಧಿಸಲಾಗಿದೆ. ನಿಹಾಲ್ ಅಲಿಯಾಸ್ ದಾದಾ ಎಂಬ ಆರೋಪಿಗಾಗಿ ಎಸ್ಐಟಿ ಹುಡುಕಾಟ ನಡೆಸುತ್ತಿದೆ. ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ಅಮೋಲ್ ಕಾಳೆಯನ್ನು ಮೊದಲ ಆರೋಪಿಯಾಗಿ ಹೆಸರಿಸಲಾಗುತ್ತದೆ.

Gauri Lankesh murder : SIT to file supplementary charge sheet

ಎಸ್‌ಐಟಿ ಬಂಧಿಸಿರುವ ವಿಜಯಪುರ ಮೂಲದ ಪರುಶರಾಮ್ ವಾಗ್ಮೋರೆ ಗೌರಿ ಲಂಕೇಶ್ ಅವರಿಗೆ ಗುಂಡು ಹಾರಿಸಿದ್ದು ನಾನೇ ಎಂದು ಒಪ್ಪಿಕೊಂಡಿದ್ದಾನೆ. ಆತನನ್ನು 2ನೇ ಆರೋಪಿಯಾಗಿ ಮಾಡಲಾಗುತ್ತದೆ.

2017ರ ನವೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಸರ್ಕಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿತ್ತು.

ಎಸ್‌ಐಟಿ ಮುಖ್ಯಸ್ಥ ಐಜಿಪಿ ಬಿ.ಕೆ.ಸಿಂಗ್ ನೇತೃತ್ವದ ಎಸ್‌ಐಟಿ 650 ಪುಟಗಳ ಮೊದಲ ಚಾರ್ಜ್‌ಶೀಟ್‌ ಅನ್ನು ಬೆಂಗಳೂರಿನ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿತ್ತು. 131 ಸಾಕ್ಷಿಗಳ ಹೇಳಿಕೆಯನ್ನು ಮೊದಲ ಚಾರ್ಜ್‌ಶೀಟ್‌ನಲ್ಲಿ ದಾಖಲು ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+