ಗೌರಿ ಲಂಕೇಶ್ ಹತ್ಯೆ ಆರೋಪಿಯ ಜಾಮೀನು ಅರ್ಜಿ ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು, ಫೆಬ್ರವರಿ 11: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಗೌರಿ ಲಂಕೇಶ್ ಹತ್ಯೆ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಮೋಹನ್ ನಾಯಕ್ ಜಾಮೀನು ಕೋರಿ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿ ವಿಚಾರಣೆ ನಡೆಸಿದ ಬಿ.ಎ.ಪಾಟೀಲರ ಏಕಸದಸ್ಯ ಪೀಠವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಕೆಲವು ದಿನಗಳ ಹಿಂದಷ್ಟೆ ಸೆಷನ್ಸ್‌ ನ್ಯಾಯಾಲಯವು ಗೌರಿ ಹತ್ಯೆ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಮೋಹನ್ ನಾಯಕ್ ಅವರು ಹೈಕೋರ್ಟ್‌ಗೆ ಜಾಮೀನಿಗಾಗಿ ಮನವಿ ಸಲ್ಲಿಸಿದ್ದರು.

Gauri Lankeshs murder accused Mohan Nayaks bail apilication rejected

ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಕುಂಬಳಗೋಡಿನಲ್ಲಿ ಮನೆ ಮಾಡಿಕೊಟ್ಟಿದ್ದಲ್ಲದೆ, ಅವರಿಗೆ ಇನ್ನೂ ಹಲವು ರೀತಿಯಲ್ಲಿ ಸಹಾಯ ಮಾಡಿದ್ದ ಆರೋಪ ಮೋಹನ್ ನಾಯಕ್ ಮೇಲಿದೆ.

ಅಮೋಲ್ ಕಾಳೆ, ಪರಶುರಾಮ್ ವಾಘ್ಮೋರೆ, ಮನೋಹರ ಯಡವೆ, ಗಣೇಶ್ ವಿಸ್ಕಿನ್, ಅಮಿತ್ ಬುದ್ಧಿ, ಅಮಿತ್ ದಿಗ್ವೇಕರ್, ಭರತ್ ಕುರ್ಣೆ, ಸುರೇಶ್ ಎಚ್‌.ಎಲ್, ರಾಜೇಶ್ ಡಿ.ಬಂಗೇರಾ, ಸುಧನ್ವ ಗೋಂಧ್ವಾಳ್ಕರ್, ಮೋಹನ್ ನಾಯಕ್, ಶರದ್ ಬಾಹುಸಾಹೇಬ್, ಭಗವಾನ್ ಸೂರ್ಯವಂಶಿ, ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಶ್ರೀಕಾಂತ್ ಪಂಗಾರ್ಕರ್, ವಿಕಾಸ್ ಪಾಟೀಲ್ ಅಲಿಯಾಸ್ ನಿಹಾಲ್ ಅವರುಗಳು ಗೌರಿ ಲಂಕೇಶ್‌ ಪ್ರಕರಣದ ಆರೋಪಿಗಳಾಗಿದ್ದಾರೆ. ಕೆ.ಟಿ.ನವೀನ್ ಕುಮಾರ್ ಅಲಿಯಾಸ್ ಹೊಟ್ಟೆಮಂಜ ಭಗವಾನ್ ಹತ್ಯೆ ಸಂಚು ಪ್ರಕರಣದ ಆರೋಪಿಯಾಗಿದ್ದಾನೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+