GBA Voters List: 369 ವಾರ್ಡ್‌ಗಳಲ್ಲಿದ್ದಾರೆ 88.95 ಲಕ್ಷ ಮತದಾರರು; ಅಂತಿಮ ಪಟ್ಟಿ ಅಂಕಿ ಸಂಖ್ಯೆ ಇಲ್ಲಿದೆ

GBA Final Voters List 2026: 2026ರ ಜೂನ್ ಅಂತ್ಯದೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಬೇಕಿದೆ. ಈ ಸಂಬಂಧ ನಡೆದ ಅಗತ್ಯ ತಯಾರಿ ಮಾಡಿಕೊಂಡಿರುವ ಜಿಬಿಎ ಆಕ್ಷೇಪಣೆ, ದೂರು ಸ್ವೀಕಾರ ಬಳಿಕ ಇದೀಗ ತನ್ನ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ ವಾರು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 88,95,361 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಶನಿವಾರ ತಿಳಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಇಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಮಾರ್ಚ್ 09 ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಡಲಾಗಿತ್ತು. ಅದರಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಇವತ್ತುಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪುರುಷರು, ಮಹಿಳೆಯರು, ಅತ್ಯಧಿಕ ಮತದಾರರು ಇರುವ ವಾರ್ಡ್ ಹೀಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

GBA

ಪಟ್ಟಿಯಲ್ಲಿ ಪುರುಷರೆಷ್ಟು, ಮಹಿಳೆಯರೆಷ್ಟು?

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆ ಮಾಡಲಾಗಿದೆ. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 45,71,169 ಪುರುಷರು, 43,22,557 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,95,361 ಮತದಾರರು ಇದ್ದು, 8,023 ಮತಟ್ಟೆಗಳು ಬರಲಿವೆ ಎಂದು ವಿವರಿಸಿದರು.

Towing: ಮುಂದಿನ ವಾರವೇ ಬೆಂಗಳೂರಿನಲ್ಲಿ ವಾಹನಗಳ ಟೋಯಿಂಗ್ ಆರಂಭ
Towing: ಮುಂದಿನ ವಾರವೇ ಬೆಂಗಳೂರಿನಲ್ಲಿ ವಾಹನಗಳ ಟೋಯಿಂಗ್ ಆರಂಭ

ಈ ವಾರ್ಡ್‌ನಲ್ಲಿದ್ದಾರೆ ಅತ್ಯದಿಕ ಮತದಾರರು!

ಎಲ್ಲ 369 ವಾರ್ಡ್ ಗಳ ಪೈಕಿ ಬೆಂಗಳೂರು ದಕ್ಷಿಣ ನಗರಪಾಲಿಕೆಯ ವಾರ್ಡ್ ಸಂಖ್ಯೆ 51-ಸುಬ್ರಮಣ್ಯಪುರ ಅತೀ ಹೆಚ್ಚು 53,660 ಮತದಾರರನ್ನು ಹೊಂದಿರುತ್ತದೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 24-ವಿಜ್ಞಾನನಗರ ದಲ್ಲಿ ಅತಿ ಕಡಿಮೆ 12,897 ಮತದಾರರನ್ನು ಹೊಂದಿರುತ್ತದೆ. ಅಂತಿಮ ಮತದಾರರ ಪಟ್ಟಿಯಲ್ಲಿ 2,833 ಮತದಾರರು ಹೆಚ್ಚಾಗಿದ್ದಾರೆ.


ಸಾರ್ವಜನಿಕರು ವೆಬ್‌ಸೈಟ್ ನಲ್ಲಿ ಮತದಾರರ ಪಟ್ಟಿ ಗಮನಿಸಿ

ಮತದಾರರು ವಾರ್ಡವಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆನ್ಲೈನ್ ನಲ್ಲಿ ಎಪಿಕ್ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ವಿಸುವ ನಿಟ್ಟಿನಲ್ಲಿ ವಾರ್ಡ್ ವಾರು ಅಂತಿಮ ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ https://gba.karnataka.gov.in/home ರಲ್ಲಿ ಪಿ.ಡಿ.ಎಫ್ ನಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾರ್ವಜನಿಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಳ್ಳುವಂತೆ ಆಯುಕ್ತರು ತಿಳಿಸಿದ್ದಾರೆ.

ಪಾಲಿಕೆವಾರು ಮತದಾರರ ಸಹಾಯವಾಣಿ

ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ:

1. ಬೆಂಗಳೂರು ಪೂರ್ವ : 9480685706
2. ಬೆಂಗಳೂರು ಪಶ್ಚಿಮ : 9480685703
3. ಬೆಂಗಳೂರು ಕೇಂದ್ರ : 080-22975803
4. ಬೆಂಗಳೂರು ಉತ್ತರ : 080-22975936
5. ಬೆಂಗಳೂರು ದಕ್ಷಿಣ : 9480685704

ಬೂತ್ ಲೆವೆಲ್ ಏಜೆಂಟ್ (BLA) ನೇಮಕ:

ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡಿನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ (BLA) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡುವಂತೆ ವಿನಂತಿಸಲಾಗಿದೆ.

ಒಂದು ವೇಳೆ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಆಗದಿದ್ದಲ್ಲಿ ಪೂರಕ ಪಟ್ಟಿಗಳಲ್ಲಿ ಹೆಸರನ್ನು ಸೇರಿಸಿಕೂಳ್ಳಬಹುದಾಗಿದೆ. ಎಲ್ಲ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲು ಹಾಗೂ ದೋಷ ರಹಿತ ಮತದಾರರ ಪಟ್ಟಿಯನ್ನು ತಯಾರಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಅವರು ಖಚಿತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+