GBA: ಬೆಂಗಳೂರಿನ ಜಿಬಿಎ ಕಚೇರಿ ಆವರಣದಲ್ಲಿ 98 ಲಕ್ಷ ರೂ. ವೆಚ್ಚದಲ್ಲಿ ಕ್ಯಾಂಟೀನ್ ಕಟ್ಟಡ ನಿರ್ಮಾಣ: ಯಾರಿಗೆಲ್ಲ ಅನುಕೂಲ
ಬೆಂಗಳೂರು: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಸಜ್ಜಿತ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಜಿಬಿಎ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಅನುಕೂಲಕ್ಕಾಗಿ ಜಿಬಿಎ ಆವರಣದಲ್ಲಿ ಸುಸಜ್ಜಿತ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕೇಂದ್ರ ಕಚೇರಿಯ ಡಾ. ರಾಜ್‌ಕುಮಾರ್ ಗಾಜಿನ ಮನೆಯ ಸಮೀಪ ಕ್ಯಾಂಟೀನ್ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಒಟ್ಟು 98 ಲಕ್ಷ ರೂಪಾಯಿ ವೆಚ್ಚದಲ್ಲಿ 40×30 ಅಡಿ ವಿಸ್ತೀರ್ಣದ ಜಾಗದಲ್ಲಿ ನೆಲ ಮಹಡಿ ಹಾಗೂ ಮೊದಲ ಮಹಡಿಯನ್ನು ಒಳಗೊಂಡ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಬಿಎ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ಗುಣಮಟ್ಟದ ಉಪಹಾರ, ಕಾಫಿ / ಟೀ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತದೆ ಎಂದು ಹೇಳಿದ್ದಾರೆ.
ಕಟ್ಟಡದ ನೆಲ ಮಹಡಿಯಲ್ಲಿ ಸೆಲ್ಫ್ ಸರ್ವೀಸ್ ವ್ಯವಸ್ಥೆ ಮತ್ತು ಮೊದಲ ಮಹಡಿಯಲ್ಲಿ ಸರ್ವೀಸ್ ವ್ಯವಸ್ಥೆ ಕಲ್ಪಿಸಲು ಯೋಜನೆ ರೂಪಿಸಲಾಗಿದೆ. ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕ್ಯಾಂಟೀನ್‌ನಲ್ಲಿ ಉಪಹಾರ, ಬೇಕರಿ ತಿನಿಸುಗಳು, ಜ್ಯೂಸ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಉತ್ತಮ ಗುಣಮಟ್ಟವನ್ನು ಕಾಪಾಡಿಕೊಂಡು ಆಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಶೇಷ ಆಯುಕ್ತರಾದ ಡಾ.ಕೆ. ಹರೀಶ್ ಕುಮಾರ್, ಕೇಂದ್ರ ನಗರ ಪಾಲಿಕೆ ಜಂಟಿ ಆಯುಕ್ತರಾದ ಹೇಮಂತ್ ಶರಣ್, ಕಾರ್ಯಪಾಲಕ ಎಂಜಿನಿಯರರು ಹಾಗೂ ಜಿಬಿಎ ನಗರ ಪಾಲಿಕೆಗಳ ನೌಕರರ ಸಂಘದ ಅಧ್ಯಕ್ಷರಾದ ಅಮೃತ್ ರಾಜ್ ಸೇರಿದಂತೆ ಹಲವರು ಹಾಜರಿದ್ದರು.
ಕರಡು ಮತದಾರರ ಪಟ್ಟಿಯಲ್ಲಿ ಅಹವಾಲು - ಆಕ್ಷೇಪಣೆಗಳಿಗೆ ಅವಕಾಶ
ಬೆಂಗಳೂರು ಪಶ್ವಿಮ ನಗರ ಪಾಲಿಕೆಯ ವಾರ್ಡ್ ವಾರು ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2026ಕ್ಕೆ ಸಂಬಂಧಿಸಿದಂತೆ ದಿನಾಂಕ: 19-01-2026ರಂದು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಚುರ ಪಡಿಸಲಾಗಿರುತ್ತದೆ. ಪರಿಷ್ಕೃತ ಕರಡು ಮತದಾರರ ಪಟ್ಟಿಯು ಪರಿಷ್ಕರಣೆ ಹಂತದಲ್ಲಿದ್ದು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗೆ ಸಂಬಂಧಿಸಿದ ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ದಿನಾಂಕ: 09/03/2026 ರಂದು ಪ್ರಕಟಿಸಲಾಗುವುದು.
ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಏನಾದರೂ ಲೋಪದೋಷಗಳಿದ್ದರೆ ದಿನಾಂಕ:10-03-2026 ರಿಂದ 16-03-2026ರ ಅವಧಿಯಲ್ಲಿ ಅಹವಾಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿದ್ದು, ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಮತದಾರರು ಇದರ ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಮತದಾರರು ಬೇರೆ ಮತಗಟ್ಟೆಗಳಿಗೆ / ಬೇರೆ ವಾರ್ಡ್‌ಗಳಿಗೆ ವಿಭಜನೆಯಾಗಿದ್ದಲ್ಲಿ ಮತದಾರರ ವಿವರಗಳು ಅದಲು-ಬದಲು ಆಗಿರುವುದು ಹಾಗೂ ಮತದಾರರು ಭೌಗೋಳಿಕವಾಗಿ ಒಂದೇ ವಾರ್ಡ್‌ನಲ್ಲಿ ವಾಸವಾಗಿದ್ದು, ಮತ್ತೊಂದು ವಾರ್ಡ್ ಮತಗಟ್ಟೆಯಲ್ಲಿ ಸೇರ್ಪಡೆಗೊಂಡಿರುವ ಸಂಬಂಧ ಲೋಪದೋಷಗಳಿದ್ದಲ್ಲಿ ಅಹವಾಲು-ಆಕ್ಷೇಪಣೆಗಳನ್ನು ಪಶ್ಚಿಮ ನಗರ ಪಾಲಿಕೆಯ ಈ ಕೆಳಕಂಡ 10 ವಿಧಾನಸಭಾ ಕ್ಷೇತ್ರಗಳ 112 ವಾರ್ಡ್‌ಗಳ ಮತದಾರರ ನೋಂದಣಾಧಿಕಾರಿಗಳಿಗೆ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಸಲ್ಲಿಸಬಹುದಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru Second Airport: 5 ತಿಂಗಳಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ಸ್ಥಳ ಫೈನಲ್: 3 ತಾಣಗಳಿಗೆ ಕಾರ್ಯಸಾಧ್ಯತಾ ವರದಿ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ











Click it and Unblock the Notifications