GBA: ಬೆಂಗಳೂರಲ್ಲಿ ಒಂದೇ ದಿನ 340 ಕೆ.ಜಿ. ಕಸ ತೆರವು ಮಾಡಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ!
GBA: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಒಂದೇ ದಿನದಲ್ಲಿ ಬರೋಬ್ಬರಿ 340 ಕೆ.ಜಿ. ಕಸ ತೆರವು ಮಾಡಿದೆ. 14 ರಸ್ತೆ ವಿಭಜಕಗಳು ಹಾಗೂ ಟ್ರಾಫಿಕ್ ಐಲ್ಯಾಂಡ್‌ಗಳ ಸ್ವಚ್ಛತೆ, 340 ಕೆ.ಜಿ. ತ್ಯಾಜ್ಯ ತೆರವು, 10.2 ಕಿ.ಮೀ. ರಸ್ತೆ ಸ್ವಚ್ಛತಾ ಕಾರ್ಯಾಚರಣೆ ನಡೆಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು, ತ್ಯಾಜ್ಯ ಮುಕ್ತ ಹಾಗೂ ಸುಂದರ ನಗರವನ್ನಾಗಿ ರೂಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ, ವಿವಿಧ ರಸ್ತೆ ವಿಭಜಕಗಳು ಹಾಗೂ ಟ್ರಾಫಿಕ್ ಐಲ್ಯಾಂಡ್‌ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ತಿಳಿಸಿದ್ದಾರೆ.
14 ರಸ್ತೆ ವಿಭಜಕಗಳು ಹಾಗೂ ಟ್ರಾಫಿಕ್ ಐಲ್ಯಾಂಡ್‌ಗಳ ಸ್ವಚ್ಛತೆ: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಒಟ್ಟು 14 ರಸ್ತೆ ವಿಭಜಕಗಳು (Road Medians) ಹಾಗೂ ಟ್ರಾಫಿಕ್ ಐಲ್ಯಾಂಡ್‌ಗಳಲ್ಲಿ ವಿಶೇಷ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯ ಸಂದರ್ಭದಲ್ಲಿ ರಸ್ತೆ ವಿಭಜಕಗಳು, ಟ್ರಾಫಿಕ್ ಐಲ್ಯಾಂಡ್‌ಗಳು ಹಾಗೂ ಅವುಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಗ್ರಹವಾಗಿದ್ದ ತ್ಯಾಜ್ಯ, ಒಣ ಎಲೆಗಳು ಹಾಗೂ ಇತರೆ ಘನ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಲಾಗಿದೆ.

GBA: ಸುಮಾರು 340 ಕೆ.ಜಿ. ಕಸ ತೆರವು
ಇನ್ನು ಬೆಂಗಳೂರಿನಲ್ಲಿ ನಡೆದ ಈ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಒಟ್ಟು 10.2 ಕಿ.ಮೀ. ರಸ್ತೆ ವ್ಯಾಪ್ತಿಯನ್ನು ಸ್ವಚ್ಛಗೊಳಿಸಲಾಗಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸ್ವಚ್ಛ ಹಾಗೂ ಸುಂದರ ಪರಿಸರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಸ್ವಚ್ಛತಾ ಕಾರ್ಯಾಚರಣೆಯ ಸಂದರ್ಭದಲ್ಲಿ ರಸ್ತೆ ವಿಭಜಕಗಳು, ಟ್ರಾಫಿಕ್ ಐಲ್ಯಾಂಡ್‌ಗಳು ಹಾಗೂ ರಸ್ತೆ ಬದಿಗಳಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ, ಹಸಿ ತ್ಯಾಜ್ಯ ಹಾಗೂ ವಿವಿಧ ರೀತಿಯ ಘನ ತ್ಯಾಜ್ಯವನ್ನು ಸಂಗ್ರಹಿಸಿ ತೆರವುಗೊಳಿಸಲಾಗಿದೆ. ಕಾರ್ಯಾಚರಣೆಯಲ್ಲಿ ಒಟ್ಟು 340 ಕೆ.ಜಿ. ತ್ಯಾಜ್ಯವನ್ನು ತೆರವುಗೊಳಿಸಿ, ಸೂಕ್ತ ವಿಲೇವಾರಿಗಾಗಿ ಸಂಬಂಧಿಸಿದ ಘಟಕಗಳಿಗೆ ರವಾನಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
48 ಪೌರಕಾರ್ಮಿಕರು ಹಾಗೂ 21 ಸಿಬ್ಬಂದಿ ಭಾಗಿ
ಈ ವಿಶೇಷ ಸ್ವಚ್ಛತಾ ಕಾರ್ಯಾಚರಣೆಯಲ್ಲಿ ಒಟ್ಟು 48 ಪೌರಕಾರ್ಮಿಕರು ಹಾಗೂ 21 ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿದ್ದು, ರಸ್ತೆ ವಿಭಜಕಗಳು, ಟ್ರಾಫಿಕ್ ಐಲ್ಯಾಂಡ್‌ಗಳು ಹಾಗೂ ರಸ್ತೆ ಬದಿಗಳನ್ನು ನಿರಂತರವಾಗಿ ಸ್ವಚ್ಛವಾಗಿಡುವ ಮೂಲಕ ನಗರದ ಸ್ವಚ್ಛತೆ ಹಾಗೂ ಸೌಂದರ್ಯವನ್ನು ಕಾಪಾಡಲು ಇಂತಹ ವಿಶೇಷ ಸ್ವಚ್ಛತಾ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತ ಜಗದೀಶ್.ಜಿ. ಅವರು ತಿಳಿಸಿದ್ದಾರೆ.
ರಸ್ತೆ ವಿಭಜಕಗಳು, ಟ್ರಾಫಿಕ್ ಐಲ್ಯಾಂಡ್‌ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯದಂತೆ ಸಾರ್ವಜನಿಕರು ಸಹಕರಿಸಬೇಕು. ತ್ಯಾಜ್ಯವನ್ನು ನಿಗದಿತ ಸ್ಥಳದಲ್ಲಿಯೇ ವಿಲೇವಾರಿ ಮಾಡುವ ಮೂಲಕ ಸ್ವಚ್ಛ ಹಾಗೂ ಸುಂದರ ಬೆಂಗಳೂರು ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವಂತೆ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


Click it and Unblock the Notifications
