GBA: ಎಲ್ಲಾ ಪೌರಕಾರ್ಮಿಕರು ‘ನಮಸ್ತೆ’ ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚನೆ, ಕಾರಣವೇನು

ಬೆಂಗಳೂರಿನ ಎಲ್ಲಾ ಪೌರಕಾರ್ಮಿಕರು 'ನಮಸ್ತೆ' ಆ್ಯಪ್‌ನಲ್ಲಿ ನೋಂದಾಯಿಸಿಕೊಳ್ಳಲು ಸೂಚನೆ ನೀಡಲಾಗಿದೆ. ಇದಕ್ಕೆ ಕಾರಣವೇನು ಎನ್ನುವ ವಿವರ ಇಲ್ಲಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಪೌರಕಾರ್ಮಿಕರಿಗೆ ಮಹತ್ವದ ಸೂಚನೆ ನೀಡಲಾಗಿದೆ. ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಹರ್ದೀಪ್ ಸಿಂಗ್ ಗಿಲ್ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರ ನೇತೃತ್ವದಲ್ಲಿ ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸಭೆಯನ್ನು ಜಿಬಿಎ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ನಡೆಸಲಾಯಿತು.

GBA All Bengaluru Sanitation Workers Asked to Register on Namaste App Here s Why

ಸಭೆಯಲ್ಲಿ ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಕಲ್ಯಾಣ, ಸುರಕ್ಷತೆ, ಆರೋಗ್ಯ, ವಸತಿ, ಶಿಕ್ಷಣ, ಪರಿಹಾರ, ಪಿಂಚಣಿ ಹಾಗೂ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು, ನಗರದಾದ್ಯಂತ ಪೌರಕಾರ್ಮಿಕರ ಸುರಕ್ಷತೆ, ಕೆಲಸದ ಪರಿಸ್ಥಿತಿ ಹಾಗೂ ಸಂಬಂಧಿತ ಘಟನೆಗಳ ಕುರಿತು ನಿರಂತರವಾಗಿ ಪರಿಶೀಲನೆ ಮತ್ತು ದಾಖಲೀಕರಣ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ ಸಂಬಂಧಿಸಿದ ಸಾವುಗಳು ಹಾಗೂ ಅಪಘಾತಗಳ ಕುರಿತು ಪ್ರಕರಣವಾರು ಮಾಹಿತಿ ಸಂಗ್ರಹಿಸಿ, ನಿಯಮಾನುಸಾರ ಪರಿಹಾರ ಹಾಗೂ ಇತರ ಸೌಲಭ್ಯಗಳನ್ನು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ನಗರದಲ್ಲಿ ಸುಮಾರು 12,924 ಖಾಯಂ ಪೌರಕಾರ್ಮಿಕರು ಹಾಗೂ 2,368 ದಿನಗೂಲಿ/ದೈನಂದಿನ ವೇತನದ ಆಧಾರದ ಕಾರ್ಮಿಕರು ಸೇರಿದಂತೆ ಒಟ್ಟು ಸುಮಾರು 15,292 ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಯಿತು.

ಹಿಂದೆ 35,000ಕ್ಕೂ ಹೆಚ್ಚು ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಹೋಲಿಸಿದರೆ ಪ್ರಸ್ತುತ ಸಿಬ್ಬಂದಿ ಸಂಖ್ಯೆ ಕಡಿಮೆಯಾಗಿದ್ದು, ಕಾರ್ಮಿಕರ ಮೇಲೆ ಹೆಚ್ಚಿನ ಕೆಲಸದ ಹೊರೆ ಬೀಳುತ್ತಿದೆ ಎಂದು ಪೌರಕಾರ್ಮಿಕರ ಸಂಘಟನೆಗಳ ಪ್ರತಿನಿಧಿಗಳು ಸಭೆಯ ಗಮನಕ್ಕೆ ತಂದರು. ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ಅಗತ್ಯವಿರುವ ಪೌರಕಾರ್ಮಿಕರ ಸಂಖ್ಯೆಯನ್ನು ಮರುಪರಿಶೀಲಿಸಿ, ಅಗತ್ಯಕ್ಕೆ ಅನುಗುಣವಾಗಿ ಸಿಬ್ಬಂದಿ ಹೆಚ್ಚಿಸುವಂತೆ ಮನವಿ ಮಾಡಿದರು.

ಪೌರಕಾರ್ಮಿಕರ ಕಲ್ಯಾಣ ಯೋಜನೆಗಳು

ಪೌರಕಾರ್ಮಿಕರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಸುಧಾರಣೆಗೆ ವಿವಿಧ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ವಸತಿ: ಸ್ವಂತ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಇತರ ಸಬ್ಸಿಡಿಗಳ ಜೊತೆಗೆ ಗರಿಷ್ಠ ₹5 ಲಕ್ಷದವರೆಗೆ ಆರ್ಥಿಕ ನೆರವು.

ಆರೋಗ್ಯ: ವೈದ್ಯಕೀಯ ವೆಚ್ಚಗಳಿಗೆ ಗರಿಷ್ಠ ₹50,000ವರೆಗೆ ಮರುಪಾವತಿ ಸೌಲಭ್ಯ ಹಾಗೂ ಮುಂದಿನ ಹಂತದಲ್ಲಿ ಕ್ಯಾಶ್‌ಲೆಸ್ ಆರೋಗ್ಯ ಸೇವೆ ಒದಗಿಸುವ ಪ್ರಯತ್ನ.

ಸ್ವಯಂ ಉದ್ಯೋಗ: ಆಟೋ ರಿಕ್ಷಾ ಸೇರಿದಂತೆ ವಿವಿಧ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಆರ್ಥಿಕ ನೆರವು.

ಶಿಕ್ಷಣ: ಪೌರಕಾರ್ಮಿಕರ ಮಕ್ಕಳಿಗೆ ಶಾಲಾ ಶುಲ್ಕ ಮರುಪಾವತಿ ಹಾಗೂ ಉನ್ನತ ಶಿಕ್ಷಣಕ್ಕೆ ನೆರವು.

ಕೌಶಲ್ಯಾಭಿವೃದ್ಧಿ: ಪರ್ಯಾಯ ಉದ್ಯೋಗಾವಕಾಶಗಳಿಗಾಗಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ.

ವಸತಿ ನಿರ್ಮಾಣ: ಉತ್ತರ ಮತ್ತು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸುಮಾರು 120 ಮನೆಗಳನ್ನು ಒದಗಿಸುವ ಯೋಜನೆ.

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪ್ರಮುಖ ಬೇಡಿಕೆಗಳು

ಸಭೆಯಲ್ಲಿ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಪ್ರತಿನಿಧಿಗಳು ಹಲವು ಪ್ರಮುಖ ಬೇಡಿಕೆಗಳನ್ನು ಮಂಡಿಸಿದರು. ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ನಿಯಮಾನುಸಾರ ತಕ್ಷಣ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ಹೆಚ್ಚಿನ ಆರ್ಥಿಕ ನೆರವು, ಪಿಂಚಣಿ ಸೌಲಭ್ಯ, ಆರೋಗ್ಯ ಕಾರ್ಡ್ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಮನವಿ ಮಾಡಿದರು. ಮಕ್ಕಳಿಗೆ ಕಾಲೇಜು ಶಿಕ್ಷಣ ಸೇರಿದಂತೆ ಶೈಕ್ಷಣಿಕ ನೆರವು, ಸಾಲ ಹಾಗೂ ಆರ್ಥಿಕ ನೆರವು ಮುಂದುವರಿಸುವುದು, ಸ್ವಯಂ ಉದ್ಯೋಗಕ್ಕಾಗಿ ವಾಹನ ಹಾಗೂ ಉಪಕರಣ ಆಧಾರಿತ ನೆರವು, ನಿವೇಶನ ಮತ್ತು ಭೂಮಿ ಒದಗಿಸುವ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಆಗ್ರಹಿಸಿದರು.

'ನಮಸ್ತೆ' ಆ್ಯಪ್‌ನಲ್ಲಿ ನೋಂದಣಿಗೆ ಸೂಚನೆ

ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಹರ್ದೀಪ್ ಸಿಂಗ್ ಗಿಲ್ ಅವರು, ನಗರದ ಎಲ್ಲಾ ಪೌರಕಾರ್ಮಿಕರು 'ನಮಸ್ತೆ' ಆ್ಯಪ್‌ನಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವುದರಿಂದ ಕೇಂದ್ರ ಸರ್ಕಾರದ ವತಿಯಿಂದ ಲಭ್ಯವಾಗುವ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಕಲ್ಯಾಣ ಹಾಗೂ ಸುರಕ್ಷತಾ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+