GBA: ಬೆಂಗಳೂರು ಪಾದಚಾರಿ ಮಾರ್ಗ ಅತಿಕ್ರಮಣ ತೆರವು ಮುಂದುವರಿಕೆ: 176.55 ಕಿ.ಮೀ. ಫುಟ್‌ಪಾತ್ ಸಾರ್ವಜನಿಕರಿಗೆ ಮುಕ್ತ
GBA: ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಿಂದಲೂ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಸರ್ಕಾರವು ಬೆಂಗಳೂರಿನಲ್ಲಿ ಬೀದಿಬದಿ ಒತ್ತುವರಿ ಹಾಗೂ ಪಾದಚಾರಿ ಮಾರ್ಗದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ. ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿದಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರ ಸಂಪೂರ್ಣ ವಿವರ ಇಲ್ಲಿದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನದಂತೆ ಹಾಗೂ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪಾದಚಾರಿಗಳಿಗೆ ಸುರಕ್ಷಿತ, ಸುಗಮ ಹಾಗೂ ಅಡೆತಡೆಯಿಲ್ಲದ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಗಸ್ಟ್ 1ರಂದು ಸಹ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ದಾಸರಹಳ್ಳಿ ವಿಭಾಗದ ಶೆಟ್ಟಿಹಳ್ಳಿ ಮುಖ್ಯ ರಸ್ತೆ - 1.50 ಕಿ.ಮೀ. ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ.
ಒಟ್ಟು ಕಾರ್ಯಾಚರಣೆಯ ಪ್ರಗತಿ
2026ರ ಜುಲೈ 1ರಿಂದ ಬೆಂಗಳೂರಿನಲ್ಲಿ ಬೀದಿಬದಿ ಹಾಗೂ ಪಾದಚಾರಿ ಮಾರ್ಗದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳಲ್ಲೂ ಈ ಒತ್ತುವರಿ ತೆರವು ಕಾರ್ಯಾಚರಣೆ ನಡೆದಿದೆ. ಆಗಸ್ಟ್ 1ರವರೆಗೆ ಕೈಗೊಂಡ ಕಾರ್ಯಾಚರಣೆಯಲ್ಲಿ ಒಟ್ಟು 176.55 ಕಿಲೋಮೀಟರ್ ಉದ್ದದ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣ ಮುಕ್ತಗೊಳಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆಯ ಪ್ರಮುಖಾಂಶಗಳು
* 1.50 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ
* 1 ಅಂಗಡಿ/ಪೆಟ್ಟಿ ಅಂಗಡಿ ತೆರವು
* 4 ತಳ್ಳುವ ಗಾಡಿಗಳು ತೆರವು
* 8 ಶೀಟ್‌ಗಳು/ಕ್ಯಾನೋಪಿಗಳು ತೆರವು
* 8 ಮೆಟ್ಟಿಲುಗಳು/ರ್ಯಾಂಪ್‌ಗಳು ತೆರವು
* 2 ಜಾಹೀರಾತು ಕಂಬಗಳು/ನಾಮಫಲಕಗಳು ತೆರವು
* 30 ಟನ್ ನಿರ್ಮಾಣ ತ್ಯಾಜ್ಯ/ಮಣ್ಣು ತೆರವು
ಕಾರ್ಯಾಚರಣೆಗೆ ಬಳಸಿದ ಸಂಪನ್ಮೂಲಗಳು
* 1 ಜೆಸಿಬಿ
* 2 ಟಿಪ್ಪರ್‌ಗಳು
* 1 ಇತರೆ ಯಂತ್ರ
* 15 ಸಿಬ್ಬಂದಿ
ಕಾರ್ಯಾಚರಣೆಯ ಪ್ರಮುಖಾಂಶಗಳು
* 176.55 ಕಿ.ಮೀ. ಪಾದಚಾರಿ ಮಾರ್ಗ ಅತಿಕ್ರಮಣ ಮುಕ್ತ
* 415 ಅಂಗಡಿಗಳು/ಪೆಟ್ಟಿ ಅಂಗಡಿಗಳು ತೆರವು
* 608 ತಳ್ಳುವ ಗಾಡಿಗಳು ತೆರವು
* 1,389 ಎಸಿ ಶೀಟ್‌ಗಳು/ಕ್ಯಾನೋಪಿಗಳು ತೆರವು
* 1,270 ಮೆಟ್ಟಿಲುಗಳು ಹಾಗೂ ರ್ಯಾಂಪ್‌ಗಳು ತೆರವು
* 1,369 ಜಾಹೀರಾತು ಕಂಬಗಳು ಹಾಗೂ ನಾಮಫಲಕಗಳು ತೆರವು
* 45 ತಾತ್ಕಾಲಿಕ/ಶಾಶ್ವತ ಶೆಡ್‌ಗಳು ತೆರವು
* 1,508.20 ಟನ್ ನಿರ್ಮಾಣ ತ್ಯಾಜ್ಯ ಹಾಗೂ ಮಣ್ಣು ತೆರವು
* 8 ಕಿ.ಮೀ. ಪಾದಚಾರಿ ಮಾರ್ಗ ದುರಸ್ತಿ
ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವುದು, ಅತಿಕ್ರಮಣಗಳನ್ನು ಪರಿಣಾಮಕಾರಿಯಾಗಿ ತೆರವುಗೊಳಿಸುವುದು ಹಾಗೂ ನಗರದಲ್ಲಿ ಸುರಕ್ಷಿತ ಮತ್ತು ಸುಗಮ ಪಾದಚಾರಿ ಸಂಚಾರಕ್ಕೆ ಅಗತ್ಯ ಮೂಲಸೌಕರ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯು ಇಂತಹ ವಿಶೇಷ ಕಾರ್ಯಾಚರಣೆಗಳನ್ನು ಮುಂದುವರಿಸಲಿದೆ. ಸಾರ್ವಜನಿಕರು ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದೆ, ಸಾರ್ವಜನಿಕ ಸ್ಥಳಗಳ ಸ್ವಚ್ಛತೆ ಹಾಗೂ ಸುಗಮ ಸಂಚಾರವನ್ನು ಕಾಪಾಡುವಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಗೆ ಸಹಕರಿಸಬೇಕು ಎಂದು ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.


Click it and Unblock the Notifications
