GBA: ಬೆಂಗಳೂರಲ್ಲಿ ದೇವಸ್ಥಾನಗಳ ಸ್ವಚ್ಛತೆಗೆ ಮುಂದಾದ ಜಿಬಿಎ, ಕಾರಣವೇನು
GBA: ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನಲ್ಲಿ ದೇವಸ್ಥಾನಗಳ ಸ್ವಚ್ಛತೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದಿಂದ 30 ದೇವಸ್ಥಾನಗಳ ಸ್ವಚ್ಛತೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.
ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ತ್ಯಾಜ್ಯಮುಕ್ತ ನಗರಪಾಲಿಕೆ ರೂಪಿಸಲು ಹಾಗೂ ಸ್ವಚ್ಛ ಸರ್ವೇಕ್ಷಣ್ 2025-26 ರ ಶ್ರೇಯಾಂಕ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ ಉತ್ತಮ ಸ್ಥಾನ ಗಳಿಸಬೇಕಾಗಿದ್ದು, ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ವಿಶೇಷ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈಗಾಗಲೇ ರೂಪಿಸಲಾಗಿರುವ ಕಾರ್ಯಯೋಜನೆಯ (ಆ್ಯಕ್ಷನ್ ಪ್ಲಾನ್ ನಂತೆ) 3ನೇ ಭಾಗವಾಗಿ ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ ಸರ್ವೇಕ್ಷಣ 2025-26 ರ ವಿಶೇಷ ಸ್ವಚ್ಛತಾ ಅಭಿಯಾನದ ಅಂಗವಾಗಿ 30 ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶ ಹಾಗೂ ಐತಿಹಾಸಿಕ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಶುಚಿಗೊಳಿಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ತಿಳಿಸಿದ್ದಾರೆ.

ಧಾರ್ಮಿಕ ಸ್ಥಳಗಳಾದ ದೇವಸ್ಥಾನಗಳಿಗೆ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬಂದು ಹೋಗುವುದರಿಂದ ದೇವಸ್ಥಾನದ ಆವರಣ ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ಶುಚಿ ಕಾಪಾಡುವ ಉದ್ದೇಶದಿಂದ ನಗರ ನೈರ್ಮಲ್ಯ ಕಾಪಾಡುವುದು ಅಗ್ಯತ್ಯವಿರುದ್ದು, ಈ ನಿಟ್ಟಿನಲ್ಲಿ ಸ್ವಚ್ಛ ಸರ್ವೇಕ್ಷಣ್-2025-26 ರ ಕೇಂದ್ರ ನಗರ ಪಾಲಿಕೆ ರೂಪಿಸಿರುವ ಸ್ವಚ್ಛತಾ ಅಭಿಯಾನದ 3ನೇ ಭಾಗವಾಗಿ ದೇವಸ್ಥಾನಗಳನ್ನು ಹಾಗೂ ಐತಿಹಾಸಿಕ ಸ್ಥಳಗಳನ್ನು ಆಯ್ಕೆ ಮಾಡಿಕೊಂಡು ಒಟ್ಟು 30 ದೇವಸ್ಥಾನಗಳನ್ನು ಸ್ವಚ್ಛಗೊಳಿಸಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಮಾಹಿತಿ ನೀಡಿದ್ದಾರೆ.
ಸ್ವಚ್ಛಗೊಳಿಸಿದ ಪ್ರಮುಖ ದೇವಸ್ಥಾನಗಳು
ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ, ಹೊಂಬೇಗೌಡನಗರದ ಶ್ರೀ ಆಂಜನೇಯ ದೇವಸ್ಥಾನ, ಸಿದ್ಧಾಪುರದ ಶ್ರೀರಾಮ ದೇವಸ್ಥಾನ, ವಿವಿಪುರಂ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ, ಗುಟ್ಟಹಳ್ಳಿ ಶ್ರೀ ಶಿವಶಂಕರ ದೇವಸ್ಥಾನ, ಸುಧಾಮನಗರದ ಶ್ರೀ ಗಣೇಶ ದೇವಸ್ಥಾನ, ಚಾಮರಾಜಪೇಟೆಯ ಶ್ರೀ ರಾಮೇಶ್ವರ ದೇವಸ್ಥಾನ, ರಾಯಪುರಂನ ಶ್ರೀ ಕಲ್ಲು ನಾಗರ ದೇವಸ್ಥಾನ, ಶಿವಾಜಿನಗರದ ಶ್ರೀ ಮುತ್ಯಾಲಮ್ಮ ದೇವಸ್ಥಾನ, ಜಿಬಿಎ ಕೇಂದ್ರ ಕಛೇರಿ ಆವರಣದ ಏಳು ಸುತ್ತಿನಕೋಟೆ ಸಪ್ತಮಾತ್ರಕಾ ಶ್ರೀ ಆದಿಪರಾಶಕ್ತಿ ದೇವಸ್ಥಾನ, ಸಿ.ವಿ. ರಾಮನ್ ನಗರದ ಶ್ರೀ ಕೋದಂಡರಾಮಸ್ವಾಮಿ ದೇವಸ್ಥಾನ, ಇನ್ನಿತರೆ ದೇವಸ್ಥಾನಗಳನ್ನು ಸ್ವಚ್ಛಗೊಳಿಸಲಾಗಿದ್ದು, ದೇವಸ್ಥಾನಗಳ ಸುತ್ತಮುತ್ತ ಶುಚಿಗೊಳಿಸುವುದರೊಂದಿಗೆ ತ್ಯಾಜ್ಯ ಎಸೆಯದಂತೆ ಹಾಗೂ ಶುಚಿತ್ವ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಗಿದೆ.
ಸುಮಾರು 545 ಸಿಬ್ಬಂದಿ ಭಾಗಿ
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿನ ದೇವಸ್ಥಾನಗಳ ಸ್ವಚ್ಛತಾ ಕಾರ್ಯದಲ್ಲಿ 105 ಅಧಿಕಾರಿಗಳು/ಸ್ವಚ್ಛತಾ ಸಿಬ್ಬಂದಿ ಹಾಗೂ 442 ಪೌರ ಕಾರ್ಮಿಕರು ಸೇರಿದಂತೆ ಒಟ್ಟು 545 ಜನ ಭಾಗಿಯಾಗಿದ್ದರು ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಅವರ ಮೇಲುಸ್ತುವಾರಿಯಲ್ಲಿ ನಡೆದ ಈ ಸ್ವಚ್ಛತಾ ಅಭಿಯಾನದಲ್ಲಿ ಡಿಜಿಎಂ ಭೀಮೇಶ್ ನಾಯಕ್, ಆಯಾಯ ವಿಭಾಗಗಳ ಎಜಿಎಂ ಗಳು, ಪೌರಕಾರ್ಮಿಕರು, ಆಟೋ ಟಿಪ್ಪರ್ ಸಿಬ್ಬಂದಿಗಳು ಭಾಗಿಯಾಗಿದ್ದರು.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು?












Click it and Unblock the Notifications