GBA: ಪಾದಚಾರಿ ಮಾರ್ಗ ಒತ್ತುವರಿ ಮಾಡಿದ್ರೆ ಬೀಳುತ್ತೆ ದಂಡ: ನಗರದಲ್ಲಿ ಬಿರುಸಿನ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಲೇ ಇದೆ. ಸಂಚಾರ ದಟ್ಟಣೆ, ವ್ಯಾಪಾರ ವಹೀವಾಟು ಏರುಗತಿಯಲ್ಲಿ. ಇದರೊಂದಿಗೆ ಒತ್ತುವರಿ ಸೇರಿದಂತೆ ಇನ್ನಿತರ ಸಮಸ್ಯೆಗಳು ಹೆಚ್ಚಾಗುತ್ತಿವೆ. ಇದೀಗ ನಗರದ ಪಾದಾಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡವರ ವಿರುದ್ಧ ದಂಡ ಪ್ರಯೋಗಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಿರ್ಧರಿಸಿದೆ. ನಗರದ ಹಳೆ ಮದ್ರಾಸ್ ರಸ್ತೆಯಲ್ಲಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿರುವವರ ವಿರುದ್ಧ ದಂಡ ವಿಧಿಸಿ ತೆರವು ಕಾರ್ಯಾಚರಣೆ ನಡೆಸಲಾಯಿತು. ಇದರೊಂದಿಗೆ ಸುಗಮ ಪಾದಚಾರಿ ಮಾರ್ಗವನ್ನು ನಿರ್ಮಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಹಳೆ ಮದ್ರಾಸ್ ರಸ್ತೆಯ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣದಿಂದ ಹಲಸೂರು ಕೆರೆವರೆಗೆ ಇಂದು ಅಧಿಕಾರಿಗಳೊಂದಿಗೆ ನಡಿಗೆ ಮೂಲಕ ಪರಿಶೀಲನೆ ನಡೆಸಿತು. ಈ ವೇಳೆ ಮಾತನಾಡಿದ ಅವರು, ಪಾದಚಾರಿ ಮಾರ್ಗಗಳಲ್ಲಿ ತಂಡಗಳನ್ನು ನಿಯೋಜಿಸಿ ಸಾಮೂಹಿಕ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು. ಪಾದಚಾರಿ ಮಾರ್ಗಗಳನ್ನು ಧೂಳು ಸೇರಿದಂತೆ ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಸುಂದರವಾಗಿ ಕಾಣುವಂತೆ ಮಾಡಬೇಕು. ಎಲ್ಲೆಲ್ಲಿ ತ್ಯಾಜ್ಯ ಹಾಗೂ ಭಗ್ನಾವಶೇಷಗಳಿದ್ದರೂ ಕೂಡಲೇ ಅವನ್ನು ತೆರವುಗೊಳಿಸಿ ಸ್ವಚ್ಛತೆ ಕಾಪಾಡಬೇಕು.

GBA

ಸುಗಮ ಸಂಚಾರಕ್ಕೆ ಜಿಬಿಎ ಆದ್ಯತೆ

ಪಾದಚಾರಿ ಮಾರ್ಗಗಳಲ್ಲಿ ಹಾನಿಗೊಳಗಾದ ಸ್ಲ್ಯಾಬ್‌ಗಳು ಮತ್ತು ಕರ್ಬ್ ಸ್ಟೋನ್‌ಗಳನ್ನು ದುರಸ್ತಿಗೊಳಿಸಿ. ಪಾದಚಾರಿಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಹಳೆ ಮದ್ರಾಸ್ ರಸ್ತೆಯ ಎಂಇಜಿ ತಡೆಗೋಡೆ ಮುರಿದಿರುವ ಭಾಗದಲ್ಲಿ ತ್ಯಾಜ್ಯವನ್ನು ಬಿಸಾಡುತ್ತಿರುವುದು ಹಾಗೂ ಗೋಡೆಯ ಮೇಲ್ಭಾಗದಲ್ಲಿ ಪಾದಚಾರಿ ಮಾರ್ಗದ ಕಡೆಗೆ ತಾಗುವ ರೀತಿಯಲ್ಲಿ ಕಬ್ಬಿಣದ ತಂತಿಗಳು ಇರುವುದನ್ನು ಗಮನಿಸಿ, ಇದರಿಂದ ಅಪಾಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟವರಿಗೆ ದೂರವಾಣಿ ಮೂಲಕ ತಕ್ಷಣ ಸರಿಪಡಿಸಲು ನಿರ್ದೇಶಿಸಿದರು.

ಹಳೆ ಮದ್ರಾಸ್ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಪಾದಚಾರಿ ಮಾರ್ಗದಲ್ಲಿ ನರ್ಸರಿ, ಗ್ರಾನೈಟ್ ಮಳಿಗೆ ಹಾಗೂ ಮರ್ಪಿ ರಸ್ತೆಯಲ್ಲಿ ಸಂಪೂರ್ಣವಾಗಿ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ, ಒತ್ತುವರಿ ಮಾಡಿದವರಿಗೆ ದಂಡ ವಿಧಿಸಲು ಸೂಚನೆ ನೀಡಿದರು. ಜೊತೆಗೆ ಪಾದಚಾರಿಗಳಿಗೆ ತಾಗುವ ರೀತಿಯಲ್ಲಿರುವ ಮರದ ರೆಂಬೆ/ಕೊಂಬೆಗಳನ್ನು ತೆರವುಗೊಳಿಸಬೇಕೆಂದು ಹೇಳಿದರು.

ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು, ಹಲಸೂರು ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಸವಿಸ್ತಾರ ಪ್ರಾತ್ಯಕ್ಷಿಕೆಯನ್ನು ಸಿದ್ಧಪಡಿಸಿ ವಿವರಿಸಬೇಕು. ಈಗಾಗಲೇ ವಿವಿಧೆಡೆ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಲು ನಾಮಫಲಕಗಳನ್ನು ಅಳವಡಿಸುವಂತೆ ತಿಳಿಸಿದರು.

ಹಲಸೂರು ಕೆರೆ ಸಮಗ್ರ ಅಭಿವೃದ್ಧಿ

ಹಲಸೂರು ಕೆರೆ 106 ಎಕರೆ ಪ್ರದೇಶದಲ್ಲಿದ್ದು, 33.50 ಕೋಟಿ ರೂ. ವೆಚ್ಚದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ಅದರಡಿಯಲ್ಲಿ ಕೆರೆಯಲ್ಲಿ ಹೂಳೆತ್ತುವುದು, ಎರಡು ಹಂತದ ವಾಯುವಿಹಾರ ಮಾರ್ಗ ಅಭಿವೃದ್ಧಿ, ಗ್ರಿಲ್ ಅಳವಡಿಕೆ, ಇನ್‌ಲೆಟ್ ಬಾಕ್ಸ್ ಕಲ್ವರ್ಟ್ ನಿರ್ಮಾಣ, 6 ಐಲ್ಯಾಂಡ್‌ಗಳ ದುರಸ್ತಿ, ಬಂಡ್ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳು ಪ್ರಗತಿಯಲ್ಲಿವೆ. ಮಳೆಗಾಲಕ್ಕೂ ಮುನ್ನ ಕಾಮಗಾರಿಗಳನ್ನು ಪೂರ್ಣಗೊಳಿಸುವುದಾಗಿ ಕಾರ್ಯಪಾಲಕ ಅಭಿಯಂತರರು ಹೇಳಿದರು.

ಕೆರೆಗೆ ಹೊಂದಿಕೊಂಡಿರುವ ಉದ್ಯಾನವನಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಹಳೆಯ ಕಲ್ಯಾಣಿಯನ್ನು ತೆರವುಗೊಳಿಸಿ ಹೊಸದಾಗಿ ಕಲ್ಯಾಣಿ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬೇರೆ ಏನೆಲ್ಲ ಸೂಚನೆ ನೀಡಲಾಗಿದೆ?

* ಹಳೆ ಮದ್ರಾಸ್ ರಸ್ತೆಯ ಪಾದಚಾರಿ ಮಾರ್ಗಗಳಲ್ಲಿ ಬಿದಿರು ಸಸಿಗಳನ್ನು ನೆಟ್ಟು ಪೋಷಣೆ ಮಾಡಬೇಕು.

* ಟ್ರಾಕ್ಟರ್‌ಗಳ ಬದಲು ಟಿಪ್ಪರ್‌ಗಳನ್ನು ಖರೀದಿಸಿ ಸ್ವಚ್ಛತಾ ಕಾರ್ಯಗಳಿಗೆ ಬಳಸಬೇಕು.

* ರಸ್ತೆ ಬದಿಯ ಶೋಲ್ಡರ್ ಡ್ರೇನ್‌ಗಳಲ್ಲಿ ಮಳೆಗಾಲಕ್ಕೂ ಮುನ್ನ ಹೂಳೆತ್ತಬೇಕು.

* 100 ಅಡಿ ರಸ್ತೆ ಜಂಕ್ಷನ್‌ನ ಮೆಟ್ರೋ ಜಾಗದಲ್ಲಿ ನಿರ್ಮಿಸಿರುವ ಅನಧಿಕೃತ ಕಟ್ಟಡವನ್ನು ಮೆಟ್ರೋ ಅಧಿಕಾರಿಗಳು ಕೂಡಲೇ ತೆರವುಗೊಳಿಸಬೇಕು.

* ಜಲಮಂಡಳಿಯ ವಾಲ್‌ನಿಂದ ರಸ್ತೆ ಕುಸಿತ ಉಂಟಾಗಿರುವುದನ್ನು ಸರಿಪಡಿಸುವುದು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಪಾರ್ಕಿಂಗ್ ಮಾಡಿರುವ ವಾಹನಗಳನ್ನು ತೆರವುಗೊಳಿಸಿ, ಸಂಬಂಧಪಟ್ಟವರಿಗೆ ದಂಡ ವಿಧಿಸಬೇಕು ಎಂದು ಜಿಬಿಎ ಆಯುಕ್ತರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+