GBA: ಆಸ್ತಿ ತೆರಿಗೆ ಬಾಕಿದಾರರಿಗೆ ಶಾಕ್: ಸ್ವತ್ತುಗಳನ್ನು ಪಾಲಿಕೆ ಹೆಸರಿಗೆ ವರ್ಗಾವಣೆ ಕ್ರಮ: ಜಿಬಿಎ
GBA: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಸರ್ಕಾರದ ಆದೇಶದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನಾಗಿ ಪುನರ್ ರಚಿಸಿ, ಸದರಿ ಪ್ರಾಧಿಕಾರದ ಅಡಿಯಲ್ಲಿ ಐದು ಪ್ರತ್ಯೇಕ ಬೆಂಗಳೂರು ನಗರ ಪಾಲಿಕೆಗಳನ್ನಾಗಿ ರಚಿಸಲಾಗಿರುತ್ತದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಂದ ಸ್ವೀಕರಿಸಲಾಗುವ ಆಸ್ತಿ ತೆರಿಗೆಯನ್ನು ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು / ನಿರ್ವಹಿಸಲು ಉಪಯೋಗಿಸಲಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ಕಲಂ 156 ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳು ಪ್ರತಿಯೊಂದು ಆರ್ಥಿಕ ಸಾಲಿನಲ್ಲಿ ಆಸ್ತಿತೆರಿಗೆ ಪಾವತಿ ಮಾಡಬೇಕಾಗಿರುತ್ತದೆ. ಆಸ್ತಿತೆರಿಗೆ ಪಾವತಿಸದ ಪ್ರಕರಣಗಳಲ್ಲಿ ಆಸ್ತಿತೆರಿಗೆ ವಸೂಲಿ ಮಾಡುವ ಕಾರ್ಯವಿಧಾನವನ್ನು ಕಾಯ್ದೆಯಲ್ಲಿನ ಕಲಂ 159ರಲ್ಲಿ ಹಾಗೂ ಆಸ್ತಿತೆರಿಗೆ ನಿರ್ಧಾರ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024ರ ಅಡಿಯಲ್ಲಿ ಅಧಿಸೂಚಿಸಲಾಗಿರುತ್ತದೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024 ರ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿತೆರಿಗೆ ಬೇಡಿಕೆ ಪತ್ರ ಜಾರಿ ಮಾಡಲಾಗಿದ್ದು ಸಾಕಷ್ಟು ಕಾಲಾವಕಾಶವನ್ನು ನೀಡಲಾದ ನಂತರದಲ್ಲೂ ಬೇಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ತಮ್ಮ ಸ್ವತ್ತಿನ ಆಸ್ತಿತೆರಿಗೆಯನ್ನು ಪಾವತಿಸಲು ತಿಳಿಸಲಾಗಿದೆ.
ಬಾಕಿ ಆಸ್ತಿತೆರಿಗೆಯನ್ನು ಪಾವತಿಸಲು, ಸಾಕಷ್ಟು ಅವಕಾಶಗಳನ್ನು ನೀಡಿದ ನಂತರ ಮೊತ್ತವನ್ನು ಪಾವತಿಸದ, ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸುಸ್ತಿದಾರರೆಂದು ಗುರುತಿಸಲಾದ ಕೆಲವು ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ವಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸುವುದಾಗಿ ತಿಳಿಸಿ ನಿಯಮಾವಳಿಗಳ ಅನ್ವಯ ಘೋಷಣೆಗಳನ್ನು (Proclamation Notice) ಸುಸ್ತಿದಾರರಿಗೆ ಜಾರಿ ಮಾಡಲಾಗಿರುತ್ತದೆ.
ಹರಾಜಿನಲ್ಲಿ ನಿಗಧಿಯಾಗುವ ಮೊತ್ತದಲ್ಲಿ ಪಾಲಿಕೆಗೆ ಪಾವತಿಸಬೇಕಾಗಿರುವ ಆಸ್ತಿತೆರಿಗೆ, ಉಪಕರಗಳು, ದಂಡ, ಬಡ್ಡಿ ಸೇರಿದಂತೆ ಒಟ್ಟು ಮೊತ್ತವನ್ನು ಕಡಿತಗೊಳಿಸಿ ಉಳಿಕೆ ಮೊತ್ತವನ್ನು ಮೂಲ ಮಾಲೀಕರ ಬ್ಯಾಂಕ್ ಖಾತೆಗೆ ಜಮೆ ಮಾಡಿಕೊಳ್ಳಲು ಉದ್ದೇಶಿಸಲಾಗಿತ್ತು. ಕಳೆದ ಒಂದು ತಿಂಗಳಿಲ್ಲಿ ಹಲವು ಬಾರಿ ಪ್ರಕ್ರಿಯೆ ಕೈಗೊಂಡರೂ ಸುಸ್ತಿದಾರರ ಸ್ವತ್ತನ್ನು ಹರಾಜಿನಲ್ಲಿ ವಿಲೇವಾರಿ ಮಾಡಲು ಸಾಧ್ಯವಾಗಿರುವುದಿಲ್ಲ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಕಲಂ 155 ರಲ್ಲಿ ತಿಳಿಸಿರುವಂತೆ ಸ್ಮತ್ತಿಗೆ ಆಸ್ತಿತೆರಿಗೆಯು ಮೊದಲ ಶುಲ್ಕವಾಗಿ ತಿಳಿಸಲಾಗಿರುವ ಮೇರೆಗೆ ಮತ್ತು ಸುಸ್ತಿದಾರರಿಗೆ ಜಾರಿ ಮಾಡಲಾಗಿರುವ ಘೋಷಣೆ (Proclamation Notice) ರಲ್ಲಿ ಈಗಾಗಲೇ ತಿಳಿಸಲಾಗಿದ್ದಂತೆ ಹರಾಜು ಪ್ರಕ್ರಿಯೆಯಲ್ಲಿ ಯಾವುದೇ ಬಿಡ್ಡುದಾರರು ಭಾಗವಹಿಸದ ಕಾರಣ ಅಂತಹ ಸ್ವತ್ತನ್ನು ಪಾಲಿಕೆಯು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಮುಂದುವರಿದು, ಗುರುತಿಸಲಾಗಿರುವ ಸ್ವತ್ತುಗಳಿಗೆ ಹರಾಜಿನಲ್ಲಿ ನಿಗದಿಪಡಿಸಲಾಗಿದ್ದ ಮೊತ್ತವನ್ನು ಪಾಲಿಕೆಯ ತನ್ನ ಸ್ವಂತ ನಿಧಿಯಿಂದ ಭರಿಸಿ, ಪಾಲಿಕೆಗೆ ಪಾವತಿಸಬೇಕಾದ ಒಟ್ಟು ಮೊತ್ತವನ್ನು ಕಟಾವಣೆ ಮಾಡಿ ಬಾಕಿ ಮೊತ್ತವನ್ನು ಸ್ವತ್ತಿನ ಮಾಲೀಕರ ಖಾತೆಗೆ ವರ್ಗಾಯಿಸಿದ ನಂತರದಲ್ಲಿ ಆಸ್ತಿ ವಹಿಯಲ್ಲಿ ಸ್ವತ್ತನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಹೆಸರಿಗೆ ವರ್ಗಾಯಿಸಿಕೊಳ್ಳಲು ಉದ್ದೇಶಿಸಲಾಗಿದೆ. ಈ ಪ್ರಕ್ರಿಯೆಯಿಂದಾಗಿ ಪಾಲಿಕೆಯ ಆದಾಯ ಹೆಚ್ಚಾಗುವುದರೊಂದಿಗೆ, ಸಂಪನ್ಮೂಲ ಕ್ರೋಢೀಕರಣವೂ ಹೆಚ್ಚಾಗುತ್ತದೆ.
ಸದರಿ ಪ್ರಕ್ರಿಯೆಯ ಪ್ರಾರಂಭಿಕ ಅನುಷ್ಠಾನಕ್ಕಾಗಿ ಮೊದಲನೇ ಹಂತದಲ್ಲಿ ಜಂಟಿ ಆಯುಕ್ತರು (ಬೊಮ್ಮನಹಳ್ಳಿ) ರವರು 22 ಸ್ವತ್ತುಗಳಿಗೆ ಮತ್ತು ಜಂಟಿ ಆಯುಕ್ತರು (ಜಯನಗರ) ರವರು 30 ಸ್ವತ್ತುಗಳನ್ನು ಕುರಿತು ಪಾಲಿಕೆ ವಶಕ್ಕೆ ಪಡೆಯುವ ಕುರಿತು ಆದೇಶಗಳನ್ನು ಹೊರಡಿಸಿರುತ್ತಾರೆ. ಮುಂದುವರೆದು, ಸದರಿ ಸ್ವತ್ತುಗಳ ಮಾಲೀಕರುಗಳ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆಯಲಾಗುತ್ತಿದೆ. ಮುಂದುವರೆದು, ಸದರಿ ಮಾಲೀಕರುಗಳಿಗೆ ಪಾವತಿಸಬೇಕಾದ ಮೊತ್ತವನ್ನು ಕುರಿತಂತೆ ಅಪರ ಆಯುಕ್ತರು (ಕಂದಾಯ) ರವರ ಮೂಲಕ ಆಯುಕ್ತರು, ಬೆಂಗಳೂರು ದಕ್ಷಿಣ ನಗರ ಪಾಲಿಕೆ ರವರಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಬೊಮ್ಮನಹಳ್ಳಿ ಹಾಗೂ ಜಯನಗರ ವಲಯಗಳ ಜಂಟಿ ಆಯುಕ್ತರನ್ನು ಸಂಪರ್ಕಿಸಲು ಕೋರಿದೆ.
ದಕ್ಷಿಣ ನಗರ ಪಾಲಿಕೆಯು ಮೇಲಿನ ಪ್ರಕ್ರಿಯೆಯನ್ನು ಕುರಿತು ಸ್ವತ್ತಿನ ವಿವರಗಳೊಂದಿಗೆ ಅಧಿಸೂಚನೆ ಹೊರಡಿಸುವ ಮುನ್ನ ಸಂಪೂರ್ಣ ಬೇಬಾಕಿ ಮೊತ್ತವನ್ನು ಸ್ವತ್ತಿನ ಮಾಲೀಕರು ಪಾವತಿಸಿದಲ್ಲಿ ಪಾಲಿಕೆ ವಶಕ್ಕೆ ಪಡೆದುಕೊಳ್ಳುವ ಕ್ರಮದಿಂದ ಕೈಬಿಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications