ಬೆಂಗಳೂರಿನ ಈ ಭಾಗದ ಆಸ್ತಿದಾರರಿಗೆ ಜಿಬಿಎ ಬಿಗ್ ಶಾಕ್!
ಬೆಂಗಳೂರಿನ ಆಸ್ತಿದಾರರಿಗೆ ಶಾಕ್ ಕೊಡುವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತದ ನಗರ ಪಾಲಿಕೆಯೊಂದು ಮುಂದಾಗಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಕೆಲಸವನ್ನು ಗ್ರೇಟರ್ ಬೆಂಗಳೂರು ಹಾಗೂ ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಇದೀಗ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಸೇರಿಸಲು ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಸೋಮವಾರ ಎಂ. ಜಿ. ರಸ್ತೆಯ ಪಿ.ಯು.ಬಿ ಕಟ್ಟಡದ 10ನೇ ಮಹಡಿಯ ಸಭಾಂಗಣದಲ್ಲಿ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು, ಇ -ಖಾತಾಗಳ ವಿತರಣೆ, ಜಿ.ಪಿ.ಎಸ್ ಸರ್ವೆ ಕಾರ್ಯ, ಕಂದಾಯ ವಸೂಲಾತಿ ಹೆಚ್ಚಳಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳು, ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು/ ಸಿಬ್ಬಂದಿಗಳ ವಿವರಣೆ, ಕೊರತೆಯಾಗುವ ಸಿಬ್ಬಂದಿಗಳ ಬಗ್ಗೆ ಚರ್ಚಿಸಿದ್ದಾರೆ.

ವಿಶೇಷ ಆಯುಕ್ತರು (ಕಂದಾಯ) ಅವರು ಈಗಾಗಲೇ ನೀಡಿರುವ ಮಾರ್ಗಸೂಚಿಗಳು ಹಾಗೂ ನಿರ್ದೇಶನಗಳ ಜೊತೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪ್ರಮಾಣವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಏರಿಕೆಗೆ ಏನೇನು ಕ್ರಮಗಳನ್ನು ಕೈಗೊಳ್ಳಬೇಂಬ ಬಗ್ಗೆ ರೂಪರೇಷೆ ಸಿದ್ಧಪಡಿಸಲು ಸೂಚಿಸಿದ್ದಾರೆ. ಮಂಜೂರಾತಿ ನಕ್ಷೆ ಪಡೆದು ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆದಿರುವಂತಹ ಕಟ್ಟಡಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ವಹಿಸಿ ಎಂದಿದ್ದಾರೆ.
ಆಸ್ತಿಗೆ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳನ್ನು ಪತ್ತೆ ಹಚ್ಚಿ ಅವುಗಳಿಗೆ ಆಸ್ತಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ವಹಿಸಲು ಸೂಚನೆ ಕೊಡಲಾಗಿದೆ.
ಈ ಸಂದರ್ಭದಲ್ಲಿ ಹೆಚ್ಚುವರಿ ಆಯುಕ್ತರಾದ (ಅಭಿವೃದ್ಧಿ) ದಲ್ಜಿತ್ ಕುಮಾರ್, ಜಂಟಿ ಆಯುಕ್ತರಾದ ರಂಗನಾಥ್, ಉಪ ಆಯುಕ್ತರಾದ ಜೆ. ರಾಜು, ಕಂದಾಯ ಅಧಿಕಾರಿಗಳು, ಸಹ ಕಂದಾಯ ಅಧಿಕಾರಿಗಳು ಹಾಜರಿದ್ದರು.
ಚಿಕ್ಕಬೆಳ್ಳಂದೂರು ಕೆರೆ ಒತ್ತುವರಿ ಭಾಗ ತೆರವು
ಬೆಂಗಳೂರು ಪೂರ್ವ ನಗರ ಪಾಲಿಕೆ ಮಹದೇವಪುರ ವ್ಯಾಪ್ತಿಯಲ್ಲಿರುವ ಚಿಕ್ಕಬೆಳ್ಳಂದೂರು ಗ್ರಾಮದ ಸರ್ವೆ ಸಂಖ್ಯೆ-9ರಲ್ಲಿರುವ ಚಿಕ್ಕಬೆಳ್ಳಂದೂರು ಕೆರೆಯ ಒಟ್ಟು ವಿಸ್ತೀರ್ಣ 67 ಎಕರೆ 14 ಗುಂಟೆಯಾಗಿದ್ದು, ಈ ಪೈಕಿ 3 ಗುಂಟೆ ವಿಸ್ತೀರ್ಣದ ಪ್ರದೇಶವು ಖಾಸಗಿಯವರಿಂದ ಒತ್ತುವರಿಯಾಗಿದೆ.
ಕಂದಾಯ ಇಲಾಖೆಯು ಚಿಕ್ಕಬೆಳ್ಳಂದೂರು ಕೆರೆ ಪ್ರದೇಶದಲ್ಲಿನ ಒತ್ತುವರಿ ಜಾಗವನ್ನು ಗುರುತಿಸಿದ್ದು, ಒತ್ತುವರಿಯಾಗಿರುವ ಸರ್ವೆ ನಕ್ಷೆಯನ್ನು ನಗರ ಪಾಲಿಕೆಗೆ ನೀಡಿರುತ್ತಾರೆ. ಅದರಂತೆ ಅನಧಿಕೃತವಾಗಿ ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡಿರುವವರಿಗೆ ಈಗಾಗಲೇ ನೋಟಿಸ್ ಮತ್ತು ಒತ್ತುವರಿ ತೆರವುಗೊಳಿಸಲು ಆದೇಶವನ್ನು ನೀಡಿದ್ದರು ಸಹಾ ತೆರವುಗೊಳಿಸಿರಲಿಲ್ಲ.
ಕೆರೆ ಒತ್ತುವರಿ ಜಾಗವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆಯಲು ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ಮತ್ತು ಅಪರ ಆಯುಕ್ತರು (ಅಭಿವೃದ್ಧಿ) ಆದ ಲೋಖಂಡೆ ಸ್ನೇಹಲ್ ಸುಧಾಕರ್ ರವರು ಮುಖ್ಯ ಅಭಿಯಂತರರು, (ಮಹದೇವಪುರ ವಲಯ-1) ರವರಿಗೆ ನಿರ್ದೇಶನ ನೀಡಿರುತ್ತಾರೆ. ಈ ಸೂಚನೆಯಂತೆ ಮುಖ್ಯ ಎಂಜಿನಿಯರ್ (ಮಹದೇವಪುರ ವಲಯ-1) ರವರ ನೇತೃತ್ವದಲ್ಲಿ ಇಂದು ಚಿಕ್ಕಬೆಳ್ಳಂದೂರು ಕೆರೆಗೆ ಸೇರಿದ 3 ಗುಂಟೆ ಒತ್ತುವರಿ ಜಾಗವನ್ನು ಕಾರ್ಯಾಚರಣೆ ಮೂಲಕ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದ್ದು, ವಶಕ್ಕೆ ಪಡೆದಿರುವ ಪ್ರದೇಶಕ್ಕೆ ತಂತಿ ಬೇಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿರುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.












Click it and Unblock the Notifications