Rajakaluve: ರಾಜಕಾಲುವೆ ಒತ್ತುವರಿದಾರರಿಗೆ ಬಿಗ್ ಶಾಕ್; ಒಂದಡಿ ಜಾಗ ಬಿಡದೇ ನೈಜ ಸರ್ವೇ ಮೂಲಕ ತೆರವಿಗೆ ಸೂಚನೆ

ಬೆಂಗಳೂರು: ವಿಶ್ವಬ್ಯಾಂಕ್ ಅನುದಾನದಡಿಯಲ್ಲಿ ಕೈಗೊಂಡಿರುವ ಮಳೆನೀರುಗಾಲುವೆ ಅಭಿವೃದ್ಧಿ ಮತ್ತು ನಿರ್ವಹಣೆ ಕಾಮಗಾರಿಗಳಿಗೆ ಒಂದಷ್ಟು ತಾಂತ್ರಿಕ ಅಡ್ಡಿಗಳು ಎದುರಾಗಿದೆ. ಇದರೊಂದಿಗೆ ಆಡಳಿತಾತ್ಮಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ನಿರಂತರ ಕ್ರಮ ಜರುಗಿಸುತ್ತಿದ್ದಾರೆ. ಇದರೊಂದಿಗೆ ಪಾಲಿಕೆ ವ್ಯಾಪ್ತಿಯ ಒತ್ತುವರಿದಾರರಿಗೆ ಬಿಗ್ ಶಾಕ್ ನೀಡಲು ಅಧಿಕಾರಿಗಳು ಸಜ್ಜಾಗಿದ್ದಾರೆ.

ಕಾಮಗಾರಿ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಿಸಿದಂತೆ ಬುಧವಾರ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿ, ರಾಜಕಾಲುವೆ ಒತ್ತುವರಿ ತೆರವು, ಕಾಲುವೆ ಮಾರ್ಗದಲ್ಲಿನ ಯುಟಿಲಿಟಿಗಳ ಸ್ಥಳಾಂತರಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜವಾಬ್ದಾರಿಗಳ ಕುರಿತು ಸವಿಸ್ತಾರವಾಗಿ ಪರಿಶೀಲನೆ ನಡೆಸಿದರು.

Rajakaluve Encroachment

ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಒತ್ತುವರಿ ಗುರುತಿಸಿ ತೆರುವ ಕಾರ್ಯ ಕೈಗೊಳ್ಳಲಾಗಿದೆ. ಈ ಕೆಲಸ ಪರಿಣಾಮಕಾರಿಯಾಗಬೇಕು. ಒತ್ತುವರಿಯ ನೈಜ ಜಾಗ ಗುರುತಿಸಿ ಕ್ರಮ ಜರುಗಿಸಿಲು ಮುಂದಾಗಿದ್ದ, ಒಂದೇ ಒಂದು ಅಡಿ ಜಾಗವನ್ನು ಬಿಡದಂತೆ ಅತಿಕ್ರಮಣ ತೆರವುಗೊಳಿಸಬೇಕು. ಇದರೊಂದಿಗೆ ಬಾಕಿ ಉಳಿದಿರುವ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಡ್ಡಿಯಾದ ಸವಾಲುಗಳನ್ನು ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಸರ್ವೇ, ಭೂಸ್ವಾಧೀನ ಪ್ರಕ್ರಿಯೆಗೆ ವೇಗ

ವಿಶ್ವಬ್ಯಾಂಕ್ ನೆರವಿನಡಿ ಕೈಗೊಂಡಿರುವ ಕಾಮಗಾರಿಯ ಪೈಕಿ ಶೇಕಡಾ 80ರಷ್ಟು ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಉಳಿದ ಶೇ. 20ರಷ್ಟು ಕಾಮಗಾರಿಯು ರಾಜಕಾಲುವೆ ಒತ್ತುವರಿ ಮತ್ತು ಕೆಲವು ಆಡಳಿತಾತ್ಮಕ ಕಾರಣಗಳಿಂದ ಬಾಕಿ ಇರುತ್ತದೆ. ರಾಜಕಾಲುವೆಗಳನ್ನು ನೈಜ ಅಗಲಕ್ಕೆ ಮರುಸ್ಥಾಪಿಸುವ ಸಲುವಾಗಿ ಒತ್ತುವರಿಗಳನ್ನು ತೆರವು ಮಾಡಿ ಕಾಮಗಾರಿ ಕೈಗೊಳ್ಳಬೇಕು.

ಕಂದಾಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ಕಾರ್ಯ

ಕಾಮಗಾರಿ ವ್ಯಾಪ್ತಿಯಲ್ಲಿನ ರಾಜಕಾಲುವೆಗಳ ವಾಸ್ತವ ಅಗಲಕ್ಕೂ ಮತ್ತು ಕಂದಾಯ ಸರ್ವೇ ನಕ್ಷೆಗಳಲ್ಲಿ ನಮೂದಾಗಿರುವ ಅಗಲಕ್ಕೂ ಕಂಡು ಬರುತ್ತಿರುವ ವ್ಯತ್ಯಾಸಗಳನ್ನು ಬಗೆಹರಿಸಲು ಕಂದಾಯ ಇಲಾಖೆಯ ಭೂ ದಾಖಲೆ, ತಹಶೀಲ್ದಾರ್ ಹಾಗೂ ನಗರ ಪಾಲಿಕೆಯ ಭೂ ದಾಖಲೆ ಅಧಿಕಾರಿಗಳು ಜಂಟಿಯಾಗಿ ಸಮೀಕ್ಷೆ ಕೈಗೊಂಡು ಕಾಲುವೆಗಳ ನೈಜ ಅಳತೆಯ ಗಡಿ ಗುರುತಿಸಿ, ಕಾಲುವೆಗಳ ಒತ್ತುವರಿ ತೆರವು ಮಾಡುವ ಮೂಲಕ ಭೂಸ್ವಾಧೀನ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾಮಗಾರಿಗಳಿಗೆ ಎದುರಾದ ಸಮಸ್ಯೆಗೆ ಇತ್ಯರ್ಥಪಡಿಸುವಂತೆ ಹೇಳಿದರು.

ಸ್ಪಷ್ಟ ಕಾರ್ಯಯೋಜನೆ ರೂಪಿಸಿ: ಬೆಸ್ಕಾಂಗೆ ಸೂಚನೆ

ಮಳೆನೀರುಗಾಲುವೆ ಮಾರ್ಗದ ಉದ್ದಕ್ಕೂ ಅಕ್ಕಪಕ್ಕದಲ್ಲಿರುವ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮಹಾರ್‌ಗಳು ಇತರ ವಿದ್ಯುತ್ ಯುಟಿಲಿಟಿಗಳ ಸ್ಥಳಾಂತರಕ್ಕೆ ಸ್ಪಷ್ಟ ಕಾರ್ಯಯೋಜನೆ ರೂಪಿಸಿಬೇಕು. ಜೊತೆಗೆ ಕಾಲ ಮಿತಿಯಲ್ಲಿ ಸೂಕ್ತ ಜಾಗಕ್ಕೆ ಸ್ಥಳಾಂತರಿಸಬೇಕು. ಯೋಜನಾ ಅನುಷ್ಠಾನ ತಂಡದೊಂದಿಗೆ ಜಂಟಿ ಸ್ಥಳ ತಪಾಸಣೆ ನಡೆಸಿ ಯಾವುದೇ ವಿಳಂಬವಾಗದಂತೆ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಯುಟಿಲಿಟಿಗಳ ಸ್ಥಳಾಂತರದ ಸಂದರ್ಭದಲ್ಲಿ ಸಾರ್ವಜನಿಕ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯುತ್ ತಂತಿಗಳಿಗೆ ತಗಲುವ ಮರದ ರೆಂಬೆ ಕೊಂಬೆಗಳನ್ನು ಕತ್ತರಿಸುವಾಗ ಅಗತ್ಯವಿದ್ದಲ್ಲಿ ಅರಣ್ಯ ವಿಭಾಗದ ಪೂರ್ವಾನುಮತಿ ಪಡೆದು ನಿರ್ವಹಣೆ ಕಾರ್ಯ ಕೈಗೊಳ್ಳಬೇಕು. ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿಕೊಂಡು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಕಾರ್ಯ ನಿರ್ವಹಿಸಬೇಕು.

ಒಳಚರಂಡಿ ಸ್ಥಳಾಂತರಕ್ಕೆ ಜಲಮಂಡಳಿಗೆ ಸೂಚನೆ

ಮಳೆನೀರುಗಾಲುವೆ ಅಭಿವೃದ್ಧಿಗೆ ಅಡ್ಡಿಯಾಗಿರುವ ಒಳಚರಂಡಿ ಮಾರ್ಗಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು. ಕೊಳಚೆ ನೀರು ಮಳೆನೀರುಗಾಲುವೆಗೆ ಸೇರುತ್ತಿರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಲ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು. ಕಾಮಗಾರಿ ವ್ಯಾಪ್ತಿಯಲ್ಲಿನ ಜಲಮಂಡಳಿ ಸಂಬಂಧಿಸಿದ ಯುಟಿಲಿಟಿ ನಕ್ಷೆಗಳನ್ನು ಸಿದ್ಧಪಡಿಸಿ ಅಗತ್ಯವಿರುವ ಕಡೆ ಸ್ಥಳಾಂತರ ಮಾಡುವ ಮೂಲಕ ಕಾಮಗಾರಿ ಪೂರ್ಣಗೊಳಿಸಲು ಸಹಕರಿಸಬೇಕು ಎಂದರು.

ಜಲಮಂಡಳಿ ವತಿಯಿಂದ ಕೈಗೊಂಡ ಒಳಚರಂಡಿ ಸಂಸ್ಕರಣ ಘಟಕ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಮೂಲಸೌಕರ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು.

ಗುಣಮಟ್ಟ ಮತ್ತು ಸಾರ್ವಜನಿಕ ಸುರಕ್ಷತೆಗೆ ಮನ್ನಣೆ

ವಿವಿಧ ಸೇವಾ ಪೂರೈಕೆದಾರ ಸಂಸ್ಥೆಗಳಿಂದ ಕತ್ತರಿಸಿರುವ ರಸ್ತೆ ಮರುಸ್ಥಾಪನೆ, ಬ್ಯಾಕ್‌ಫಿಲ್ಲಿಂಗ್, ಕಾಮಗಾರಿ ವೇಳೆ ಸುರಕ್ಷತಾ ಬ್ಯಾರಿಕೇಡ್‌ಗಳ ಅಳವಡಿಕೆ ಹಾಗೂ ಸಾರ್ವಜನಿಕ ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಕಾಮಗಾರಿಗಳಲ್ಲಿ ಗುಣಮಟ್ಟದ ಹಾಗೂ ಸಾರ್ವಜನಿಕ ಸುರಕ್ಷತೆಗೆ ಮನ್ನಣೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳ ಮಾರ್ಗದರ್ಶನ

ಯೋಜನೆಗೆ ಸಂಬಂಧಿಸಿದ ಯಾವುದೇ ತಾಂತ್ರಿಕ ಅಥವಾ ಆಡಳಿತಾತ್ಮಕ ಅಡೆತಡೆ ಉಂಟಾದಲ್ಲಿ ಅದನ್ನು ತಕ್ಷಣವೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಜನಪ್ರತಿನಿಧಿಗಳು, ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಹಾಗೂ ಪರಸ್ಪರ ಸಮನ್ವಯದೊಂದಿಗೆ ವಿಳಂಬವಿಲ್ಲದೆ ಸಮಸ್ಯೆಗಳನ್ನು ಪರಿಹರಿಸುವಂತೆ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದರು.

15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನೆ

ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಪ್ರತಿಯೊಂದು ಇಲಾಖೆಯಿಂದ ನೋಡಲ್ ಅಧಿಕಾರಿಗಳನ್ನು ನೇಮಿಸಿ ಸಮನ್ವಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವಂತೆ ಆಯುಕ್ತರು ಸೂಚಿಸಿದರು.

ಪ್ರತಿ 15 ದಿನಗಳಿಗೊಮ್ಮೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಬಾಕಿ ಇರುವ ಕಾಮಗಾರಿಗಳನ್ನು ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಕಾಮಗಾರಿಗಳ ಗುಣಮಟ್ಟ, ಕಾಲಮಿತಿ ಹಾಗೂ ಸಾರ್ವಜನಿಕ ಸುರಕ್ಷತೆ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+