Get Updates
Get notified of breaking news, exclusive insights, and must-see stories!

ಜಿಬಿಎ ಚುನಾವಣೆ: ಕರಡು ಮತದಾರರ ಪಟ್ಟಿ ಬಗ್ಗೆರಾಜಕೀಯ ಪ್ರತಿನಿಧಿಗಳ ಆಕ್ಷೇಪಣೆ, ಆಯುಕ್ತರಿಗೆ ಮಹತ್ವದ ಸಲಹೆ

ಬೆಂಗಳೂರು: ನ್ಯಾಯಾಲಯದ ಆದೇಶದನ್ವಯ ಮುಂದಿನ ಜೂನ್ ಒಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆ ನಡೆಸಬೇಕಿದೆ. ಈ ಸಂಬಂಧ ಸಕಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಂಡಿದ್ದು, ಇತ್ತೀಚೆಗೆ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಮಂಗಳವಾರ ಅಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಸಭೆ ನಡೆಸಿದರು. ಈ ವೇಳೆ ರಾಜಕೀಯ ಪ್ರತಿನಿಧಿಗಳು ಒಂದಷ್ಟು ಆಕ್ಷೇಪಣೆ ತಿಳಿಸಿ, ಪಾಲಿಕೆ ಆಯುಕ್ತರಿಗೆ ಮಹತ್ವದ ಸಲಹೆ ನೀಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರು ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ (ADEO) ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಪ್ರಮುಖ ಸಭೆ ನಡೆಯಿತು. ಸಭೆಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಲವಾರು ಆಕ್ಷೇಪಣೆಗಳನ್ನು ಎತ್ತಿದರು. ಸರಿಪಡಿಸುವಂತೆ ಸಲಹೆಗಳನ್ನು ನೀಡಿ ವಿನಂತಿಸಿದರು.

GBA Election 2026

ಮತದಾರರ ನೊಂದಣಿ (ನಮೂನೆ-6), ಪರಿಶೀಲನೆ

18 ವರ್ಷ ತುಂಬಿದ ಹೊಸ ಮತದಾರರಿಗೆ ನಮೂನೆ-6 ಅನ್ನು ವಿತರಿಸಲಾಗುತ್ತಿದೆ. ನಕಲಿ ಮತದಾನ ತಡೆಗಟ್ಟಲು, 25 ವರ್ಷ ಮೇಲ್ಪಟ್ಟವರು ಸಲ್ಲಿಸುವ ನಮೂನೆ-6 ಅರ್ಜಿಗಳನ್ನು ಕಟ್ಟುನಿಟ್ಟಾಗಿ ಮರುಪರಿಶೀಲನೆ (Cross-check) ನಡೆಸುವಂತೆ ಅವರು ಪಾಲಿಕೆಗೆ ಕೋರಿದರು.

ಇದರೊಂದಿಗೆ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ತಲುಪಿಲ್ಲ ಎಂದು ರಾಜಕೀಯ ಪಕ್ಷಗಳು ಕಳವಳ ವ್ಯಕ್ತಪಡಿಸಿದವು. ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಧ್ವನಿವರ್ಧಕಗಳ ಮೂಲಕ ಪ್ರಕಟಣೆ ಮಾಧ್ಯಮ ಜಾಹೀರಾತು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಾಪಕ ಪ್ರಚಾರ ನೀಡಲಾಗುವುದು. ಮತದಾರರ ಪಟ್ಟಿಯನ್ನು ಈಗಾಗಲೇ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಮತಗಟ್ಟೆ ಸ್ಥಳಾಂತರಕ್ಕೆ ಪಟ್ಟು, ದಿನಾಂಕ ವಿಸ್ತರಣೆಗೆ ಪಟ್ಟು

ಆಡುಗೋಡಿ ವ್ಯಾಪ್ತಿಯಲ್ಲಿ ಮತಗಟ್ಟೆಗಳನ್ನು 2 ಕಿ.ಮೀ ಗಿಂತ ಹೆಚ್ಚು ದೂರಕ್ಕೆ ಸ್ಥಳಾಂತರಿಸಿರುವ ಬಗ್ಗೆ ಸಾರ್ವಜನಿಕರಿಂದ ಅಹವಾಲು ಬಂದಿವೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೋರಿದರು ಹಾಗೂ ಸನ್ ಸಿಟಿ ಅಪಾರ್ಟ್ಮೆಂಟ್ ನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಯನ್ನು ಸ್ಥಳಾಂತರ ಮಾಡುವಂತೆ ಮನವಿ ಮಾಡಿದರು. ಮಾತ್ರವಲ್ಲದೇ ಆಕ್ಷೇಪಣೆ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿ ರಾಜ್ಯ ಚುನಾವಣಾ ಯೋಗಕ್ಕೆ ಪತ್ರ ಬರೆಯಲು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಒಕ್ಕೊರಲಿನ ಮನವಿ ಮಾಡಿದರು.

ವಾರ್ಡ್ ಕಚೇರಿಗಳಲ್ಲಿ ಮಾಹಿತಿ

ಮತದಾರರ ಪಟ್ಟಿಯನ್ನು ಆಯಾ ವಾರ್ಡ್ ಕಚೇರಿಗಳಲ್ಲಿ ಸಾರ್ವಜನಿಕರ ವೀಕ್ಷಣೆಗೆ ಲಭ್ಯ ಇರಿಸುವಂತೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿವರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕೆಂದು ಕೇಳಿಕೊಂಡರು. ಅಸಿಂಧು ಮತಗಳನ್ನು ತಡೆಗಟ್ಟಲು ಬ್ಯಾಲೆಟ್ ಪೇಪರ್ ಮತದಾನದ ಕೈಪಿಡಿಗಳನ್ನು ವಿತರಿಸಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾಕ್ ಪೋಲ್ (Mock Polls) ನಡೆಸಲು ವಿನಂತಿಸಿಕೊಂಡರು. ಅವರ ಮನವಿಗಳಿಗೆ ಪಾಲಿಕೆ ಅಧಿಕಾರಿಗಳು ಸ್ಪಂದಿಸಿದರು.

ಅಪರ ಜಿಲ್ಲಾ ಚುನಾವಣಾಧಿಕಾರಿಗಳ ಭರವಸೆ

ಎಲ್ಲಾ ಮತಗಟ್ಟೆಗಳ ವಿವರಗಳ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ಒದಗಿಸಲಾಗುವುದು. ರಾಜಕೀಯ ಪಕ್ಷಗಳ ಪ್ರತಿನಿಧಿಗಳು ನೀಡಿರುವಂತಹ ಆಕ್ಷೇಪಣೆಗಳು ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಹಾಗೂ ರಾಜ್ಯ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ತಮ್ಮ ವಾರ್ಡ್ ಕಚೇರಿ ಅಥವಾ ಅಧಿಕೃತ ವೆಬ್‌ಸೈಟ್ ಮೂಲಕ ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಅವರು ಮನವಿ ಮಾಡಿಕೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+