GBA Election: ಕರಡು ಮತದಾರರ ಪಟ್ಟಿ ಪ್ರಕಟ- ಒಟ್ಟು 88.91 ಮತದಾರರು, ಆಕ್ಷೇಪಣೆಗೆ ಆಹ್ವಾನ
ಬೆಂಗಳೂರು: ಬಿಬಿಎಂಪಿ ವಿಭಜನೆ ಬಳಿಕ ಐದು ನಗರ ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ಚುನಾವಣೆ ನಡೆಯಲಿದೆ. ಅದರ ಭಾಗವಾಗಿ ಐದು ನಗರ ಪಾಲಿಕೆಗಳ ವಾರ್ಡ್ವಾರು ಕರಡು ಮತದಾರರ ಪಟ್ಟಿಯು ಸೋಮವಾರ ಬಿಡುಗಡೆ ಆಗಿದೆ. ಒಟ್ಟು 88,91,411 ಮತದಾರರಿದ್ದಾರೆ ಎಂದು ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಆರ್. ರಾಮಚಂದ್ರನ್ ಅವರು ತಿಳಿಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್ಗಳು ರಚನೆಯಾಗಿವೆ. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ 1 ಅಕ್ಟೋಬರ್ 2025ರ ಆಧಾರವಾಗಿ ಪರಿಗಣಿಸಿ ಸಿದ್ಧಪಡಿಸಲಾದ ಕರಡು ಮತದಾರರ ಪಟ್ಟಿ ಇದಾಗಿದೆ. ಇದರಲ್ಲಿ ಒಟ್ಟು 45,69,193 ಪುರುಷರು, 43,20,583 ಮಹಿಳಾ ಮತದಾರರು ಇದ್ದಾರೆ. 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,91,411 ಮತದಾರರು ಇದ್ದಾರೆ ಎಂದು ಅವರು ವಿವರಿಸಿದರು.

ಫೆಬ್ರವರಿ 3ರೊಳಗೆ ಹಕ್ಕು, ಆಕ್ಷೇಪಣೆಗಳಿದ್ದರೆ ಸಲ್ಲಿಸಿ
2026 ಜನವರಿ 20ರಿಂದ ಫೆಬ್ರವರಿ 3, 2026 ರವರೆಗೆ ಬೂತ್ ಲೆವಲ್ ಅಧಿಕಾರಿಗಳು (ಬಿ.ಎಲ್.ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆಬ್ರವರಿ 4 ರಿಂದ ಫೆಬ್ರವರಿ 18 ರವರೆಗೆ ನಡೆಯಲಿದೆ. ಮಾರ್ಚ್ 16 ರಂದು ಮತದಾರರ ಅಂತಿಮ ಪಟ್ಟಿ ಬಿಡುಗಡೆ ಆಗಲಿದೆ ಎಂದರು.
ವಾರ್ಡ್ 23ರಲ್ಲಿ ಅತ್ಯಧಿಕ ಮತದಾರರು
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 23 ರಲ್ಲಿ ಅತೀ ಹೆಚ್ಚು 49,530 ಮತದಾರರಿದ್ದಾರೆ. ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 16 ರಲ್ಲಿ ಅತಿ ಕಡಿಮೆ 10,926 ಮತದಾರರು ಇದ್ದಾರೆ. ಒಟ್ಟು 369 ವಾರ್ಡ್ಗಳಲ್ಲಿ 8,044 ಮತಗಟ್ಟೆಗಳು ಇರಲಿವೆ ಎಂದು ಮಾಹಿತಿ ನೀಡಿದರು.

ಜಿಬಿಎ ವೆಬ್ ಸೈಟ್ನಲ್ಲಿ ಮತದಾರರ ಪಟ್ಟಿ
ವಾರ್ಡ್ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ https://gba.karnataka.gov.in/home ನಲ್ಲಿ ಪಿಡಿಎಫ್ ಆವೃತ್ತಿಯಾಗಿ ಪ್ರಕಟಿಸಲಾಗುವುದು. ಸಾರ್ವಜನಿಕರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರಿರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ತಪ್ಪುಗಳಿದ್ದರೆ, ಆಕ್ಷೇಪಣೆಗಳಿದ್ದರೆ ಅಧಿಕಾರಿಗಳನ್ನು ಸಂಪರ್ಕಿಸಬೇಕು.
ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆಗಳು ಈ ಕೆಳಗಿನಂತಿವೆ:
1. ಬೆಂಗಳೂರು ಕೇಂದ್ರ : 080-22975803
2. ಬೆಂಗಳೂರು ಉತ್ತರ : 080-22975936
3. ಬೆಂಗಳೂರು ದಕ್ಷಿಣ : 9480685704
4. ಬೆಂಗಳೂರು ಪೂರ್ವ : 9480685706
5. ಬೆಂಗಳೂರು ಪಶ್ಚಿಮ : 9480685703
ನಮೂನೆಗಳ ಮೂಲಕ ಅರ್ಜಿ ಸಲ್ಲಿಕೆ
ಗ್ರೇಟರ್ ಬೆಂಗಳೂರು ಆಡಳಿತ (ಮತದಾರರ ನೋಂದಣಿ) ನಿಯಮಗಳು, 2025 ರಂತೆ ವಾರ್ಡ್ವಾರು ಮತದಾರರ ಪಟ್ಟಿ ಸಿದ್ಧತೆಗೆ, ಆಯೋಗದಿಂದ ನೇಮಕಗೊಂಡ ಮತದಾರರ ನೋಂದಣಾಧಿಕಾರಿ / ಸಹಾಯಕ ಮತದಾರರ ನೋಂದಣಾಧಿಕಾರಿ / ಬಿ.ಎಲ್.ಓ ಅವರ ಬಳಿ ನಿಗಧಿತ ನಮೂನೆಗಳಲ್ಲಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು.
1. ನಮೂನೆ-4 : ಮತದಾರರ ಹೆಸರು ಸೇರ್ಪಡೆಗೆ
2. ನಮೂನೆ-5 : ಹೆಸರು ಸೇರ್ಪಡೆಗೆ ಆಕ್ಷೇಪಣೆ
3. ನಮೂನೆ-6 : ಹೆಸರು ತಿದ್ದುಪಡಿಗೆ
4. ನಮೂನೆ-7 : ಸ್ಥಳ ಬದಲಾವಣೆಗೆ
5. ನಮೂನೆ-8 : ಹೆಸರು ತೆಗೆದುಹಾಕಲು
ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್ ಸಂಗ್ರೇಶಿ ಅವರು ಮಾತನಾಡಿ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಮಾಡುವ ಸಲುವಾಗಿ ಇಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ. ಹೆಸರಿಲ್ಲದಿದ್ದರೆ ಕೂಡಲೆ ನೂಮನೆಯ ಮೂಲಕ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವ ಅವಕಾಶವಿದೆ. 18 ವರ್ಷಗಳಾದ ಎಲ್ಲರೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಲು ತಿಳಿಸಿದರು.
ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆ
ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡ್ನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ಗಳನ್ನು (BLA) ನೇಮಿಸಿ, ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಅವರು ಕೋರಿದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications