ಬೆಂಗಳೂರಲ್ಲಿ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆ ನಿರ್ಮಿಸಲು ಜಾಗ ಗುರುತಿಸುವುದಕ್ಕೆ ಮುಂದಾದ ಜಿಬಿಎ
ಬೆಂಗಳೂರು: ಬೆಂಗಳೂರಿನ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು ಮುಂದಾಗಿವೆ.
ಬೆಂಗಳೂರಿನ ಬಸವನಗುಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆಯನ್ನು ನಿರ್ಮಿಸಿ ಜಾರಿಗೆ ತರಲು ಸೂಕ್ತ ಜಾಗಗಳನ್ನು ಗುರುತಿಸುವಂತೆ ನಗರ ಪಾಲಿಕೆ ಆಯುಕ್ತರಾದ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ವಿಧಾನಸಭಾ ವ್ಯಾಪ್ತಿಯ ವಾರ್ಡ್‌ಗಳಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ವೇಳೆ ಮಾತನಾಡಿದ್ದಾರೆ. ಪೇ ಅಂಡ್ ಪಾರ್ಕಿಂಗ್ ವ್ಯವಸ್ಥೆಯಿಂದ ಸಂಚಾರ ದಟ್ಟಣೆ ನಿವಾರಿಸುವುದರ ಜೊತೆಗೆ ನಗರ ಪಾಲಿಕೆಗೆ ಆದಾಯದ ಮೂಲವಾಗಲಿದೆ ಎಂದು ಹೇಳಿದ್ದಾರೆ.

ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್‌ಗಳ ತೆರವಿಗೆ ಸೂಚನೆ: ಬೆಂಗಳೂರಿನ ಈ ಭಾಗದ ಅನಧಿಕೃತ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಅಳವಡಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ಸಾರ್ವಜನಿಕರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದಕ್ಕೆ ಆದ್ಯತೆ ನೀಡುವಂತೆ ಹಾಗೂ ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇ - ಖಾತಾ ಪ್ರಕ್ರಿಯೆ ಸರಳೀಕರಣ ಮತ್ತು ತ್ವರಿತ ವಿತರಣೆ: ಇ-ಖಾತಾ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ ಇ-ಖಾತಾ ವಿತರಿಸುವಂತೆ ಕಂದಾಯ ವಿಭಾಗದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಖಾಲಿ ಜಾಗಗಳಲ್ಲಿ ಕಸ ಎಸೆಯುವವರನ್ನು ಗುರುತಿಸಿ ದಂಡ ವಸೂಲಿ ಮಾಡಬೇಕೆಂದು ಹಾಗೂ ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ನಿರ್ಧರಿಸಲಾದ ಪ್ರಮುಖ ಕ್ರಮಗಳು
1. ಸೂಕ್ತ ನಿಯಮಾನುಸಾರ ಟ್ರೇಡ್ ಲೈಸನ್ಸ್ ನೀಡುವಿಕೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸೂಚಿಸಿದರು.
2. ರಸ್ತೆ ಸುರಕ್ಷತೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ.
3. ಉದ್ಯಾನವನಗಳಲ್ಲಿ ಅಳವಡಿಸಿರುವ ಪರಿಕರಗಳ ದುರಸ್ತಿ ಕೈಗೊಳ್ಳಲು ಹಾಗೂ ಒಣಗಿರುವ ಗಿಡಗಳನ್ನು ಗುರುತಿಸಿ ತೆರವು ಮಾಡಲು ನಿರ್ದೇಶನ.
4. ರಸ್ತೆ ಬದಿಗಳಲ್ಲಿರುವ ಅಪಾಯಕರ ಮರ / ಕೊಂಬೆಗಳನ್ನು ಗುರುತಿಸಿ ಅಗತ್ಯವಿದ್ದಲ್ಲಿ ಕತ್ತರಿಸಿ, ನಂತರ ಸ್ಥಳವನ್ನು ಸಮರ್ಪಕವಾಗಿ ಸ್ವಚ್ಛಗೊಳಿಸಲು ಸೂಚನೆ.
5. ಮಳೆ ಮುಂಜಾಗ್ರತಾ ದೃಷ್ಟಿಯಿಂದ ರಾಜಕಾಲುವೆ ಸ್ವಚ್ಛತಾ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳಲು ಸೂಚಿಸಿದ್ದಾರೆ.
6. ರಸ್ತೆಗಳಲ್ಲಿ ಅಗತ್ಯವಿರುವ ವಿದ್ಯುತ್ ದೀಪಗಳ ವ್ಯವಸ್ಥೆ ಮತ್ತು ಸಮರ್ಪಕ ನಿರ್ವಹಣೆಗೆ ಕ್ರಮ ತೆಗೆದುಕೊಳ್ಳಲು ಸೂಚನೆ.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Bengaluru Karaga: ಬೆಂಗಳೂರು ಕರಗ ಮಹೋತ್ಸವ ಅವಧಿಯಲ್ಲಿ 12 ದಿನಗಳಲ್ಲಿ 455 ಟನ್ ತ್ಯಾಜ್ಯ ವಿಲೇವಾರಿ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ











Click it and Unblock the Notifications