Get Updates
Get notified of breaking news, exclusive insights, and must-see stories!

GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್

GBA: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕೈಗೊಳ್ಳುವ ಸಲುವಾಗಿ ಸುತ್ತೋಲೆಯ ಮೂಲಕ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಐದು ನಗರ ಪಾಲಿಕೆಗಳಿಗೆ ಸೂಚನೆ ನೀಡಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ಮಳೆಯ ಸಮಯದಲ್ಲಿ ಯಾವುದೇ ತೊಂದರೆ ಅಥವಾ ಪ್ರವಾಹ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಾವಶ್ಯಕವಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಐದು ನಗರ ಪಾಲಿಕೆಗಳು ಹಾಗೂ ಕಾಮಗಾರಿಗಳ ಉಸ್ತುವಾರಿ ವಹಿಸಿರುವ ವಿಭಾಗಗಳು ತಮ್ಮ ವ್ಯಾಪ್ತಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ನಗರದ ಐದು ಪಾಲಿಕೆಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧಿತ ಜವಾಬ್ದಾರಿ ಆಯಾ ಪಾಲಿಕೆಗಳ ಆಯುಕ್ತರಿಗೆ ಸೇರಿದೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮಳೆಗಾಲಕ್ಕೂ ಮುನ್ನ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.

GBA

ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಶ್ವತ ಪರಿಹಾರ

ಜಿಬಿಎ ವ್ಯಾಪ್ತಿಯಲ್ಲಿ ಈ ಹಿಂದೆ ಗುರುತಿಸಲಾಗಿದ್ದ 209 ಪ್ರವಾಹ ಪೀಡಿತ ಪ್ರದೇಶಗಳ ಪೈಕಿ, 2025ನೇ ಸಾಲಿನಲ್ಲಿ 49 ಪ್ರದೇಶಗಳು ಪ್ರವಾಹ ಪೀಡಿತ ಪ್ರದೇಶಗಳಾಗಿ ಗುರುತಿಸಲ್ಪಟ್ಟಿವೆ. ಸದರಿ 49 ಪ್ರದೇಶಗಳ ಪಟ್ಟಿಯ (ಅನುಬಂಧ-1) ಅನುಸಾರ, ಪ್ರವಾಹ ತಡೆಗಟ್ಟಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿ ಶಾಶ್ವತ ಪರಿಹಾರ ಒದಗಿಸಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು.

ಶಾಶ್ವತ ಪರಿಹಾರ ಒದಗಿಸದ ಪ್ರದೇಶಗಳಲ್ಲಿ, ನಗರ ಪಾಲಿಕೆಗಳ ಮುಖ್ಯ ಎಂಜಿನಿಯರರು ಜಿಬಿಎ ಯೋಜನಾ ಅನುಷ್ಠಾನ ಘಟಕದ ಮುಖ್ಯ ಎಂಜಿನಿಯರರೊಂದಿಗೆ ಸಮನ್ವಯ ಸಾಧಿಸಿ ಮಳೆಯ ಸಮಯದಲ್ಲಿ ಯಾವುದೇ ತೊಂದರೆ ಅಥವಾ ಪ್ರವಾಹ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲಾ ನಗರ ಪಾಲಿಕೆಗಳ ಅಪರ ಆಯುಕ್ತರು ಮೇಲ್ವಿಚಾರಣೆ ವಹಿಸಿ, ಈ 49 ಪ್ರದೇಶಗಳಿಗೆ ಕೈಗೊಂಡ/ಕೈಗೊಳ್ಳಲಿರುವ ಕ್ರಮಗಳ ಕುರಿತು ವರದಿ ಸಲ್ಲಿಸಬೇಕು ಎಂದು ಹೇಳಲಾಗಿದೆ.

GBA: ರಾಜಕಾಲುವೆ ಕಾಮಗಾರಿ ಪೂರ್ಣಗೊಳಿಸಿ

ಯೋಜನಾ ಅನುಷ್ಠಾನ ಘಟಕದ ಅಧಿಕಾರಿಗಳು ನಗರ ಪಾಲಿಕೆಗಳೊಂದಿಗೆ ಸಮನ್ವಯ ಸಾಧಿಸಿ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆದ್ಯತೆಯ ಮೇರೆಗೆ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಎಲ್ಲ ರಸ್ತೆಗಳ ಮಳೆ ನೀರು ಚರಂಡಿಗಳಲ್ಲಿ ಏಪ್ರಿಲ್ ಅಂತ್ಯದೊಳಗೆ ಹೂಳು ತೆಗೆದು ಸ್ವಚ್ಛಗೊಳಿಸಬೇಕು. ಪ್ರಸ್ತುತ CMIDP ಮತ್ತು SIP ಯೋಜನೆಗಳಡಿಯಲ್ಲಿ ಅನುಮೋದನೆಗೊಂಡ ಟೆಂಡರ್‌ಗಳಡಿ ಆರಂಭಗೊಂಡ ಕಾಮಗಾರಿಗಳಲ್ಲಿ ಆದ್ಯತೆಯ ಮೇರೆಗೆ ಹೂಳು ತೆಗೆಯುವ ಕಾರ್ಯವನ್ನು ನಿರ್ವಹಿಸಿ, ಶೋಲ್ಡರ್ ಡ್ರೈನ್‌ಗಳ ನಿರ್ಮಾಣವನ್ನು ಪೂರ್ಣಗೊಳಿಸಬೇಕು ಎಂದು ಹೇಳಲಾಗಿದೆ.

ಉಳಿದ ರಸ್ತೆಗಳಲ್ಲಿ ರಸ್ತೆ ನಿರ್ವಹಣಾ ತಂಡಗಳ ಮೂಲಕ ಹೂಳು ತೆಗೆಯುವ ಕಾರ್ಯವನ್ನು ಕೈಗೊಳ್ಳಬೇಕು. ಚರಂಡಿಗಳಲ್ಲಿ ಹೂಳು ತೆಗೆಯುವಾಗ ಹತ್ತಿರದ ರಾಜಕಾಲುವೆವರೆಗೆ ಸಂಪರ್ಕ ಕಲ್ಪಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮವಹಿಸಬೇಕು. ಹೂಳು ತೆಗೆಯುವ ಸಂದರ್ಭದಲ್ಲಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸದೇ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಉಸ್ತುವಾರಿ ಎಂಜಿನಿಯರರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ನಿಯಂತ್ರಣ ಕೊಠಡಿಗಳಿಗೆ ಅಧಿಕಾರಿಗಳನ್ನು ನಿಯೋಜನೆ

ವಿಪತ್ತು ನಿರ್ವಹಣಾ ತಂಡಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಮಳೆಗಾಲ ಆರಂಭವಾಗುವ ಮುನ್ನ ನಗರ ಪಾಲಿಕೆಗಳ ನಿಯಂತ್ರಣ ಕೊಠಡಿಗಳಿಗೆ ಪಾಲಿಕೆ, ಬೆಸ್ಕಾಂ ಹಾಗೂ ಜಲಮಂಡಳಿ ಅಧಿಕಾರಿಗಳನ್ನು ನಿಯೋಜಿಸಲು ಕ್ರಮವಹಿಸಬೇಕು. ಇದರ ಜೊತೆಗೆ ಎಸ್‌ಡಿಆರ್‌ಎಫ್ (SDRF) ಮತ್ತು ಎನ್‌ಡಿಆರ್‌ಎಫ್ (NDRF) ಅಧಿಕಾರಿಗಳ ಪಟ್ಟಿಯನ್ನೂ ಸಿದ್ಧಪಡಿಸಬೇಕು ಎಂದು ತಿಳಿಸಲಾಗಿದೆ.

ಕಳೆದ ವರ್ಷ ಗೆದ್ದಲಹಳ್ಳಿ ರೈಲ್ವೆ ವೆಂಟ್ ಕಿರಿದಾಗಿದ್ದ ಕಾರಣ ಸಾಯಿ ಲೇಔಟ್‌, ಪೈ ಲೇಔಟ್‌ ಮತ್ತು ಹೆಚ್‌ಬಿಆರ್ ಲೇಔಟ್ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿತ್ತು. ಸದರಿ ರೈಲ್ವೆ ಮಾರ್ಗದಲ್ಲಿ ಹೆಚ್ಚುವರಿ ವೆಂಟ್‌ಗಳ ನಿರ್ಮಾಣ ನಡೆಯುತ್ತಿದ್ದು, ಕಾಮಗಾರಿಯನ್ನು ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು.
ನಗರ ಪಾಲಿಕೆಗಳು ತಮ್ಮ ವ್ಯಾಪ್ತಿಯ ಅಗ್ನಿಶಾಮಕ ಠಾಣೆಗಳು ಹಾಗೂ SDRF ತಂಡಗಳೊಂದಿಗೆ ಸಮನ್ವಯ ಸಾಧಿಸಿ, ಅಧಿಕಾರಿಗಳು/ಸಿಬ್ಬಂದಿಗಳ ಪಟ್ಟಿಯನ್ನು ಸಂಗ್ರಹಿಸಿ ತುರ್ತು ಸಂದರ್ಭಗಳಲ್ಲಿ ನೆರವು ದೊರೆಯುವಂತೆ ಕ್ರಮವಹಿಸಬೇಕು ಎಂದು ನಿರ್ದೇಶಿಸಲಾಗಿದೆ.

ಮರ ತೆರವು ತಂಡಗಳನ್ನು ರಚನೆ

ಬೆಂಗಳೂರಿನಲ್ಲಿ ಮಳೆಯಿಂದಾಗಿ ಧರೆಗುರುಳುವ ಮರಗಳು ಹಾಗೂ ರೆಂಬೆ-ಕೊಂಬೆಗಳನ್ನು ತ್ವರಿತವಾಗಿ ತೆರವುಗೊಳಿಸಲು ನಗರ ಪಾಲಿಕೆ ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚಿಸಬೇಕು. ನಾಗರಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆಯನ್ನು ಕಲ್ಪಿಸಬೇಕು. ಮುನ್ನೆಚ್ಚರಿಕೆಯಾಗಿ ಬಾಗಿರುವ ಅಥವಾ ಬೀಳುವ ಸ್ಥಿತಿಯಲ್ಲಿರುವ ಕೊಂಬೆಗಳನ್ನು ಮುಂಚಿತವಾಗಿ ತೆರವುಗೊಳಿಸಬೇಕು ಎಂದು ಹೇಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+