Gba: ಬೆಂಗಳೂರಿನ ಪೌರಕಾರ್ಮಿಕರಿಗೆ ಜಿಬಿಎ ಗುಡ್‌ನ್ಯೂಸ್ ಕೊಟ್ಟ ಸಚಿವ ಕೃಷ್ಣಬೈರೇಗೌಡ

ಬೆಂಗಳೂರಿನ ಪೌರಕಾರ್ಮಿಕರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡಲಾಗಿದೆ. ಇದರೊಂದಿಗೆ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ವಿಭಜನೆ ಮಾಡುವ ಮನೋಭಾವಕ್ಕೆ ಅವಕಾಶ ನೀಡದೆ, ಎಲ್ಲರೂ ಸಮಾನರು ಎಂಬ ಮಾನವತಾ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹನೀಯರಿಗೆ ನಿಜವಾದ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಅಭಿಪ್ರಾಯಪಟ್ಟರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ರಾಜ್‌ಕುಮಾರ್ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಪೌರಕಾರ್ಮಿಕರ ದಿನಾಚರಣೆ 2026 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದಕ್ಕೂ ಮುಂಚಿತವಾಗಿ ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಅರ್ಪಿಸಿದರು.

Gba

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡರು, ಡಾ. ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತವಾದವರಲ್ಲ. ಎಲ್ಲಾ ಸಮುದಾಯಗಳ ಏಳಿಗೆಗೆ ಅಭ್ಯುದಯಕ್ಕೆ ಬೆಳಕಾದವರು. ಮಾನವತಾ ಧರ್ಮವನ್ನು ಪ್ರಬಲವಾಗಿ ನಂಬಿದವರು. ಬುದ್ಧನ ಕಾಲದಿಂದಲೇ ನಮ್ಮ ದೇಶದಲ್ಲಿ ಮಾನವ ಧರ್ಮದ ಪರಂಪರೆ ಜೀವಂತವಾಗಿದೆ. ಒಂದೇ ಗಾಳಿ, ನೀರು ಸೇವಿಸುವ ಎಲ್ಲಾ ಮನುಷ್ಯರೂ ಒಂದೇ ಎಂಬ ಅರಿವು ನಮ್ಮಲ್ಲಿರಬೇಕು ಎಂದು ಹೇಳಿದರು.

ಬಸವಣ್ಣ, ಮಹಾತ್ಮ ಗಾಂಧೀಜಿ ಹಾಗೂ ಕುವೆಂಪು ಸೇರಿದಂತೆ ಅನೇಕ ಮಹನೀಯರು ಮಾನವತಾ ಧರ್ಮ ಮತ್ತು ಸಮಾನತೆಯ ಸಂದೇಶವನ್ನು ಪ್ರತಿಪಾದಿಸಿದ್ದಾರೆ. ಆದರೆ ಇಂದಿಗೂ ಸಮಾಜದಲ್ಲಿ ಸಂಪೂರ್ಣ ಸಮಾನತೆ ಸಾಧ್ಯವಾಗಿಲ್ಲ. ನಾವುಗಳು ಸಮಾನತೆಯ ಬದುಕನ್ನು ಸಾಧ್ಯವಾಗಿಸದೆ ಕೇವಲ ಅಂಬೇಡ್ಕರ್ ಅವರ ಮೂರ್ತಿಗೆ ಹೂಮಾಲೆ ಹಾಕಿ ಜೈಕಾರ ಕೂಗಿದರೆ ಗೌರವ ಸಲ್ಲಿಸಿದಂತಾಗುವುದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ಮೇಲು-ಕೀಳು ಎಂಬ ಮನೋಭಾವವನ್ನು ಸಮಾಜದಿಂದ ಸಂಪೂರ್ಣವಾಗಿ ತೊಡೆದುಹಾಕಬೇಕು. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸುವ ಪ್ರಯತ್ನಗಳಿಗೆ ಅವಕಾಶ ನೀಡಬಾರದು. ಎಲ್ಲರೂ ಸಮಾನರು ಎಂಬ ಮೌಲ್ಯವನ್ನು ನಿಜವಾಗಿ ಅಳವಡಿಸಿಕೊಂಡಾಗಲೇ ನಾವು ಸಮಾನತೆಯ ಸಮಾಜ ನಿರ್ಮಾಣ ಮಾಡಬಹುದು ಎಂದು ಸಚಿವರು ಹೇಳಿದರು.

Gba: ಪೌರಕಾರ್ಮಿಕರಿಗೆ ಗುಡ್‌ನ್ಯೂಸ್

ಇನ್ನು ಪೌರಕಾರ್ಮಿಕರ ಕುಂದುಕೊರತೆಗಳು ಮತ್ತು ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಗಮನಕ್ಕೆ ತಂದು, ಅವುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು. ಜಿಬಿಎ ಹಾಗೂ ಐದು ನಗರ ಪಾಲಿಕೆಗಳು ಒಟ್ಟಾಗಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಹಾಗೂ ಪೌರಕಾರ್ಮಿಕರ ದಿನಾಚರಣೆಯನ್ನು ಆಚರಿಸುತ್ತಿವೆ ಎಂದು ತಿಳಿಸಿದರು. ಜವಾಬ್ದಾರಿ ವಹಿಸಿಕೊಂಡ ತಕ್ಷಣವೇ ಕಾರ್ಯಕ್ರಮ ಆಯೋಜಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಎಸ್ಐಆರ್ ಪ್ರಕ್ರಿಯೆಯ ಕಾರಣದಿಂದ ಆಚರಣೆ ವಿಳಂಬವಾಗಿದ್ದು, ಇದೀಗ ಆದ್ಯತೆಯ ಮೇರೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಪಿ. ರಘು, ರಾಜ್ಯ ಸಫಾಯಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುರಳಿ ಅಶೋಕ್ ಸಾಲಪ್ಪ, ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ನಿತೀಶ್, ನಗರ ಪಾಲಿಕೆಗಳ ಆಯುಕ್ತರಾದ ರಮೇಶ್ ಡಿ.ಎಸ್, ಪೊಮ್ಮಲ ಸುನೀಲ್ ಕುಮಾರ್, ಜಿ. ಜಗದೀಶ್, ಡಾ. ರಾಜೇಂದ್ರ ಕೆ.ವಿ, ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಸಿಇಓ ಕರೀಗೌಡ ಹಾಗೂ ಪೌರಕಾರ್ಮಿಕರು ಸೇರಿದಂತೆ ಹಲವರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+