Gba: "ನಮ್ಮೂರ ಹೆಮ್ಮೆ" ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ಜಿಬಿಎ

Gba: 'ನಮ್ಮೂರ ಹೆಮ್ಮೆ' ಸಾಧಕ ವಿದ್ಯಾರ್ಥಿಗಳಿಗೆ ಪೌರ ಸನ್ಮಾನ ಕಾರ್ಯಕ್ರಮದ ಅರ್ಜಿ ಸಲ್ಲಿಕೆ ಅವಧಿಯನ್ನು ಆಗಸ್ಟ್ 26ರವರೆಗೆ ವಿಸ್ತರಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರತಿಭಾವಂತ ಯುವಕರು ನಮ್ಮೂರ ಹೆಮ್ಮೆ ಹಾಗೂ ಸಮಾಜದ ಆಸ್ತಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಹಾಗೂ ಬೆಂಗಳೂರು ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ 'ನಮ್ಮೂರ ಹೆಮ್ಮೆ' ಪೌರ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಎಸ್‌ಎಸ್‌ಎಲ್‌ಸಿಯಲ್ಲಿ 621 ಅಥವಾ ಅದಕ್ಕಿಂತ ಹೆಚ್ಚು ಅಂಕ, ಪಿಯುಸಿಯಲ್ಲಿ 596 ಅಥವಾ ಅದಕ್ಕಿಂತ ಹೆಚ್ಚು ಅಂಕ ಹಾಗೂ ಸೆಂಟ್ರಲ್ ಸಿಲಬಸ್‌ನ 10ನೇ ಮತ್ತು 12ನೇ ತರಗತಿಯಲ್ಲಿ 496 ಅಥವಾ ಅದಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಅರ್ಹರಾಗಿರುತ್ತಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ನೀಡಿರುವ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ಸಂಬಂಧಪಟ್ಟ ಶಾಲೆ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಣ ಪಡೆದು, ವಿದ್ಯಾರ್ಥಿಗಳು ಅಥವಾ ಪೋಷಕರು ಆಗಸ್ಟ್ 26, 2026ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

Gba

ಅರ್ಜಿಯನ್ನು ಹಿರಿಯ ಸಹಾಯಕ ನಿರ್ದೇಶಕರು (ಶಿಕ್ಷಣ), ಜಿಬಿಎ ಕೇಂದ್ರ ಕಚೇರಿ, ಎನ್.ಆರ್. ಚೌಕ, ಬೆಂಗಳೂರು-02, ಅನೆಕ್ಸ್-3, 3ನೇ ಕಟ್ಟಡ, 3ನೇ ಮಹಡಿ ಇಲ್ಲಿ ಖುದ್ದಾಗಿ ಅಥವಾ [email protected] ಇ-ಮೇಲ್ ಮೂಲಕ ಸಲ್ಲಿಸಬಹುದು. 'ನಮ್ಮೂರ ಹೆಮ್ಮೆ' ಪೌರ ಸನ್ಮಾನ ಕಾರ್ಯಕ್ರಮವನ್ನು ಆಗಸ್ಟ್ 29, 2026ರಂದು ಆಯೋಜಿಸಲಾಗಿದೆ.

ಜಿಬಿಎ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಲಭ್ಯ

ಅರ್ಹ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಕೆಳಗಿನ ಲಿಂಕ್ ಅಥವಾ ಕ್ಯೂಆರ್ ಕೋಡ್ ಮೂಲಕ ಡೌನ್‌ಲೋಡ್ ಮಾಡಿಕೊಂಡು, ನಿಯಮಾನುಸಾರ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

37 ಖಾಲಿ ನಿವೇಶನದಾರರಿಗೆ ನೋಟಿಸ್: 24 ಗಂಟೆಯೊಳಗೆ ಸ್ವಚ್ಛತೆಗೆ ಸೂಚನೆ

24 ಗಂಟೆಯೊಳಗೆ ಬೆಂಗಳೂರಿನ ಖಾಲಿ ನಿವೇಶನದಾರರಿಗೆ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ಪಾಲಿಕೆಯ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಿಯಮ ಪಾಲಿಸದಿದ್ದಲ್ಲಿ ಪಾಲಿಕೆಯಿಂದಲೇ ಸ್ವಚ್ಛಗೊಳಿಸಿ, ವೆಚ್ಚವನ್ನು ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ ಪಾಲಿಕೆಯ ವ್ಯಾಪ್ತಿಯಲ್ಲಿರುವ ಅನೈರ್ಮಲ್ಯದಿಂದ ಕೂಡಿರುವ ಖಾಲಿ ನಿವೇಶನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ 37 ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ಮಾರ್ಗದರ್ಶನದಲ್ಲಿ, ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳನ್ನು ಸ್ವಚ್ಛ ಹಾಗೂ ಆರೋಗ್ಯಕರ ಸ್ಥಿತಿಯಲ್ಲಿ ನಿರ್ವಹಿಸುವದಕ್ಕೆ ಸಂಬಂಧಿಸಿದಂತೆ, ಈಗಾಗಲೇ ಕಾರ್ಯಾಚರಣೆ ಕೈಗೊಂಡಿದ್ದು, ಖಾಲಿ ನಿವೇಶನದಾರರಿಗೆ ಇಂದು ನೋಟಿಸ್ ಜಾರಿ ಮಾಡಲಾಗಿದೆ.

ಘನತ್ಯಾಜ್ಯ ನಿರ್ವಹಣಾ ಉಪ-ನಿಯಮಗಳು, 2020ರ ಉಪ-ನಿಯಮ 18(1)(b) ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ ಸೆಕ್ಷನ್ 274(1), 285(2) ಮತ್ತು 290ರ ಅನ್ವಯ, ಖಾಲಿ ನಿವೇಶನಗಳಲ್ಲಿ ಸಂಗ್ರಹವಾಗಿರುವ ಕಸ, ಕಳೆಗಿಡಗಳು ಹಾಗೂ ನಿರ್ಮಾಣ ತ್ಯಾಜ್ಯವನ್ನು 24 ಗಂಟೆಯೊಳಗಾಗಿ ತೆರವುಗೊಳಿಸಿ, ನಿಗದಿಪಡಿಸಿದ ಸ್ಥಳದಲ್ಲಿ ಸೂಕ್ತವಾಗಿ ವಿಲೇವಾರಿ ಮಾಡುವಂತೆ ಆಸ್ತಿ ಮಾಲೀಕರಿಗೆ ಸೂಚಿಸಲಾಗಿದೆ.

ನೋಟಿಸ್ ನೀಡಿರುವ 37 ನಿವೇಶನಗಳ ಮಾಲೀಕರು ನಿಗದಿತ 24 ಗಂಟೆಗಳ ಅವಧಿಯಲ್ಲಿ ತಮ್ಮ ನಿವೇಶನಗಳನ್ನು ಸ್ವಚ್ಛಗೊಳಿಸಬೇಕು. ಮಾಲೀಕರು ಸ್ವತಃ ನಿವೇಶನವನ್ನು ಸ್ವಚ್ಛಗೊಳಿಸಿದಲ್ಲಿ, ಯಾವುದೇ ಮುಂದಿನ ಕ್ರಮ ಅಗತ್ಯವಿರುವುದಿಲ್ಲ.

24 ಗಂಟೆಯೊಳಗೆ ಸ್ವಚ್ಛಗೊಳಿಸದಿದ್ದಲ್ಲಿ ಪಾಲಿಕೆಯಿಂದಲೇ ತೆರವು

ನಿಗದಿತ ಅವಧಿಯೊಳಗೆ ಸಂಬಂಧಿಸಿದ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ, ಬೆಂಗಳೂರು ಉತ್ತರ ನಗರ ಪಾಲಿಕೆಯ ವತಿಯಿಂದಲೇ ಅಗತ್ಯ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಕಸ, ಕಳೆಗಿಡಗಳು ಹಾಗೂ ನಿರ್ಮಾಣ ತ್ಯಾಜ್ಯವನ್ನು ಪಾಲಿಕೆಯ ವತಿಯಿಂದ ತೆರವುಗೊಳಿಸಿ, ನಿವೇಶನವನ್ನು ಸ್ವಚ್ಛಗೊಳಿಸಲಾಗುವುದು. ಈ ಕಾರ್ಯಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಿಸಿದ ಆಸ್ತಿ ಮಾಲೀಕರ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು. ಈ ಕ್ರಮವು ಖಾಲಿ ನಿವೇಶನಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಅನೈರ್ಮಲ್ಯದ ತಾಣಗಳಾಗಿ ಪರಿವರ್ತನೆಯಾಗುವುದನ್ನು ತಡೆಯುವ ಉದ್ದೇಶವನ್ನು ಹೊಂದಿದೆ.

ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛ, ಆರೋಗ್ಯಕರ ಹಾಗೂ ಸುಸ್ಥಿರ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಖಾಲಿ ನಿವೇಶನಗಳ ಮಾಲೀಕರು ಪಾಲಿಕೆಯೊಂದಿಗೆ ಸಹಕರಿಸಿ, ತಮ್ಮ ನಿವೇಶನಗಳನ್ನು ನಿಯಮಿತವಾಗಿ ಸ್ವಚ್ಛವಾಗಿ ಹಾಗೂ ಕಸಮುಕ್ತವಾಗಿ ನಿರ್ವಹಿಸುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+