GBA Election: ಇಂದು ಮತದಾರರ ಕರಡು ಪಟ್ಟಿ ಸಿದ್ದ; ಜನವರಿ ಅಂತ್ಯಕ್ಕೆ ಫೈನಲ್ ಲಿಸ್ಟ್! ಯಾವ ವರ್ಗಕ್ಕೆ ಎಷ್ಟು ಮೀಸಲು?
ಬೆಂಗಳೂರು: ಬಹು ದಿನಗಳಿಂದ ಕಾಯುತ್ತಿದ್ದ ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಮುಹೂರ್ತ ನಿಗದಿ ಪಡಿಸಲು ರಾಜ್ಯ ಸರ್ಕಾರವು ಮುಂದೆಜ್ಜೆ ಇಟ್ಟಿದೆ. ಈಗಾಗಲೇ ಜೂನ್ 30 ರೊಳಗೆ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಕಟ್ಟುನಿಟ್ಟಿನ ಸೂಚನೆ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ಜನವರಿ 19 ರೊಳಗೆ, ವಾರ್ಡ್‌ವಾರು ಮತದಾರರ ಕರಡು ಪಟ್ಟಿಯನ್ನು ಅಂತಿಮಗೊಳಿಸಿದೆ.
ಈ ಬಗ್ಗೆ ತಿಳಿಸಿರುವ ವರದಿ ಪ್ರಕಾರ, 369 ವಾರ್ಡ್‌ಗಳ ಪ್ರತ್ಯೇಕ ಮತದಾರರ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗಿದೆ. ಎಸ್‌ಇಸಿಯ ಪರಿಷ್ಕೃತ ವೇಳಾಪಟ್ಟಿಯ ಅಂದಾಜಿನಲ್ಲಿ, ಬೆಂಗಳೂರು ನಗರದ ಐದು ಪಾಲಿಕೆಗಳ ಚುನಾವಣೆಗೆ ಅರ್ಹತೆ ಪಡೆದ ಮತದಾರರ ಪರಿಷ್ಕೃತ ಪಟ್ಟಿ ಪ್ರಕ್ರಿಯೆಯನ್ನು ಇಂದು ಪೂರ್ಣಗೊಳಿಸಲಿದೆ ಎಂದು ನಿರೀಕ್ಷಿಸಲಾಗಿದೆ. ಮತದಾರರ ಪಟ್ಟಿ ಪೂರ್ಣಗೊಂಡ ನಂತರ, ಜಿಬಿಎ ಮನೆ-ಮನೆ ಪರಿಶೀಲನೆ, ಹಕ್ಕುಗಳು ಮತ್ತು ಆಕ್ಷೇಪಣೆಗಳ ವಿಲೇವಾರಿ ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸುತ್ತದೆ. ವಾರ್ಡ್‌ವಾರು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆಯನ್ನು ಮಾರ್ಚ್ 16 ರಂದು ನಿಗದಿಪಡಿಸಲಾಗಿದೆ.

ಜಿಬಿಎ ವ್ಯಾಪ್ತಿಯ 369 ವಾರ್ಡ್‌ಗಳ ಮೀಸಲಾತಿ ಕರಡು ಪಟ್ಟಿಯನ್ನು ನಗರಾಭಿವೃದ್ಧಿ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ಮೂಲಕ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದ ಪ್ರಕ್ರಿಯೆ ಮತ್ತೊಂದು ಹಂತ ತಲುಪಿದ್ದು, ಚುನಾವಣೆ ನಡೆಯುವ ನಿರೀಕ್ಷೆಗೆ ಹೊಸ ವೇಗ ಸಿಕ್ಕಂತಾಗಿದೆ.
ಇನ್ನೂ ಈ ಕರಡು ಮೀಸಲಾತಿ ಪಟ್ಟಿಗೆ ಸಾರ್ವಜನಿಕ ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶವನ್ನು ಜಿಬಿಎ ನೀಡಿದೆ. ಆಸಕ್ತ ನಾಗರಿಕರು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ತಮ್ಮ ಆಕ್ಷೇಪಣೆಗಳನ್ನು ಜನವರಿ 21ರ ಸಂಜೆ 5.30 ಗಂಟೆಯೊಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆಗಳ ಪರಿಶೀಲನೆಯ ಬಳಿಕ ಜನವರಿ ಕೊನೆಯ ವೇಳೆಗೆ ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಪ್ರಕಟಿಸಿದ ಕರಡು ಪಟ್ಟಿಯ ಪ್ರಕಾರ, ಒಟ್ಟು 369 ವಾರ್ಡ್‌ಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ. ಇದರಲ್ಲಿ ಮಹಿಳಾ ಮೀಸಲಾತಿ, ಎಸ್‌ಸಿ/ಎಸ್‌ಟಿ, ಹಿಂದುಳಿದ ವರ್ಗಗಳು ಹಾಗೂ ಸಾಮಾನ್ಯ ವರ್ಗಗಳ ಅನುಪಾತದ ಆಧಾರದಲ್ಲಿ ಈ ಮೀಸಲಾತಿ ಮಾಡಲಾಗಿದೆ. ಈ ಪ್ರಕ್ರಿಯೆ ಸಂವಿಧಾನಾತ್ಮಕ ಮಾರ್ಗಸೂಚಿಗಳು ಹಾಗೂ ಸರ್ಕಾರದ ನಿಯಮಾವಳಿಗಳನ್ನು ಅನುಸರಿಸಿ ರೂಪಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಸ್ಪಷ್ಟಪಡಿಸಿದೆ. ಇತ್ತ ಜಿಬಿಎ ವ್ಯಾಪ್ತಿಯಲ್ಲಿ ವಾರ್ಡ್ ವಿಂಗಡಣೆ, ಗಡಿ ಗುರುತಿಸುವಿಕೆ ಹಾಗೂ ಭೌಗೋಳಿಕ ಪುನರ್ ರಚನೆ ಕಾರ್ಯಗಳು ಪೂರ್ಣಗೊಂಡಿದ್ದವು. ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವುದು ಮಾತ್ರ ಬಾಕಿ ಇತ್ತು. ಇದೀಗ ಆ ಹಂತವೂ ಮುಗಿದಿರುವುದರಿಂದ ಚುನಾವಣೆ ಘೋಷಣೆ ಶೀಘ್ರವೇ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು












Click it and Unblock the Notifications