Get Updates
Get notified of breaking news, exclusive insights, and must-see stories!

GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ವವಾರು ಪರೀಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 88,92,528 ಮತದಾರರು ಇದ್ದಾರೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 10 ರಿಂದ 16ನೇ ಮಾರ್ಚ್ 2026 ರವರೆಗೆ ಅವಕಾಶ ಇರಲಿದ್ದು, 6ನೇ ಏಪ್ರಿಲ್ 2026 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಮಹೇಶ್ವರ್ ರಾವ್ ಅವರು ಮಾಹಿತಿ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಮಾರ್ಚ್ 9ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು. ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು ಮಾಡಿ ಇಂದು ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.

GBA Polls

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 45,69,752 ಪುರುಷರು, 43,21,143 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,92,528 ಮತದಾರರು ಇದ್ದು, 8,024 ಮತಟ್ಟೆಗಳು ಬರಲಿವೆ.

ಬೆಂಗಳೂರಲ್ಲಿ 1010 ಆಸ್ತಿದಾರರಿಂದ 33.89 ಕೋಟಿ ರೂ. ಆಸ್ತಿ ತೆರಿಗೆ ಬಾಕಿ: ಆಸ್ತಿದಾರರಿಗೆ ಜಿಬಿಎ ಫೈನಲ್ ವಾರ್ನಿಂಗ್
ಬೆಂಗಳೂರಲ್ಲಿ 1010 ಆಸ್ತಿದಾರರಿಂದ 33.89 ಕೋಟಿ ರೂ. ಆಸ್ತಿ ತೆರಿಗೆ ಬಾಕಿ: ಆಸ್ತಿದಾರರಿಗೆ ಜಿಬಿಎ ಫೈನಲ್ ವಾರ್ನಿಂಗ್

ಜಿಬಿಎ ವ್ಯಾಪ್ತಿಯಲ್ಲಿ ಒಟು 369 ವಾರ್ಡ್‌ಗಳ ಪೈಕಿ ಬೆಂಗಳೂರು ದಕ್ಷಿಣ ನಗರಪಾಲಿಕೆಯ ವಾರ್ಡ್ ಸಂಖ್ಯೆ 51-ಸುಭ್ರಮಣ್ಯ ಪುರ ಅತಿ ಹೆಚ್ಚು 54,026 ಮತದಾರರು ಇದ್ದಾರೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 16-ಕೊತ್ತೂರು ಅತಿ ಕಡಿಮೆ 10,940 ಮತದಾರರನ್ನು ಇದ್ದಾರೆ. ಮತದಾರರ ಪಟ್ಟಿ ಸಿದ್ಧಪಡಿಸುವಿಕೆಯ ಕಾರ್ಯಕ್ರಮದ ವೇಳಾ ಪಟ್ಟಿಯಂತೆ 10-03-2026 ರಿಂದ 16-03-2026 ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾಗಿದ್ದಲ್ಲಿ ಅಥವಾ ಮತ್ತೊಂದು ವಾರ್ಡ್ ವ್ಯಾಪ್ತಿಯಲ್ಲಿ ಹೆಸರು ಪ್ರಕಟವಾಗಿದ್ದಲ್ಲಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.

ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿರುವ ಕುರಿತು ಸಾರ್ವಜನಿಕರು / ಮತದಾರರಿಗೆ ಮಾಧ್ಯಮದ (ಮುದ್ರಣ ಮತ್ತು ದೃಶ್ಯ) ಮುಖೇನ ಮಾಹಿತಿಯನ್ನು ನೀಡಲು ಮತ್ತು ಒಟ್ಟಾರೆ ದೋಷರಹಿತ ಅಂತಿಮ ಮತದಾರರ ಪಟ್ಟಿಯನ್ನು ಸಿದ್ದಪಡಿಸಿ 6ನೇ ಏಪ್ರಿಲ್ 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.

ವೆಬ್ ಸೈಟ್‌ನಲ್ಲಿ ಮತದಾರರ ಪಟ್ಟಿ

ಮತದಾರರು ವಾರ್ಡ್‌ವಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಎಪಿಕ್ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಬಿಎಸ ಅಧಿಕೃತ ಜಾಲತಾಣ https://gba.karnataka.gov.in/home ರಲ್ಲಿ ಪಿ.ಡಿ.ಎಫ್. ಆವೃತ್ತಿಯನ್ನು ಅಪ್ಲೋಡ್ ಮಾಡಲಾಗುವುದು. ಸಾರ್ವಜನಿಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಮಹೇಶ್ವರ್‌ ರಾವ್ ಅವರು ಹೇಳಿದ್ದಾರೆ.

Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್‌ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್‌
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್‌ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್‌

ನಗರ ಪಾಲಿಕೆವಾರು ಮತದಾರರ ಸಹಾಯವಾಣಿ

ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆ ವಿವರ ಇಲ್ಲಿದೆ.

1. ಬೆಂಗಳೂರು ಕೇಂದ್ರ : 080-22975803

2. ಬೆಂಗಳೂರು ಉತ್ತರ : 080-22975936

3. ಬೆಂಗಳೂರು ದಕ್ಷಿಣ : 9480685704

4. ಬೆಂಗಳೂರು ಪೂರ್ವ : 9480685706

5. ಬೆಂಗಳೂರು ಪಶ್ಚಿಮ : 9480685703

ಬೂತ್ ಲೆವಲ್ ಏಜೆಂಟ್ (BLA) ನೇಮಕ

ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡ್‌ನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ (BLA) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡಲು ಮನವಿ ಮಾಡಿದ್ದಾರೆ. ಮತದಾರರ ಪಟ್ಟಿಯನ್ನು ಮತದಾರರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗೆ ಮತದಾರರ ನೊಂದಣಾಧಿಕಾರಿಗಳ ಕಚೇರಿ, ವಾರ್ಡ್ ಕಚೇರಿಗಳಲ್ಲಿ ವೀಕ್ಷಣೆಗೆ ಅಥವಾ ಪರಿಶೀಲನೆಗೆ ಅವಕಾಶವನ್ನು ಸಹ ಕಲ್ವಿಸಲಾಗಿದೆ.

ಧ್ವನಿವರ್ಧಕಗಳ ಮೂಲಕ ಜಾಗೃತಿ: ಘನತ್ಯಾಜ್ಯ ನಿಗಮದ ವತಿಯಿಂದ ಮನೆ ಮನೆ ಕಸ ಸಂಗ್ರಹಣೆ ಮಾಡುವ ಆಟೋಗಳಲ್ಲಿನ ಧ್ವನಿವರ್ಧಕಗಳ ಮೂಲಕ ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಕುರಿತು ಪ್ರತಿ ಪಾಲಿಕೆಯಲ್ಲೂ ಪ್ರಚಾರ ಮಾಡಲಾಗುವುದು. ಅದರ ಜೊತೆಗೆ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಎಕ್ಸ್ ಖಾತೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ಮಹೇಶ್ವರ್ ರಾವ್ ಅವರು ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+