GBA Polls: ಬೆಂಗಳೂರಿನ 5 ಪಾಲಿಕೆಗಳ ಮತದಾರರ ಪಟ್ಟಿ ಪ್ರಕಟ: ಮತದಾರರ ಪಟ್ಟಿ ಪರಿಶೀಲನೆ ಮಾಡುವ ವಿಧಾನ ಇಲ್ಲಿದೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್ವವಾರು ಪರೀಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 88,92,528 ಮತದಾರರು ಇದ್ದಾರೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು 10 ರಿಂದ 16ನೇ ಮಾರ್ಚ್ 2026 ರವರೆಗೆ ಅವಕಾಶ ಇರಲಿದ್ದು, 6ನೇ ಏಪ್ರಿಲ್ 2026 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ ಎಂದು ಮಹೇಶ್ವರ್ ರಾವ್ ಅವರು ಮಾಹಿತಿ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಮಾರ್ಚ್ 9ರಂದು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಅವರು ಮಾತನಾಡಿದರು. ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು ಮಾಡಿ ಇಂದು ಪರಿಷ್ಕೃತ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.

ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 05 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡಗಳು ರಚನೆಯಾಗಿದೆ. ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ 45,69,752 ಪುರುಷರು, 43,21,143 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,92,528 ಮತದಾರರು ಇದ್ದು, 8,024 ಮತಟ್ಟೆಗಳು ಬರಲಿವೆ.
ಜಿಬಿಎ ವ್ಯಾಪ್ತಿಯಲ್ಲಿ ಒಟು 369 ವಾರ್ಡ್‌ಗಳ ಪೈಕಿ ಬೆಂಗಳೂರು ದಕ್ಷಿಣ ನಗರಪಾಲಿಕೆಯ ವಾರ್ಡ್ ಸಂಖ್ಯೆ 51-ಸುಭ್ರಮಣ್ಯ ಪುರ ಅತಿ ಹೆಚ್ಚು 54,026 ಮತದಾರರು ಇದ್ದಾರೆ. ಬೆಂಗಳೂರು ಪೂರ್ವ ನಗರಪಾಲಿಕೆಯ ವಾರ್ಡ್ ಸಂಖ್ಯೆ 16-ಕೊತ್ತೂರು ಅತಿ ಕಡಿಮೆ 10,940 ಮತದಾರರನ್ನು ಇದ್ದಾರೆ. ಮತದಾರರ ಪಟ್ಟಿ ಸಿದ್ಧಪಡಿಸುವಿಕೆಯ ಕಾರ್ಯಕ್ರಮದ ವೇಳಾ ಪಟ್ಟಿಯಂತೆ 10-03-2026 ರಿಂದ 16-03-2026 ರವರೆಗೆ ಹಕ್ಕುಗಳು ಮತ್ತು ಆಕ್ಷೇಪಣೆಗಳು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಪರಿಷ್ಕೃತ ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವಾಗಿದ್ದಲ್ಲಿ ಅಥವಾ ಮತ್ತೊಂದು ವಾರ್ಡ್ ವ್ಯಾಪ್ತಿಯಲ್ಲಿ ಹೆಸರು ಪ್ರಕಟವಾಗಿದ್ದಲ್ಲಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಿಳಿಸಿದೆ.
ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಪ್ರಚುರಪಡಿಸಿರುವ ಕುರಿತು ಸಾರ್ವಜನಿಕರು / ಮತದಾರರಿಗೆ ಮಾಧ್ಯಮದ (ಮುದ್ರಣ ಮತ್ತು ದೃಶ್ಯ) ಮುಖೇನ ಮಾಹಿತಿಯನ್ನು ನೀಡಲು ಮತ್ತು ಒಟ್ಟಾರೆ ದೋಷರಹಿತ ಅಂತಿಮ ಮತದಾರರ ಪಟ್ಟಿಯನ್ನು ಸಿದ್ದಪಡಿಸಿ 6ನೇ ಏಪ್ರಿಲ್ 2026 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಆಯುಕ್ತರು ಹೇಳಿದ್ದಾರೆ.
ವೆಬ್ ಸೈಟ್‌ನಲ್ಲಿ ಮತದಾರರ ಪಟ್ಟಿ
ಮತದಾರರು ವಾರ್ಡ್‌ವಾರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಆನ್‌ಲೈನ್‌ನಲ್ಲಿ ಎಪಿಕ್ ಸಂಖ್ಯೆ ಅಥವಾ ಅವರ ಹೆಸರಿನ ಮೂಲಕ ಹುಡುಕಲು ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಜಿಬಿಎಸ ಅಧಿಕೃತ ಜಾಲತಾಣ https://gba.karnataka.gov.in/home ರಲ್ಲಿ ಪಿ.ಡಿ.ಎಫ್. ಆವೃತ್ತಿಯನ್ನು ಅಪ್ಲೋಡ್ ಮಾಡಲಾಗುವುದು. ಸಾರ್ವಜನಿಕರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಬಗ್ಗೆ ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.
ನಗರ ಪಾಲಿಕೆವಾರು ಮತದಾರರ ಸಹಾಯವಾಣಿ
ಮತದಾರರ ಪಟ್ಟಿಗಳ ಪರಿಷ್ಕರಣೆಯ ವೇಳಾಪಟ್ಟಿಯ ಕುರಿತು ವ್ಯಾಪಕ ಪ್ರಚಾರಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಕರಡು ಮತದಾರರ ಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ವಿತರಿಸಲಾಗುತ್ತಿದೆ. ಮತದಾರರ ಅನುಕೂಲಕ್ಕಾಗಿ ಐದು ನಗರ ಪಾಲಿಕೆಗಳ ಸಹಾಯವಾಣಿ ಸಂಖ್ಯೆ ವಿವರ ಇಲ್ಲಿದೆ.
1. ಬೆಂಗಳೂರು ಕೇಂದ್ರ : 080-22975803
2. ಬೆಂಗಳೂರು ಉತ್ತರ : 080-22975936
3. ಬೆಂಗಳೂರು ದಕ್ಷಿಣ : 9480685704
4. ಬೆಂಗಳೂರು ಪೂರ್ವ : 9480685706
5. ಬೆಂಗಳೂರು ಪಶ್ಚಿಮ : 9480685703
ಬೂತ್ ಲೆವಲ್ ಏಜೆಂಟ್ (BLA) ನೇಮಕ
ನೋಂದಾಯಿತ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡ್‌ನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್ (BLA) ನೇಮಕಾತಿ ಮಾಡಿ ಮತಗಟ್ಟೆ ಅಧಿಕಾರಿಗಳಿಗೆ ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಸಹಕಾರ ನೀಡಲು ಮನವಿ ಮಾಡಿದ್ದಾರೆ. ಮತದಾರರ ಪಟ್ಟಿಯನ್ನು ಮತದಾರರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗೆ ಮತದಾರರ ನೊಂದಣಾಧಿಕಾರಿಗಳ ಕಚೇರಿ, ವಾರ್ಡ್ ಕಚೇರಿಗಳಲ್ಲಿ ವೀಕ್ಷಣೆಗೆ ಅಥವಾ ಪರಿಶೀಲನೆಗೆ ಅವಕಾಶವನ್ನು ಸಹ ಕಲ್ವಿಸಲಾಗಿದೆ.
ಧ್ವನಿವರ್ಧಕಗಳ ಮೂಲಕ ಜಾಗೃತಿ: ಘನತ್ಯಾಜ್ಯ ನಿಗಮದ ವತಿಯಿಂದ ಮನೆ ಮನೆ ಕಸ ಸಂಗ್ರಹಣೆ ಮಾಡುವ ಆಟೋಗಳಲ್ಲಿನ ಧ್ವನಿವರ್ಧಕಗಳ ಮೂಲಕ ಪರೀಷ್ಕೃತ ಕರಡು ಮತದಾರರ ಪಟ್ಟಿ ಪ್ರಚುರಪಡಿಸಿರುವ ಕುರಿತು ಪ್ರತಿ ಪಾಲಿಕೆಯಲ್ಲೂ ಪ್ರಚಾರ ಮಾಡಲಾಗುವುದು. ಅದರ ಜೊತೆಗೆ ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್ ಮತ್ತು ಎಕ್ಸ್ ಖಾತೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ಮಹೇಶ್ವರ್ ರಾವ್ ಅವರು ಮಾಹಿತಿ ನೀಡಿದ್ದಾರೆ.
-
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ












Click it and Unblock the Notifications