ಡಿ.21ರಿಂದ ಪಲ್ಸ್ ಪೋಲಿಯೋ ಅಭಿಯಾನ 2025: ಬೂತ್‌ಗಳ ಪತ್ತೆಗೆ ಕ್ಯೂಆರ್ ಕೋಡ್, ಲಿಂಕ್ ಬಿಡುಗಡೆ: ಜಿಬಿಎ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶೇ.100 ರಷ್ಟು ಗುರಿ ಸಾಧಿಸುವ ಉದ್ದೇಶದೊಂದಿಗೆ ಡಿಸೆಂಬರ್ 21ರಿಂದ ಪಲ್ಸ್ ಪೋಲಿಯೋ ಅಭಿಯಾನ 2025 ಆರಂಭವಾಗಲಿದೆ. ಜಿಬಿಎ ವ್ಯಾಪ್ತಿ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಬೇಕು. ಅದಕ್ಕಾಗಿ ಪೋಷಕರಿಗೆ ಬೂತ್‌ಗಳನ್ನು ಹುಡುಕುವ ಚಿಂತೆ ದೂರ ಮಾಡಿರುವ ಜಿಬಿಎ ಅಧಿಕಾರಿಗಳು ಕ್ಯೂಆರ್ ಕೋಡ್ (QR) ಮತ್ತು ಜಾಲತಾಣದ ಲಿಂಕ್ ಬಿಡುಗಡೆ ಮಾಡಿದ್ದಾರೆ.
ಡಿಸೆಂಬರ್ 21 ರಿಂದ ಡಿಸೆಂಬರ್ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಜರುಗಲಿದೆ. ಇದಕ್ಕಾಗಿ ಜಿಬಿಎ ನವೀನ ಚಿಂತನೆ ಹೊರ ತಂದಿದೆ. ಸಾರ್ವಜನಿಕ ಆರೋಗ್ಯ ಇಲಾಖೆಯ ಮೂಲಕ ಜಿಬಿಎ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೆ ಮುಂದಾಗಿದೆ.

ನವೀನ ಚಿಂತನೆಯ ಭಾಗವಾಗಿ ಜಿಬಿಎ ಸಮೀಪದ ಪಲ್ಸ್ ಪೋಲಿಯೋ ಲಸಿಕೆ ಕೇಂದ್ರವನ್ನು ಪತ್ತೆಹಚ್ಚಲು ಸಹಾಯಕವಾಗಲೆಂದು ಕ್ಯೂಆರ್ ಕೋಡ್ ವ್ಯವಸ್ಥೆ ಪರಿಚಯಿಸಿದೆ. ಈ QR ಕೋಡ್ ಅನ್ನು GBA ವೆಬ್‌ಸೈಟ್‌ನಲ್ಲಿ https://gba.karnataka.gov.in/polio/ ಅಪ್ ಲೋಡ್ ಮಾಡಲಾಗಿದೆ. ನಗರದ ಪೋಷಕರು ಮತ್ತು ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಹತ್ತಿರದ ಕೇಂದ್ರವನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ. ತಪ್ಪದೇ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬಹುದಾಗಿದೆ.
ನಾಲ್ಕು ದಿನಗಳ ಈ ಕಾರ್ಯಕ್ರಮದಲ್ಲಿ ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಎರಡು ಹನಿ ಪಲ್ಸ್ ಪೋಲಿಯೋ ಲಸಿಕೆ ನೀಡುವುದು ಸರ್ಕಾರದ ಮುಖ್ಯ ಉದ್ದೇಶ. ಯೋಜನಾ ಘಟಕಗಳು (UPHCಗಳು) ರೋಟರಿ ಕ್ಲಬ್, ಲಯನ್ಸ್ ಕ್ಲಬ್, WHO, ಯುನಿಸೆಫ್, UNDP ಹಾಗೂ ಇತರ ಸ್ವಯಂ ಸೇವಾ ಸಂಸ್ಥೆಗಳ (NGO) ಸಹಕಾರದಿಂದ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಒಟ್ಟು 28 ಲಕ್ಷಕ್ಕೂ ಅಧಿಕ ಮನೆಗಳು ಇವೆ. 2700ಕ್ಕೂ ಅಧಿಕ ಅಪಾರ್ಟ್ಮೆಂಟ್‌ಗಳು ಇವೆ. ಎಲ್ಲ ಕಡೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ತಲುಪಲು 145 ಯೋಜನಾ ಘಟಕಗಳಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ. ಜಿಬಿಎ ವ್ಯಾಪ್ತಿಯ ಬೂತ್‌ಗಳು, ಮಕ್ಕಳು, ಜನಸಂಖ್ಯೆ, ಸಿಬ್ಬಂದಿ, ತಂಡಗಳ ವಿವರ, ಅಂಕಿ ಸಂಖ್ಯೆ ಇಲ್ಲಿದೆ.
ಪೋಲಿಯೋ ಅಭಿಯಾನದ ವ್ಯಾಪ್ತಿ ಹೀಗಿದೆ
* ಒಟ್ಟು ಮನೆಗಳು: 28,38,822
* 0-5 ವರ್ಷದ ಮಕ್ಕಳ ಸಂಖ್ಯೆ : 11,34,588
* ಒಟ್ಟು ಲಸಿಕೆ ಕೇಂದ್ರಗಳು (ಬೂತ್‌ಗಳು) : 4,452
* ಸ್ಥಿರ ಬೂತ್‌ಗಳು : 3,391
* ಟ್ರಾನ್ಸಿಟ್ ತಂಡಗಳು : 601
* ಮೊಬೈಲ್ ತಂಡಗಳು : 460
* ಒಟ್ಟು ಲಸಿಕೆದಾರರು : 17,808
* ಒಟ್ಟು ಮೇಲ್ವಿಚಾರಕರು : 881
* ಸ್ಲಂ ಪ್ರದೇಶಗಳ ಸಂಖ್ಯೆ : 1,349
* ಸ್ಲಂ ಪ್ರದೇಶಗಳಲ್ಲಿನ 0-5 ವರ್ಷದ ಮಕ್ಕಳು : 4,69,849
* ವಲಸೆ ಜನಸಂಖ್ಯೆ ಇರುವ ಸ್ಥಳಗಳು : 4,373
* ವಲಸೆ ಜನಸಂಖ್ಯೆ : 1,61,161
* ವಲಸೆ ಮಕ್ಕಳ ಸಂಖ್ಯೆ (0-5 ವರ್ಷ) : 11,899
ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – 2025 ಅನ್ನು ಡಿಸೆಂಬರ್ 21ರಿಂದ 24, 2025ರವರೆಗೆ ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ.
— Greater Bengaluru Authority (@GBA_office) December 20, 2025
ಜೀವದ ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ.
ನಿಮ್ಮ ಹತ್ತಿರದ… pic.twitter.com/RNwNbRuX1M
ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಲ್ಲಾ ಪೋಷಕರು, ಪಾಲಕರು ಹಾಗೂ ಸಮುದಾಯದ ಸದಸ್ಯರಿಗೆ ಈ ರಾಷ್ಟ್ರೀಯ ಆರೋಗ್ಯ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಕರೆ ನೀಡಲಾಗಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಶೇ.100 ಲಸಿಕೆ ಗುರಿ ಸಾಧಿಸುವಲ್ಲಿ ಹಾಗೂ ಪೋಲಿಯೋ ಮುಕ್ತ ಭಾರತ ಹೆಸರು ಉಳಿಸಿಕೊಳ್ಳುವಲ್ಲಿ ಸಹಕರಿಸುವಂತೆ ಜಿಬಿಎ ಮನವಿ ಮಾಡಿದೆ.
ಪೋಲಿಯೋ ಮುಕ್ತ ಭಾರತ: ವಿಶ್ವಸಂಸ್ಥೆ
ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಆರೋಗ್ಯವಂತ ಮಕ್ಕಳು ರಾಷ್ಟ್ರದ ಆಸ್ತಿ. ಪೋಲಿಯೋ ರೋಗವು ಸಾಮಾನ್ಯವಾಗಿ ಐದು ವರ್ಷದೊಳಗಿನ ಮಕ್ಕಳನ್ನು ಹೆಚ್ಚಾಗಿ ಕಾಡುತ್ತದೆ. ಇಂತಹ ನಿರಂತರ ಅಭಿಯಾನಗಳಿಂದಾಗಿ ಭಾರತದಲ್ಲಿ 2011 ರಿಂದ ಯಾವುದೇ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (WHO) ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವೆಂದು ಘೋಷಿಸಿದೆ. ಆದರೆ ಪಕ್ಕದ ದೇಶಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿವೆ. ನಮ್ಮ ಮಕ್ಕಳನ್ನು ಪಲ್ಸ್ ಪೋಲಿಯೋ ಲಸಿಕೆ ಹನಿಗಳ ಮೂಲಕ ರಕ್ಷಿಸುವುದು ನಮ್ಮ ಪ್ರಮುಖ ಜವಾಬ್ದಾರಿಯಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications