GBA: ನಾಳೆ ಫೋನ್-ಇನ್ ಕಾರ್ಯಕ್ರಮ: ಕರೆ ಮಾಡಿ ನೀವು ಪಾಲ್ಗೊಳ್ಳಿ...
ಬೆಂಗಳೂರು, ನವೆಂಬರ್ 09: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ನಾಳೆ ಸೋಮವಾರ ನವೆಂಬರ್ 10ರಂದು ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಂಡಿದೆ. ಪಾಲಿಕೆ ವ್ಯಾಪ್ತಿಯ ನಾಗರಿಕರು ಅಹವಾಲು ಆಲಿಸಿ, ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಪಾಲಿಕೆ ಆಯುಕ್ತರಾದ ರಾಜೇಂದ್ರ ಚೋಳನ್ ಹೇಳಿದರು.
ಸೋಮವಾರ ಸಂಜೆ 6 ಗಂಟೆಯಿಂದ 7 ಗಂಟೆವರೆಗೆ ಗಂಟೆಯವರೆಗೆ ನಾಗರಿಕರು ದೂರವಾಣಿ ಮೂಲಕ ಕರೆ ಮಾಡಿ (ದೂರವಾಣಿ ಸಂಖ್ಯೆ ಲ್ಯಾಂಡ್ ಲೈನ್: 080-22975803) ಆಯುಕ್ತರಲ್ಲಿ ನೇರವಾಗಿ ಕುಂದುಕೊರತೆ, ಅಹಲವಾಲನ್ನು ಸಲ್ಲಿಸಬಹುದು. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶ ಆಯುಕ್ತರು ಹೊಂದಿದ್ದಾರೆ.

ಫೋನ್-ಇನ್ ಕಾರ್ಯಕ್ರಮವನ್ನು ಸಾರ್ವಜನಿಕರಿಂದ ಈ ಕೆಳಕಂಡ ವಿವಿಧ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ದೂರವಾಣಿ ಮೂಲಕ ಅಹವಾಲುಗಳನ್ನು ಸಲ್ಲಿಸಬಹುದು. ಯಾವೆಲ್ಲ ಸಮಸ್ಯೆಗಳು, ಮನವಿ ಮಾಡಿಕೊಳ್ಳಬೇಕೆಂದು ವಿಷಯಗಳ ಪಟ್ಟಿ ಕೊಡಲಾಗಿದೆ.
ಅಹವಾಲು ಸಲ್ಲಿಸಬೇಕಾದ ವಿಷಯಗಳು
* ರಸ್ತೆ ಗುಂಡಿಗಳು ಮತ್ತು ರಸ್ತೆ ದುರಸ್ಥಿ ಕಾರ್ಯಗಳು
* ಬೀದಿ ದೀಪಗಳ ನಿರ್ವಹಣೆ
* ಕಸ ವಿಲೇವಾರಿ
* ಒಣಗಿದ / ಅಪಾಯಕಾರಿ ಮರ/ಕೊಂಬೆಗಳ ಕತ್ತರಿಸುವಿಕೆ
* ಉದ್ಯಾನವನಗಳ ನಿರ್ವಹಣೆ
* ಇ-ಖಾತಾ ಸಂಬಂಧಿತ ವಿಷಯಗಳು
* ಅನಧಿಕೃತ ಬ್ಯಾನರ್/ಪೋಸ್ಟರ್ ಗಳ ತೆರವು
* ಪಾದಚಾರಿ ಮಾರ್ಗದ ನಿರ್ವಹಣೆ ಮತ್ತು ಒತ್ತುವರಿ
* ಚರಂಡಿ ಶುದ್ಧೀಕರಣ
* ನಗರಪಾಲಿಕೆಯಿಂದ ಇನ್ನಿತರೆ ಮೂಲಭೂತ ಸೌಕರ್ಯ ಕಲ್ಪಿಸುವ ಅಹವಾಲುಗಳು
ನಾಗರಿಕರಿಂದ ಸ್ವೀಕೃತವಾಗುವ ಅಹವಾಲುಗಳನ್ನು ಮಾನ್ಯ ಆಯುಕ್ತರು ಖುದ್ದಾಗಿ ಆಲಿಸಿ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ನಿರ್ದೇಶನ ನೀಡಿ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ವಹಿಸಲಾಗುವುದು. ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಪಾಲಿಕೆ ಪ್ರಕಟಣೆ ಮೂಲಕ ಕೋರಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications